Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 113:4 - ಪರಿಶುದ್ದ ಬೈಬಲ್‌

4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನಾಗಿದ್ದಾನೆ; ಆತನ ಮಹಿಮೆಯು ಮೇಲೋಕದಲ್ಲಿ ಮೆರೆಯುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಕ್ಕಿಂತಲೂ ಉನ್ನತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸಕಲ ಜಾತಿಜನಾಂಗಗಳಲಿ ಪ್ರಭು ಶ್ರೇಷ್ಠ I ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಎಲ್ಲಾ ಜನಾಂಗಗಳಲ್ಲಿ ಮಹೋನ್ನತನು; ಆತನ ಪ್ರಭಾವವು ಮೇಲಣ ಲೋಕಗಳಲ್ಲಿ ಮೆರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವರು; ಅವರ ಮಹಿಮೆಯು ಆಕಾಶಗಳ ಮೇಲೆ ಮೆರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 113:4
10 ತಿಳಿವುಗಳ ಹೋಲಿಕೆ  

ನಮ್ಮ ಒಡೆಯನಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಅತಿಶಯವಾದದ್ದು. ನಿನ್ನ ಹೆಸರು ಪರಲೋಕದಲ್ಲೆಲ್ಲಾ ನಿನ್ನನ್ನು ಮಹಿಮೆಪಡಿಸುವುದು.


ಚೀಯೋನಿನ ಯೆಹೋವನು ದೊಡ್ಡವನು! ಆತನು ಜನಾಂಗಗಳಿಗೆಲ್ಲಾ ಮಹಾನಾಯಕನಾಗಿದ್ದಾನೆ.


ಮಹೋನ್ನತನಾದ ಯೆಹೋವನೇ, ಭೂಲೋಕದ ಸರ್ವಾಧಿಪತಿ ನೀನೇ. ಎಲ್ಲಾ ದೇವರುಗಳಲ್ಲಿ ನೀನೇ ಮಹೋನ್ನತನು.


ಲೋಕದ ಜನಾಂಗದವರೆಲ್ಲರೂ ಯೆಹೋವನೆದುರು ಏನೂ ಅಲ್ಲ. ಆತನೆದುರು ಎಲ್ಲಾ ಜನಾಂಗದವರು ಏನೂ ಅಲ್ಲ.


ಯೆಹೋವನ ಹೆಸರನ್ನು ಕೊಂಡಾಡಿರಿ! ಆತನ ಹೆಸರನ್ನು ಶಾಶ್ವತವಾಗಿ ಸನ್ಮಾನಿಸಿರಿ! ಭೂಮ್ಯಾಕಾಶಗಳಲ್ಲಿರುವ ಸಮಸ್ತವೇ, ಆತನನ್ನು ಸ್ತುತಿಸು!


ಯೆಹೋವನು ಹೇಳುವುದೇನೆಂದರೆ, “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಹೀಗಿರಲು, ನೀವು ನನಗೊಂದು ಮನೆಯನ್ನು ಕಟ್ಟಲು ಸಾಧ್ಯವೆಂದು ಯೋಚಿಸುವಿರಾ? ವಿಶ್ರಮಿಸಿಕೊಳ್ಳಲು ನೀವು ಸ್ಥಳ ಮಾಡುವಿರಾ? ಇಲ್ಲ, ಸಾಧ್ಯವಿಲ್ಲ!


ಯೆಹೋವನು ಸತ್ಯವಾದ ದೇವರು. ಆತನು ಉನ್ನತವಾದ ಆಕಾಶದಲ್ಲಿ ಕುಳಿತುಕೊಳ್ಳುವನು. ಆತನಿಗೆ ಹೋಲಿಸಿದರೆ ಜನರು ಮಿಡತೆಗಳಂತಿರುವರು. ಆತನು ಬಟ್ಟೆಯಂತೆ ಆಕಾಶಮಂಡಲವನ್ನು ಸುರುಳಿಯಾಗಿ ಸುತ್ತುವನು. ಆಕಾಶಮಂಡಲವನ್ನು ಆತನು ಎಳೆದು ಗುಡಾರದಂತೆ ಅಗಲಮಾಡಿ ಅದರಡಿಯಲ್ಲಿ ಕುಳಿತುಕೊಳ್ಳುವನು.


ಇಗೋ, ಈ ಪ್ರಪಂಚದ ಜನಾಂಗಗಳು ಕೊಡದಲ್ಲಿರುವ ಒಂದು ಹನಿ ನೀರಿನಂತಿವೆ. ದೂರದಲ್ಲಿರುವ ಎಲ್ಲಾ ಜನಾಂಗಗಳನ್ನು ಯೆಹೋವನು ಒಟ್ಟುಗೂಡಿಸಿ ತಕ್ಕಡಿಯಲ್ಲಿ ತೂಗಿದರೆ ಅವು ಧೂಳಿನ ಕಣದಂತಿವೆ.


“ದೇವರೇ, ನೀನು ನಿಜವಾಗಿಯೂ ನಮ್ಮೊಡನೆ ಭೂಲೋಕದಲ್ಲಿ ವಾಸಿಸುವೆಯಾ? ಆಕಾಶವೆಲ್ಲವೂ ಹಾಗೂ ಉನ್ನತೋನ್ನತವಾದ ಪರಲೋಕವೆಲ್ಲವೂ ನಿನ್ನನ್ನು ಹಿಡಿಸಲಾರವು. ಹೀಗಿರಲು, ನಾನು ನಿನಗಾಗಿ ನಿರ್ಮಿಸಿರುವ ಈ ಆಲಯವು ನಿನ್ನ ವಾಸಕ್ಕೆ ಖಂಡಿತವಾಗಿಯೂ ಸಾಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು