Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 115:14 - ಪರಿಶುದ್ದ ಬೈಬಲ್‌

14 ಯೆಹೋವನು ನಿಮ್ಮ ಕುಟುಂಬಗಳನ್ನೂ ನಿಮ್ಮ ಮಕ್ಕಳ ಕುಟುಂಬಗಳನ್ನೂ ಅಭಿವೃದ್ಧಿಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ವೃದ್ಧಿಗೊಳಿಸಲಿ ಪ್ರಭುವು ನಿಮ್ಮನು I ವೃದ್ಧಿಗೊಳಿಸಲಿ ನಿಮ್ಮ ಮಕ್ಕಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿಪಡಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ನಿಮ್ಮನ್ನು ಅಭಿವೃದ್ಧಿಪಡಿಸುವರು ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 115:14
19 ತಿಳಿವುಗಳ ಹೋಲಿಕೆ  

ನಮ್ಮ ಪೂರ್ವಿಕರ ದೇವರಾದ ಯೆಹೋವನು ಈಗ ಇರುವುದಕ್ಕಿಂತ ಸಾವಿರಪಟ್ಟು ಅಧಿಕವಾಗಿ ನಿಮ್ಮ ಜನಸಂಖ್ಯೆಯನ್ನು ಹೆಚ್ಚಿಸಲಿ. ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮನ್ನು ಆಶೀರ್ವದಿಸಲಿ.


ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.


ಆ ಪ್ರವಾದಿಗಳು ಹೇಳಿದ ಸಂಗತಿಗಳನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃಗಳೊಂದಿಗೆ ಮಾಡಿಕೊಂಡ ಒಪ್ಪಂದವನ್ನು ನೀವು ಸ್ವೀಕರಿಸಿಕೊಂಡಿರುವಿರಿ. ದೇವರು ನಿಮ್ಮ ಪಿತೃವಾದ ಅಬ್ರಹಾಮನಿಗೆ, ‘ನಿನ್ನ ಸಂತತಿಯಿಂದ ಭೂಮಿಯ ಮೇಲಿರುವ ಜನರೆಲ್ಲರು ಆಶೀರ್ವಾದ ಹೊಂದುವರು’ ಎಂದು ಹೇಳಿದನು.


ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.


ಆದರೆ ನಾನು ನನ್ನ ಸೇವಕನಾದ ದಾವೀದನಿಗೂ ಲೇವಿಯರಿಗೂ ಅಸಂಖ್ಯಾತ ಸಂತಾನವನ್ನು ಕೊಡುತ್ತೇನೆ. ಅವರು ಆಕಾಶದ ನಕ್ಷತ್ರಗಳಂತೆಯೂ ಸಮುದ್ರದ ತೀರದ ಮರಳಿನಂತೆಯೂ ಅಸಂಖ್ಯಾತರಾಗುವರು.”


ಆದರೆ ಯೋವಾಬನು ರಾಜನಿಗೆ, “ಅಲ್ಲಿ ಎಷ್ಟು ಜನರಿದ್ದಾರೆಂಬುದು ಅಗತ್ಯವಿಲ್ಲ. ನಿನ್ನ ದೇವರಾದ ಯೆಹೋವನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚು ಜನರನ್ನು ದಯಪಾಲಿಸಲಿ! ಈ ಕಾರ್ಯವು ಸಂಭವಿಸುವುದನ್ನು ನಿನ್ನ ಕಣ್ಣುಗಳಿಂದಲೇ ನೋಡು. ಆದರೆ ನೀನು ಈ ಕಾರ್ಯವನ್ನು ಮಾಡಬೇಕೆಂದಿರುವುದೇಕೆ?” ಎಂದು ಕೇಳಿದನು.


ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.


