Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:11 - ಪರಿಶುದ್ದ ಬೈಬಲ್‌

11 ನಾನು ಭಯಗೊಂಡು, “ಎಲ್ಲಾ ಮನುಷ್ಯರು ಸುಳ್ಳುಗಾರರಾಗಿದ್ದಾರೆ!” ಎಂದು ಹೇಳಿದಾಗಲೂ ನಂಬಿಕೊಂಡೇ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಮನುಷ್ಯರೆಲ್ಲಾ ಸುಳ್ಳುಗಾರರು” ಎಂದು ಭ್ರಾಂತಿಯಿಂದ ಹೇಳಿದಾಗಲೂ, ಭರವಸವುಳ್ಳವನಾಗಿಯೇ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಭರವಸವುಳ್ಳವನಾಗಿಯೇ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಮನುಷ್ಯರೆಲ್ಲರು ಸುಳ್ಳುಗಾರರು,” ಎಂದು ನಾನು ನಿರಾಶೆಯಿಂದ ಹೇಳಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:11
8 ತಿಳಿವುಗಳ ಹೋಲಿಕೆ  

ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.”


ನಾನು ಭಯಗೊಂಡು, “ದೇವರು ನನ್ನನ್ನು ತನ್ನ ಸಾನಿಧ್ಯದಿಂದ ಹೊರಗಟ್ಟಿದ್ದಾನೆ” ಎಂದುಕೊಂಡೆನು. ಆದರೆ ನಾನು ನಿನ್ನನ್ನು ಕೂಗಿಕೊಂಡಾಗ ನೀನು ಕಿವಿಗೊಟ್ಟೆ.


ಸಾಮಾನ್ಯ ಜನರು ಕೇವಲ ಉಸಿರಷ್ಟೇ. ಶ್ರೇಷ್ಠರು ಕೇವಲ ಕ್ಷಣಕಾಲವಷ್ಟೇ. ತೂಗಿನೋಡಿದರೆ ಅವರು ಕೇವಲ ಶೂನ್ಯ; ಉಸಿರಿಗಿಂತಲೂ ಹಗುರ.


ಎಲೀಷನು ಆ ಸ್ತ್ರೀಗೆ, “ಮುಂದಿನ ವಸಂತಮಾಸದ ಈ ಕಾಲಕ್ಕೆ ನೀನು ನಿನ್ನ ಗಂಡುಮಗುವನ್ನು ಅಪ್ಪಿಕೊಂಡಿರುವೆ” ಎಂದು ಹೇಳಿದನು. ಆ ಸ್ತ್ರೀಯು, “ದೇವಮನುಷ್ಯನೇ, ಹೀಗೆ ಹೇಳಿ ನಿನ್ನ ಸೇವಕಿಯನ್ನು ವಂಚಿಸಬೇಡ” ಎಂದು ಹೇಳಿದಳು.


ಆದರೆ ದಾವೀದನು, “ಸೌಲನು ಎಂದಾದರೂ ಒಂದು ದಿನ ನನ್ನನ್ನು ಹಿಡಿದುಕೊಳ್ಳುವನು. ಈಗ ಫಿಲಿಷ್ಟಿಯರ ರಾಜ್ಯಕ್ಕೆ ತಪ್ಪಿಸಿಕೊಂಡು ಹೋಗುವುದೇ ನಾನು ಮಾಡಬಹುದಾದ ಒಳ್ಳೆಯ ಕೆಲಸ. ಆಗ ಸೌಲನು ಇಸ್ರೇಲಿನಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುತ್ತಾನೆ. ಸೌಲನಿಂದ ತಪ್ಪಿಸಿಕೊಳ್ಳಲು ಇದೇ ಸರಿಯಾದ ಮಾರ್ಗ” ಎಂದು ತನ್ನಲ್ಲೇ ಯೋಚಿಸಿದನು.


ಜನರು ತಮ್ಮ ನೆರೆಯವರಿಗೆ ಸುಳ್ಳು ಹೇಳುವರು. ಪ್ರತಿಯೊಬ್ಬರೂ ತಮ್ಮ ನೆರೆಯವರಿಗೆ ಸುಳ್ಳಿನಿಂದ ಮುಖಸ್ತುತಿ ಮಾಡುವರು.


ಸುಳ್ಳಾಡುವ ಆ ತುಟಿಗಳನ್ನೂ ಕಟ್ಟುಕಥೆಗಳನ್ನು ಹೇಳುವ ಆ ನಾಲಿಗೆಗಳನ್ನೂ ಯೆಹೋವನು ಕತ್ತರಿಸಿಹಾಕಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು