Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:100 - ಪರಿಶುದ್ದ ಬೈಬಲ್‌

100 ನಾನು ನಿನ್ನ ಆಜ್ಞೆಗಳನ್ನು ಅನುಸರಿಸುವುದರಿಂದ ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

100 ನಿನ್ನ ನಿಯಮಗಳನ್ನು ಕೈಗೊಂಡಿರುವುದರಿಂದ, ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

100 ನಿನ್ನ ನಿಯಮಗಳನು ಕೈಗೊಂಡುದರಿಂದ I ನಾನಧಿಕ ವಿವೇಕಿ ಗುರುಹಿರಿಯರಿಗಿಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

100 ನಿನ್ನ ನೇಮಗಳನ್ನು ಕೈಕೊಂಡಿರುವದರಿಂದ ಹಿರಿಯರಿಗಿಂತ ವಿವೇಕಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

100 ನಿಮ್ಮ ಸೂತ್ರಗಳನ್ನು ಕೈಗೊಂಡಿರುವುದರಿಂದ ನಾನು ಹಿರಿಯರಿಗಿಂತಲೂ ವಿವೇಕಿಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:100
11 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ.


ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.


ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”


‘ಜ್ಞಾನವು ವೃದ್ಧರಲ್ಲಿಲ್ಲವೇ? ದೀರ್ಘಾಯುಷ್ಯವು ತಿಳಿವಳಿಕೆಯನ್ನು ಉಂಟುಮಾಡುವುದಿಲ್ಲವೇ?’


“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.


ಅಲ್ಲಿದ್ದವರೆಲ್ಲರಲ್ಲಿ ಎಲೀಹು ಚಿಕ್ಕವನಾಗಿದ್ದನು. ಆದ್ದರಿಂದ ಪ್ರತಿಯೊಬ್ಬರು ಮಾತಾಡಿ ಮುಗಿಸುವವರೆಗೆ ಅವನು ಕಾದುಕೊಂಡಿದ್ದನು. ಬಳಿಕ ಅವನಿಗೆ ತಾನೂ ಮಾತಾಡಬಹುದೆನಿಸಿತು.


ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು