Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:4 - ಪರಿಶುದ್ದ ಬೈಬಲ್‌

4 ಆಗ ನಾನು ಯೆಹೋವನ ಹೆಸರು ಹೇಳಿ, “ಯೆಹೋವನೇ, ನನ್ನನ್ನು ರಕ್ಷಿಸು!” ಎಂದು ಮೊರೆಯಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೂಗಿ ಕರೆದೆನಾಗ ಪ್ರಭುವಿನ ಸಿರಿ ನಾಮವನು I “ಪ್ರಭು, ಉಳಿಸೆನ್ನ ಪ್ರಾಣವನು” ಎಂದು ಬೇಡಿದೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೆಹೋವನ ಹೆಸರು ಹೇಳಿ - ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ನಾನು, “ಓ ಯೆಹೋವ ದೇವರೇ, ನನ್ನನ್ನು ರಕ್ಷಿಸಿರಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಬೇಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:4
20 ತಿಳಿವುಗಳ ಹೋಲಿಕೆ  

ನಾನು ಆಪತ್ತಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿ ನನ್ನನ್ನು ಬಿಡಿಸಿದನು.


ಖಡ್ಗಕ್ಕೆ ಸಿಕ್ಕದಂತೆ ತನ್ನ ಜೀವವನ್ನು ರಕ್ಷಿಸು. ನನ್ನ ಅಮೂಲ್ಯವಾದ ಜೀವವು ನಾಯಿಗಳ ಪಾಲಾಗದಂತೆ ರಕ್ಷಿಸು.


“ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.


ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸು. ನನ್ನ ಸಮಸ್ಯೆಗಳನ್ನು ಪರಿಹರಿಸು.


ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.


ಯೆಹೋವನೇ, ನನ್ನನ್ನು ಮತ್ತೆ ಬಲಪಡಿಸು! ನಿನ್ನ ಮಹಾಕೃಪೆಯಿಂದ ನನ್ನನ್ನು ರಕ್ಷಿಸು.


ಯೇಸು ಮತ್ತು ಆತನ ಶಿಷ್ಯರನ್ನು ಸಹ ಮದುವೆಗೆ ಆಹ್ವಾನಿಸಲಾಗಿತ್ತು.


ಸತ್ತವರು ನಿನ್ನನ್ನು ಜ್ಞಾಪಿಸಿಕೊಳ್ಳುವರೇ? ಸಮಾಧಿಗಳಲ್ಲಿರುವವರು ನಿನ್ನನ್ನು ಸ್ತುತಿಸುವರೇ? ಆದ್ದರಿಂದ ನನ್ನನ್ನು ಗುಣಪಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು