ಕೀರ್ತನೆಗಳು 119:126 - ಪರಿಶುದ್ದ ಬೈಬಲ್126 ಯೆಹೋವನೇ, ನಿನ್ನ ಕಾರ್ಯಾಚರಣೆಗೆ ಇದು ತಕ್ಕ ಸಮಯವಾಗಿದೆ. ಜನರು ನಿನ್ನ ಧರ್ಮಶಾಸ್ತ್ರವನ್ನು ಮೀರಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019126 ಯೆಹೋವನೇ, ನೀನು ಕಾರ್ಯ ನಡೆಸುವುದಕ್ಕೆ ಸಮಯ ಬಂದಿದೆ, ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)126 ಉಲ್ಲಂಘನೆಯಾಗಿದೆ ಪ್ರಭು, ನಿನ್ನ ಧರ್ಮಶಾಸ್ತ್ರ I ಸಮಯ ಬಂದೊದಗಿದೆ, ಆಗು ನೀನು ಕಾರ್ಯತತ್ಪರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)126 ಯೆಹೋವನೇ, ನೀನು ಕಾರ್ಯನಡಿಸುವದಕ್ಕೆ ಸಮಯಬಂದದೆ; ನಿನ್ನ ಧರ್ಮಶಾಸ್ತ್ರವನ್ನು ಉಲ್ಲಂಘಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ126 ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ, ಏಕೆಂದರೆ ನಿಮ್ಮ ನಿಯಮವು ಉಲ್ಲಂಘಿಸಲಾಗಿದೆ. ಅಧ್ಯಾಯವನ್ನು ನೋಡಿ |
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.