ಬಳಿಕ ನಾನು ನೋಡಿದಾಗ, ಜನರ ಮಹಾಸಮೂಹವನ್ನು ಕಂಡೆನು. ಅವರು ಎಣಿಸಲಾಗದಷ್ಟು ಅಸಂಖ್ಯಾತರಾಗಿದ್ದರು. ಅವರಲ್ಲಿ ಸಕಲ ಜನಾಂಗ, ಕುಲ, ಪ್ರಜೆಗಳವರೂ ಲೋಕದ ಸಕಲ ಭಾಷೆಗಳನ್ನಾಡುವವರೂ ಇದ್ದರು. ಈ ಜನರು ಸಿಂಹಾಸನದ ಮುಂದೆ ಮತ್ತು ಕುರಿಮರಿಯ (ಯೇಸು) ಮುಂದೆ ನಿಂತಿದ್ದರು. ಅವರೆಲ್ಲರೂ ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡು ಖರ್ಜೂರದ ಗರಿಗಳನ್ನು ತಮ್ಮ ಕೈಗಳಲ್ಲಿ ಹಿಡಿದಿದ್ದರು.


ನಂತರ, ಮುದ್ರೆ ಒತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಅವರ ಒಟ್ಟು ಸಂಖ್ಯೆ 1,44,000 ಮಂದಿ. ಅವರು ಇಸ್ರೇಲರ ಹನ್ನೆರಡು ಕುಲಗಳಿಗೆ ಸೇರಿದವರಾಗಿದ್ದರು.


ಆ ಸ್ಥಳಗಳಲ್ಲಿ ಜನರು ಸ್ತೋತ್ರಗೀತೆಗಳನ್ನು ಹಾಡುವರು. ಅಲ್ಲಿ ನಗುವಿನ ಧ್ವನಿಯು ಕೇಳಿಬರುವುದು. ನಾನು ಅವರಿಗೆ ಹಲವಾರು ಮಕ್ಕಳನ್ನು ಕೊಡುವೆನು. ಇಸ್ರೇಲ್ ಮತ್ತು ಯೆಹೂದ ಚಿಕ್ಕವುಗಳಾಗಿರುವದಿಲ್ಲ. ನಾನು ಅವುಗಳಿಗೆ ಗೌರವವನ್ನು ತರುತ್ತೇನೆ. ಯಾರೂ ಅವುಗಳನ್ನು ಕೀಳಾಗಿ ಕಾಣುವದಿಲ್ಲ.


“ನಾನು ಸಿಳ್ಳು ಹೊಡೆದು ಎಲ್ಲರನ್ನು ಒಟ್ಟುಗೂಡಿಸುವೆನು. ನಾನು ನಿಜವಾಗಿಯೂ ಅವರನ್ನು ರಕ್ಷಿಸುವೆನು. ಜನರು ಕಿಕ್ಕಿರಿದು ತುಂಬಿಹೋಗುವರು.


“ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.


ಜನರು ನನ್ನ ಬಳಿಗೆ ಬರುವರು. ಆ ಜನರು ಮುಂದಿನ ಕಾಲದಲ್ಲಿ ಯಾಕೋಬನನ್ನು ಆಳವಾದ ಬೇರುಳ್ಳ ಗಿಡದಂತೆ ಬಲಶಾಲಿಯನ್ನಾಗಿ ಮಾಡುವರು. ಬೆಳೆದು ಹೂಬಿಡುವ ಗಿಡದಂತೆ ಅವರು ಇಸ್ರೇಲಿಗೆ ಮಾಡುವರು. ಹಣ್ಣುಗಳಂತೆ ಇಸ್ರೇಲರ ಮಕ್ಕಳು ಭೂಮಿಯ ಮೇಲೆ ತುಂಬಿಹೋಗುವರು.”


ಇದು ನನ್ನ ಒಡೆಯನಾದ ಯೆಹೋವನ ಮಾತುಗಳು. ಇಸ್ರೇಲ್ ಜನರು ತಮ್ಮ ದೇಶದಿಂದ ಹೊರಗೆ ಹಾಕಲ್ಪಟ್ಟರು. ಆದರೆ ಯೆಹೋವನು ಅವರನ್ನು ಮತ್ತೆ ಬರಮಾಡುತ್ತಾನೆ. ಆತನು, “ಈ ಜನರನ್ನು ನಾನು ಮತ್ತೆ ಒಟ್ಟುಗೂಡಿಸುತ್ತೇನೆ” ಎಂದು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು