ಕೀರ್ತನೆಗಳು 115:4 - ಪರಿಶುದ್ದ ಬೈಬಲ್4 ಅನ್ಯಜನಾಂಗಗಳ “ದೇವರುಗಳು” ಬೆಳ್ಳಿಬಂಗಾರಗಳಿಂದ ಮಾಡಿದ ವಿಗ್ರಹಗಳಷ್ಟೇ. ಅವುಗಳನ್ನು ಮಾಡಿದವರು ಮನುಷ್ಯರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರ ವಿಗ್ರಹಗಳೋ ಬೆಳ್ಳಿ ಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ I ಅವು ಮಾನವನ ಕೈ ಕೆಲಸಗಳು ಮಾತ್ರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರ ವಿಗ್ರಹಗಳೋ ಬೆಳ್ಳಿಬಂಗಾರದವುಗಳೇ; ಅವು ಮನುಷ್ಯರ ಕೈಕೆಲಸವಷ್ಟೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಜನರ ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ. ಅಧ್ಯಾಯವನ್ನು ನೋಡಿ |
ಪ್ರವಾದಿಗಳು ತಾವು ತಂದಿದ್ದ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. ಅವರು ಬಾಳನನ್ನು ಮಧ್ಯಾಹ್ನದವರೆಗೆ ಪ್ರಾರ್ಥಿಸಿದರು. “ಬಾಳನೇ, ದಯವಿಟ್ಟು ನಮಗೆ ಉತ್ತರ ನೀಡು!” ಎಂದು ಅವರು ಪ್ರಾರ್ಥಿಸಿದರು. ಆದರೆ ಯಾವ ಶಬ್ದವೂ ಆಗಲಿಲ್ಲ: ಯಾರೊಬ್ಬರೂ ಉತ್ತರಿಸಲಿಲ್ಲ; ಪ್ರವಾದಿಗಳು ತಾವು ನಿರ್ಮಿಸಿದ್ದ ಯಜ್ಞವೇದಿಕೆಯ ಸುತ್ತಲೂ ನರ್ತಿಸಿದರು. ಆದರೆ ಬೆಂಕಿಯು ಹೊತ್ತಿಕೊಳ್ಳಲೇ ಇಲ್ಲ.
ಇಲ್ಲ, ನೀನು ನಮ್ರನಾಗಿರಲಿಲ್ಲ. ಅದಕ್ಕೆ ಪ್ರತಿಯಾಗಿ ನೀನು ಪರಲೋಕದೊಡೆಯನಿಗೆ ವಿರುದ್ಧವಾಗಿ ನಡೆದುಕೊಂಡೆ. ಯೆಹೋವನ ಆಲಯದಿಂದ ಕುಡಿಯುವ ಪಾತ್ರೆಗಳನ್ನು ತರಬೇಕೆಂದು ಆಜ್ಞಾಪಿಸಿದೆ. ನೀನು ಮತ್ತು ನಿನ್ನ ಅಧಿಕಾರಿಗಳು, ನಿನ್ನ ಪತ್ನಿಯರು ಮತ್ತು ನಿನ್ನ ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿದಿರಿ. ನೀನು ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದೆ. ಅವುಗಳಿಗೆ ನೋಡುವ, ಕೇಳಿಸಿಕೊಳ್ಳುವ ಅಥವಾ ಸ್ತೋತ್ರವನ್ನು ತಿಳಿದುಕೊಳ್ಳುವ ಸಾಮರ್ಥ್ಯವಿಲ್ಲ. ಆದರೆ ನಿನ್ನ ಜೀವದ ಮೇಲೆಯೂ ನಿನ್ನ ಆಗುಹೋಗುಗಳ ಮೇಲೆಯೂ ಅಧಿಕಾರವುಳ್ಳ ದೇವರನ್ನು ನೀನು ಸ್ತುತಿಸಲಿಲ್ಲ.