Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 113:1 - ಪರಿಶುದ್ದ ಬೈಬಲ್‌

1 ಯೆಹೋವನಿಗೆ ಸ್ತೋತ್ರವಾಗಲಿ! ಯೆಹೋವನ ಸೇವಕರೇ, ಆತನಿಗೆ ಸ್ತೋತ್ರಮಾಡಿರಿ! ಆತನ ಹೆಸರನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನ ನಾಮವನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಲ್ಲೆಲೂಯ I ಪ್ರಭುವಿನ ದಾಸರೇ, ಸ್ತುತಿಮಾಡಿ I ಪ್ರಭುವಿನ ನಾಮಸ್ತುತಿಯನು ಮಾಡಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾಹುವಿಗೆ ಸ್ತೋತ್ರ! ಯೆಹೋವನ ಸೇವಕರೇ, ಸ್ತೋತ್ರಮಾಡಿರಿ; ಯೆಹೋವನಾಮಸ್ತುತಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರ ಸೇವಕರೇ, ಯೆಹೋವ ದೇವರ ಹೆಸರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 113:1
11 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಸೃಷ್ಟಿಯೆಲ್ಲವೂ ನಿನ್ನನ್ನು ಸ್ತುತಿಸುತ್ತವೆ. ನಿನ್ನ ಭಕ್ತರು ನಿನ್ನನ್ನು ಕೊಂಡಾಡುವರು.


ಲೇವಿಯ ಮನೆತನದವರೇ, ಯೆಹೋವನನ್ನು ಕೊಂಡಾಡಿರಿ! ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ.


ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.


ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.


ಆತನ ಸೇವಕರ ಸಂತತಿಗಳವರು ಆ ದೇಶವನ್ನು ಪಡೆದುಕೊಳ್ಳುವರು. ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು.


ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.


ಆಗ ಸಿಂಹಾಸನದಿಂದ ಒಂದು ಧ್ವನಿಯು ಬಂದಿತು. ಆ ಧ್ವನಿಯು, “ನಮ್ಮ ದೇವರ ಸೇವೆ ಮಾಡುವ ಜನರೆಲ್ಲರೇ, ಆತನಿಗೆ ಸ್ತೋತ್ರ ಮಾಡಿರಿ! ನಮ್ಮ ದೇವರಿಗೆ ಗೌರವ ನೀಡುವ ಚಿಕ್ಕವರೇ, ದೊಡ್ಡವರೇ, ಆತನಿಗೆ ಸ್ತೋತ್ರ ಮಾಡಿರಿ!” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು