ಕೀರ್ತನೆಗಳು 119:10 - ಪರಿಶುದ್ದ ಬೈಬಲ್10 ನಾನು ಪೂರ್ಣಹೃದಯದಿಂದ ದೇವರ ಸೇವೆಮಾಡುವೆ; ದೇವರೇ, ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನಗೆ ಸಹಾಯಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ; ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಯಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ; ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ. ಅಧ್ಯಾಯವನ್ನು ನೋಡಿ |
ಸಮುವೇಲನು ಇಸ್ರೇಲರಿಗೆ, “ನೀವು ಯೆಹೋವನ ಬಳಿಗೆ ಪೂರ್ಣಮನಸ್ಸಿನಿಂದ ಮತ್ತೆ ಬರುವುದಾದರೆ ನಿಮ್ಮ ಬಳಿಯಿರುವ ಅನ್ಯದೇವರುಗಳನ್ನು ಎಸೆಯಬೇಕು. ನೀವು ಅಷ್ಟೋರೆತ್ ದೇವತೆಯ ವಿಗ್ರಹಗಳನ್ನು ತ್ಯಜಿಸಬೇಕು. ನೀವು ನಿಮ್ಮನ್ನು ಯೆಹೋವನಿಗೆ ಸಂಪೂರ್ಣವಾಗಿ ಒಪ್ಪಿಸಿಕೊಟ್ಟು ಆತನ ಸೇವೆಯನ್ನು ಮಾತ್ರ ಮಾಡಬೇಕು. ಆಗ ಆತನು ನಿಮ್ಮನ್ನು ಫಿಲಿಷ್ಟಿಯರಿಂದ ರಕ್ಷಿಸುತ್ತಾನೆ” ಎಂದು ಹೇಳಿದನು.