Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:121 - ಪರಿಶುದ್ದ ಬೈಬಲ್‌

121 ನ್ಯಾಯನೀತಿಗಳುಳ್ಳ ಕಾರ್ಯಗಳನ್ನೇ ನಾನು ಮಾಡಿರುವೆ, ಕೆಡುಕರಿಗೆ ನನ್ನನ್ನು ಒಪ್ಪಿಸಿಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

121 ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ, ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

121 ಕೈಗೊಳ್ಳುವೆ ನೀತಿಯುತ ನಿನ್ನಾ ವಿಧಿಗಳನು I ಬಲಾತ್ಕಾರಿಗಳಿಗೊಪ್ಪಿಸಬೇಡ ನನ್ನನ್ನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

121 ನಾನು ನಿನ್ನ ನೀತಿವಿಧಿಗಳನ್ನು ಅನುಸರಿಸಿದ್ದೇನೆ; ಬಲಾತ್ಕಾರಿಗಳಿಗೆ ನನ್ನನ್ನು ಒಪ್ಪಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

121 ನಾನು ನೀತಿನ್ಯಾಯವನ್ನು ನಡೆಸಿದ್ದೇನೆ; ನನ್ನ ಹಿಂಸಕರಿಗೆ ನನ್ನನ್ನು ಒಪ್ಪಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:121
12 ತಿಳಿವುಗಳ ಹೋಲಿಕೆ  

ದಾವೀದನು ಸಮಸ್ತ ಇಸ್ರೇಲರನ್ನು ಆಳಿದನು. ದಾವೀದನು ಜನರಿಗೆ ನ್ಯಾಯವಾದ ಮತ್ತು ಸರಿಯಾದ ತೀರ್ಪುಗಳನ್ನು ಕೊಡುತ್ತಿದ್ದನು.


ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.


ಆದರೆ ಯೆಹೋವನು ನೀತಿವಂತರನ್ನು ತೊರೆದುಬಿಡುವುದಿಲ್ಲ. ನೀತಿವಂತರಿಗೆ ಅಪರಾಧಿಗಳೆಂದು ತೀರ್ಪಾಗಲು ಆತನು ಬಿಡುವುದಿಲ್ಲ.


ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.


ಸೆಜರೇಯ ಪಟ್ಟಣದಿಂದ ಯೇಸುವಿನ ಶಿಷ್ಯರಲ್ಲಿ ಕೆಲವರು ನಮ್ಮೊಂದಿಗೆ ಬಂದರು. ಈ ಶಿಷ್ಯರು ನಾವು ಇಳಿದುಕೊಳ್ಳಬೇಕಾಗಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ನಮ್ಮನ್ನು ಕರೆದೊಯ್ದರು. ಯೇಸುವಿನ ಆದಿ ಶಿಷ್ಯರಲ್ಲಿ ಮ್ನಾಸೋನನು ಒಬ್ಬನಾಗಿದ್ದನು.


ದೇವರು ಹೀಗೆನ್ನುತ್ತಾನೆ: “ನಾನು ನ್ಯಾಯತೀರ್ಪಿಗಾಗಿ ತಕ್ಕ ಸಮಯವನ್ನು ಗೊತ್ತುಪಡಿಸುವೆ; ನಾನು ನೀತಿಯಿಂದಲೇ ತೀರ್ಪುಕೊಡುವೆ.


ನಾನು ಮಾಡಿದ ತಪ್ಪನ್ನು ದಯವಿಟ್ಟು ಕ್ಷಮಿಸು. ಯೆಹೋವನು ನಿನ್ನ ಕುಟುಂಬವನ್ನು ಪ್ರಬಲಗೊಳಿಸುತ್ತಾನೆಂದೂ ನಿನ್ನ ಕುಟುಂಬದಿಂದ ಅನೇಕ ರಾಜರು ಬರುತ್ತಾರೆಂದೂ ನನಗೆ ತಿಳಿದಿದೆ! ನೀನು ಯೆಹೋವನ ಯುದ್ಧಗಳಲ್ಲಿ ಹೋರಾಡುವುದರಿಂದ ಯೆಹೋವನು ಇದನ್ನು ನೆರವೇರಿಸುತ್ತಾನೆ. ನೀನು ಜೀವಿಸಿರುವ ತನಕ ಜನರು ನಿನ್ನಲ್ಲಿ ಯಾವುದೇ ಬಗೆಯ ಕೆಟ್ಟದನ್ನು ಕಂಡುಹಿಡಿಯುವುದಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು