Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:5 - ಪರಿಶುದ್ದ ಬೈಬಲ್‌

5 ಯೆಹೋವನು ಒಳ್ಳೆಯವನೂ ಕೃಪಾಪೂರ್ಣನೂ ಆಗಿದ್ದಾನೆ. ನಮ್ಮ ದೇವರು ಕರುಣಾಮಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಪ್ರಭು ಕೃಪಾಳು, ನ್ಯಾಯಪ್ರಿಯನು I ಕರುಣಾಮಯನು, ನಮ್ಮ ದೇವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಕೃಪಾಳುವೂ ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಕೃಪೆಯೂ ನೀತಿಯೂ ಉಳ್ಳವರು ನಮ್ಮ ದೇವರು ಅನುಕಂಪ ಭರಿತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:5
26 ತಿಳಿವುಗಳ ಹೋಲಿಕೆ  

ಯೆಹೋವನ ಕಾರ್ಯಗಳೆಲ್ಲ ನೀತಿಯುಳ್ಳವುಗಳಾಗಿವೆ. ಆತನ ಪ್ರತಿಯೊಂದು ಕಾರ್ಯದಲ್ಲೂ ಆತನ ಶಾಶ್ವತ ಪ್ರೀತಿ ತೋರಿಬರುವುದು.


ಯೆಹೋವನು ಕನಿಕರವುಳ್ಳವನೂ ಕೃಪಾಪೂರ್ಣನೂ ತಾಳ್ಮೆಯುಳ್ಳವನೂ ಪ್ರೀತಿಪೂರ್ಣನೂ ಆಗಿದ್ದಾನೆ.


“ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”


ಯೆಹೋವನೇ, ನೀನು ನೀತಿಸ್ವರೂಪನಾಗಿರುವೆ. ನಿನ್ನ ತೀರ್ಪುಗಳು ನ್ಯಾಯವಾಗಿವೆ.


ಯೆಹೋವನೇ, ಕನಿಕರವೂ ದಯೆಯೂ ಉಳ್ಳ ದೇವರು ನೀನೇ. ನೀನು ತಾಳ್ಮೆಯುಳ್ಳವನೂ ನಂಬಿಗಸ್ತನೂ ಪ್ರೀತಿಪೂರ್ಣನೂ ಆಗಿರುವೆ.


ಅವನು ನ್ಯಾಯವಂತನೂ ಪ್ರಾಮಾಣಿಕನೂ ಆಗಿದ್ದಾನೆಂದು ತಿಳಿದು ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ಹಿತ್ತಿಯರ, ಕಾನಾನ್ಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ ಮತ್ತು ಗಿರ್ಗಾಷಿಯರ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವುದಾಗಿ ವಾಗ್ದಾನ ಮಾಡಿದೆ. ನೀನು ನಿನ್ನ ವಾಗ್ದಾನವನ್ನು ನೆರವೇರಿಸಿದೆ. ಯಾಕೆಂದರೆ ನೀನು ಒಳ್ಳೆಯವನಾಗಿರುವೆ.


ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು.


ಯೆಹೋವನಾದ ನೀನು ನಮಗೆ ಆಪತ್ತುಗಳನ್ನು ಸಿದ್ಧಪಡಿಸಿಟ್ಟಿದ್ದೆ. ಆ ಆಪತ್ತುಗಳು ನಮ್ಮ ಮೇಲೆ ಬರುವಂತೆ ನೀನು ಮಾಡಿದೆ. ಯೆಹೋವನಾದ ನೀನು ಎಲ್ಲವನ್ನು ನಿಷ್ಪಕ್ಷಪಾತವಾಗಿ ಮಾಡುವೆ. ಆದ್ದರಿಂದಲೇ ಇದೆಲ್ಲವನ್ನು ಮಾಡಿದೆ. ಆದರೆ ಇಂದಿಗೂ ನಾವು ನಿನ್ನ ಉಪದೇಶಕ್ಕೆ ಕಿವಿಗೊಟ್ಟಿಲ್ಲ.


“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.


ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!


ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.


ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು.


“ಆದರೆ ನಮ್ಮ ದೇವರಾದ ಯೆಹೋವನೇ, ನೀನು ಕರುಣಾಳು, ದುಷ್ಕೃತ್ಯಗಳನ್ನು ಮಾಡಿದ ಜನರನ್ನು ನೀನು ಕ್ಷಮಿಸುವೆ. ನಾವು ನಿಜವಾಗಿಯೂ ನಿನಗೆ ತಿರುಗಿಬಿದ್ದೆವು.


ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?


ಯೆಹೋವನೇ, ಘನಮಾನಗಳು ನಮ್ಮವಲ್ಲ! ಅವು ನಿನ್ನವೇ. ನಿನ್ನ ಪ್ರೀತಿಯ ನಿಮಿತ್ತವಾಗಿಯೂ ನಂಬಿಗಸ್ತಿಕೆಯ ನಿಮಿತ್ತವಾಗಿಯೂ ಘನಮಾನಗಳು ನಿನಗೇ ಸಲ್ಲತಕ್ಕದ್ದು.


ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ.


ಯೆಹೋವನೇ, ನೀನು ಒಳ್ಳೆಯವನೂ ಕರುಣಾಮಯನೂ ಆಗಿರುವೆ. ನಿನ್ನ ಜನರು ಸಹಾಯಕ್ಕಾಗಿ ನಿನಗೆ ಮೊರೆಯಿಡುವರು. ನೀನು ಅವರನ್ನು ನಿಜವಾಗಿಯೂ ಪ್ರೀತಿಸುವಿ.


ಆದರೆ ದೇವರೇ, ನಮಗೆ ಸಂಭವಿಸುವ ಪ್ರತಿಯೊಂದರಲ್ಲೂ ನಿನ್ನದೇನೂ ತಪ್ಪಿಲ್ಲ. ನೀನು ನ್ಯಾಯವಂತನೇ ಸರಿ. ನಾವೇ ತಪ್ಪಿತಸ್ಥರು.


“ಆದರೂ ನೀನು ದಯಾವಂತನು, ಅವರನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಅವರನ್ನು ತೊರೆಯಲಿಲ್ಲ. ನೀನು ಅಂಥಾ ದಯಾಪರನಾದ ದೇವರು.


ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು