ಕೀರ್ತನೆಗಳು 119:139 - ಪರಿಶುದ್ದ ಬೈಬಲ್139 ನನ್ನ ಅಭಿಮಾನವು ನನ್ನನ್ನು ದಹಿಸುತ್ತಿದೆ. ಯಾಕೆಂದರೆ ನನ್ನ ವೈರಿಗಳು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿದ್ದರಿಂದ ನನಗೆ ಬೇಸರವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019139 ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದರಿಂದ ನಿನ್ನ ಮೇಲಿನ ಅಭಿಮಾನ ನನ್ನನ್ನು ದಹಿಸಿಬಿಟ್ಟಿತು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)139 ಮರೆತುಬಿಟ್ಟರು ವಿರೋಧಿಗಳು ನಿನ್ನ ವಾಕ್ಯವನು I ಎಂತಲೆ ದಹಿಸುತಿದೆ ಧರ್ಮಾಸಕ್ತಿ ಎನ್ನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)139 ಮತಾಸಕ್ತಿಯು ನನ್ನನ್ನು ದಹಿಸಿಬಿಟ್ಟಿತು; ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಟ್ಟಿದ್ದಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ139 ನನ್ನ ವೈರಿಗಳು ನಿಮ್ಮ ಮಾತುಗಳನ್ನು ತಿರಸ್ಕರಿಸುವುದರಿಂದ, ನನ್ನ ಆಸಕ್ತಿಯು ನನ್ನನ್ನು ದಹಿಸಿಬಿಟ್ಟಿದೆ. ಅಧ್ಯಾಯವನ್ನು ನೋಡಿ |
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!
ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು.