Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:129 - ಪರಿಶುದ್ದ ಬೈಬಲ್‌

129 ನಿನ್ನ ಕಟ್ಟಳೆಗಳು ಆಶ್ಚರ್ಯಕರವಾಗಿವೆ. ಪೂರ್ಣಹೃದಯದಿಂದ ಅವುಗಳನ್ನು ಅನುಸರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

129 ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ, ಪೂರ್ಣಹೃದಯದಿಂದ ಅವುಗಳನ್ನು ಕೈಗೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

129 ಅಪೂರ್ವವಾದ ನಿನ್ನ ಕಟ್ಟಳೆಗಳನು I ಹೃತ್ಪೂರ್ವಕವಾಗಿ ನಾ ಪಾಲಿಪೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

129 ನಿನ್ನ ಕಟ್ಟಳೆಗಳು ಮಹತ್ವವುಳ್ಳವುಗಳೇ; ಪೂರ್ಣಹೃದಯದಿಂದ ಅವುಗಳನ್ನು ಕೈಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

129 ನಿಮ್ಮ ಶಾಸನಗಳು ಅದ್ಭುತವಾದವುಗಳೇ; ಆದ್ದರಿಂದ ನಾನು ಅವುಗಳನ್ನು ಅನುಸರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:129
9 ತಿಳಿವುಗಳ ಹೋಲಿಕೆ  

ನನ್ನ ವಿಷಯವಾಗಿ ನನಗಿಂತಲೂ ನಿನಗೆ ಎಷ್ಟೋ ಹೆಚ್ಚಾಗಿ ತಿಳಿದಿರುವುದು ನನ್ನನ್ನು ಆಶ್ಚರ್ಯಗೊಳಿಸಿದೆ, ಅದನ್ನು ಗ್ರಹಿಸಿಕೊಳ್ಳುವುದಕ್ಕೂ ನನ್ನಿಂದಾಗದು.


ಯೆಹೋವನ ಒಡಂಬಡಿಕೆಯನ್ನೂ ವಾಗ್ದಾನಗಳನ್ನೂ ಅನುಸರಿಸುವ ಜನರಿಗೆ ಆತನ ಮಾರ್ಗಗಳೆಲ್ಲ ಕರುಣೆಯುಳ್ಳವೂ ಸತ್ಯವೂ ಆಗಿವೆ.


ನನ್ನ ಕಣ್ಣುಗಳನ್ನು ತೆರೆ, ಆಗ ನಾನು ನಿನ್ನ ಉಪದೇಶಗಳನ್ನು ಕಾಣುವೆ; ನೀನು ಮಾಡಿದ ಅದ್ಭುತಕಾರ್ಯಗಳ ಕುರಿತು ಓದುವೆ.


ಯೆಹೋವನೇ, ನೀನೇ ನನ್ನ ದೇವರು. ನಿನ್ನನ್ನು ಗೌರವಿಸಿ ನಿನ್ನ ನಾಮವನ್ನು ಸ್ತುತಿಸುವೆನು. ನೀನು ಆಶ್ಚರ್ಯಕರವಾದ ಕಾರ್ಯಗಳನ್ನು ಮಾಡಿರುವೆ. ಬಹಳ ಕಾಲದ ಹಿಂದೆ ನೀನು ಹೇಳಿರುವ ವಿಷಯಗಳು ಸತ್ಯವೇ ಸರಿ. ನೀನು ಮುಂತಿಳಿಸಿದಂತೆಯೇ ಎಲ್ಲವೂ ಸಂಭವಿಸಿದವು.


ನಾನು ನಿನಗೇ ಮೊರೆಯಿಟ್ಟಿದ್ದೇನೆ. ನನ್ನನ್ನು ರಕ್ಷಿಸು! ನಿನ್ನ ಕಟ್ಟಳೆಗಳಿಗೆ ವಿಧೇಯನಾಗುತ್ತೇನೆ.


ನಿನ್ನ ಒಡಂಬಡಿಕೆಗೆ ಅಂಟಿಕೊಂಡಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ.


ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ ವಿಧೇಯರಾಗುವವರು ಧನ್ಯರು.


ಆಗ ನಾನು ದೇವದೂತನನ್ನು ಆರಾಧಿಸಲು ಅವನ ಪಾದದ ಮುಂದೆ ಅಡ್ಡಬಿದ್ದೆನು. ಆದರೆ ದೇವದೂತನು ನನಗೆ, “ನನ್ನನ್ನು ಆರಾಧಿಸಬೇಡ! ಯೇಸುವಿನ ಸತ್ಯವನ್ನು ಹೊಂದಿರುವ ನಿನ್ನಂತೆಯೂ ನಿನ್ನ ಸಹೋದರರಂತೆಯೂ ನಾನು ಒಬ್ಬ ಸೇವಕನಾಗಿದ್ದೇನೆ. ಆದ್ದರಿಂದ ದೇವರನ್ನು ಆರಾಧಿಸು! ಏಕೆಂದರೆ ಯೇಸುವಿನ ಸತ್ಯವೇ ಪ್ರವಾದನೆಯ ಸಾಕ್ಷಿಯಾಗಿದೆ” ಎಂದು ಹೇಳಿದನು.


ವಿಶೇಷವಾದ ಗಂಡುಮಗುವು ಜನಿಸಿದಾಗ ಇವೆಲ್ಲಾ ಸಂಭವಿಸುವದು. ದೇವರು ನಮಗೊಬ್ಬ ವರದ ಮಗನನ್ನು ಕೊಡುವನು. ಈ ವರದ ಮಗನು ಜನರನ್ನು ನಡಿಸುವದಕ್ಕೆ ಜವಾಬ್ದಾರಿಯನ್ನು ಹೊಂದಿದವನಾಗುವನು. ಆತನ ಹೆಸರು “ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭುವು” ಎಂಬುದಾಗಿ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು