Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:128 - ಪರಿಶುದ್ದ ಬೈಬಲ್‌

128 ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

128 ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

128 ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

128 ನಿಜವಾಗಿ ನಿನ್ನ ಎಲ್ಲಾ ನೇಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ; ಎಲ್ಲಾ ವಿುಥ್ಯಾಮಾರ್ಗಗಳನ್ನು ಹಗೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

128 ಅದರ ನಿಮಿತ್ತ ನಿಮ್ಮ ಸೂತ್ರಗಳೆಲ್ಲವೂ ಸರಿಯಾದವುಗಳೆಂದು ನಾನು ಅಂಗೀಕರಿಸುತ್ತೇನೆ, ಪ್ರತಿಯೊಂದು ಮೋಸ ಮಾರ್ಗವನ್ನೂ ದ್ವೇಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:128
13 ತಿಳಿವುಗಳ ಹೋಲಿಕೆ  

ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, ಆದ್ದರಿಂದ ನಾನು ದುರುಪದೇಶಗಳನ್ನು ದ್ವೇಷಿಸುವೆನು.


ನನ್ನ ಅಂತರಂಗದಲ್ಲಿ ದೇವರ ನಿಯಮದ ವಿಷಯದಲ್ಲಿ ನಾನು ಸಂತೋಷಪಡುತ್ತೇನೆ.


ದೇವರು ಹೇಳುವ ಪ್ರತಿಯೊಂದು ಮಾತೂ ನಂಬಿಕೆಗೆ ಯೋಗ್ಯವಾಗಿದೆ. ತನ್ನ ಬಳಿಗೆ ಬರುವ ಜನರಿಗೆ ದೇವರು ಆಶ್ರಯದುರ್ಗವಾಗಿದ್ದಾನೆ.


ನಿನ್ನ ಆಜ್ಞೆಗಳನ್ನು ಕಲಿಯುವಾಗ ನನಗೆ ನಾಚಿಕೆಯಾಗದು.


ನಾನು ನಿಮಗೆ ಈ ಹೊತ್ತು ಕೊಡುವ ಉಪದೇಶಗಳಿಗೆ ನ್ಯಾಯದಲ್ಲೂ ಒಳ್ಳೆಯದರಲ್ಲೂ ಸರಿಸಮಾನವಾದ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಬೇರೆ ಯಾವ ದೊಡ್ಡ ದೇಶವೂ ಹೊಂದಿಲ್ಲ!


ನಾನು ಮಾಡುವ ಕೆಟ್ಟಕಾರ್ಯಗಳನ್ನು ಮಾಡಲು ನನಗೆ ಇಷ್ಟವಿಲ್ಲದಿದ್ದರೆ, ಧರ್ಮಶಾಸ್ತ್ರವು ಒಳ್ಳೆಯದೆಂದು ನಾನು ಒಪ್ಪಿಕೊಂಡಂತಾಯಿತು.


ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ.


ಹೀಗಿರಲು ಧರ್ಮಶಾಸ್ತ್ರ ಪರಿಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಒಳ್ಳೆಯದೂ ಆಗಿದೆ.


ನಿನ್ನ ಕಟ್ಟಳೆಗಳನ್ನು ಅನುಸರಿಸದವರನ್ನು ನೀನು ತಳ್ಳಿಬಿಡುವೆ. ಯಾಕೆಂದರೆ, ಅವರು ನಿನಗೆ ದ್ರೋಹ ಮಾಡಿದರು.


ಬಳಿಕ ಅವನು ಜನರ ಮುಂದೆ ನಿಂತುಕೊಂಡು, ‘ನಾನು ಪಾಪಮಾಡಿದೆನು; ಒಳ್ಳೆಯದನ್ನು ಕೆಟ್ಟದ್ದನ್ನಾಗಿ ಮಾಡಿದೆನು. ಆದರೆ ದೇವರು ಅದಕ್ಕೆ ತಕ್ಕಂತೆ ನನ್ನನ್ನು ದಂಡಿಸಲಿಲ್ಲ!


ನಾನು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಯಾವಾಗಲೂ ಜ್ಞಾಪಿಸಿಕೊಳ್ಳುವೆ.


ನನ್ನ ನಾಲಿಗೆಯು ನಿನ್ನ ವಾಕ್ಯವನ್ನು ಗಾಯನ ಮಾಡಲಿ. ನಿನ್ನ ಆಜ್ಞೆಗಳೆಲ್ಲಾ ನೀತಿಯ ಆಜ್ಞೆಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು