Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:119 - ಪರಿಶುದ್ದ ಬೈಬಲ್‌

119 ಭೂಮಿಯ ಮೇಲಿರುವ ದುಷ್ಟರನ್ನು ನೀನು ಕಸದಂತೆ ಕಾಣುವೆ. ಆದ್ದರಿಂದ ನಾನು ನಿನ್ನ ಒಡಂಬಡಿಕೆಯನ್ನು ಸದಾಕಾಲ ಪ್ರೀತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

119 ಭೂಲೋಕದ ದುಷ್ಟರೆಲ್ಲರನ್ನು ಕಸದಂತೆ ತೆಗೆದುಬಿಡುತ್ತೀ, ಆದುದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

119 ಲೋಕದ ದುರುಳರನ್ನೆಲ್ಲಾ ಕಸದಂತೆ ಪರಿಗಣಿಸುತ್ತೀ I ಎಂತಲೇ, ನಿನ್ನಾ ಕಟ್ಟಳೆಯಲ್ಲಿದೆ ನನಗೆ ಆಸಕ್ತಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

119 ಭೂಲೋಕದ ದುಷ್ಟರೆಲ್ಲರನ್ನು ಕಿಟ್ಟದಂತೆ ತೆಗೆದುಬಿಡುತ್ತೀ; ಆದದರಿಂದ ನಾನು ನಿನ್ನ ಕಟ್ಟಳೆಗಳನ್ನು ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

119 ಭೂಮಿಯಲ್ಲಿರುವ ದುಷ್ಟರೆಲ್ಲರನ್ನು ಕಸದ ಹಾಗೆ ತೆಗೆದು ಹಾಕುತ್ತೀರಿ; ಆದ್ದರಿಂದ ನಾನು ನಿಮ್ಮ ಶಾಸನಗಳನ್ನು ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:119
12 ತಿಳಿವುಗಳ ಹೋಲಿಕೆ  

ಆದರೆ ನಾನು ಅವರಿಗೆ, ‘ಅಧರ್ಮಿಗಳೇ, ನನ್ನಿಂದ ತೊಲಗಿರಿ. ನೀವು ಯಾರೋ ನನಗೆ ತಿಳಿಯದು’ ಎಂದು ಸ್ಪಷ್ಟವಾಗಿ ಹೇಳಿಬಿಡುವೆನು.


ಆತನು ಕಾಳನ್ನು ಸ್ವಚ್ಛಗೊಳಿಸಲು ಸಿದ್ಧನಾಗಿದ್ದಾನೆ. ಆತನು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ಒಳ್ಳೆಯ ಕಾಳುಗಳನ್ನು ಕಣಜದಲ್ಲಿ ತುಂಬಿಸಿ ಹೊಟ್ಟನ್ನು ನಂದಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವನು” ಎಂದು ಹೇಳಿದನು.


ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.”


ಜನರು ಬೆಳ್ಳಿಯನ್ನು ಶುದ್ಧಮಾಡುವದಕ್ಕೆ ದ್ರವವನ್ನು ಉಪಯೋಗಿಸುವರು. ಅದೇರೀತಿಯಲ್ಲಿ ನಿಮ್ಮ ತಪ್ಪುಗಳನ್ನೆಲ್ಲ ನಾನು ಶುದ್ಧಮಾಡುವೆನು. ನಿಮ್ಮಲ್ಲಿರುವ ಎಲ್ಲಾ ಅಯೋಗ್ಯವಾದವುಗಳನ್ನು ತೆಗೆದುಬಿಡುವೆನು.


ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ.


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ನಿನ್ನ ಆಜ್ಞೆಗಳಲ್ಲಿ ಆನಂದಿಸುವೆನು; ಅವು ನನಗೆ ಇಷ್ಟವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು