Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:141 - ಪರಿಶುದ್ದ ಬೈಬಲ್‌

141 ನಾನು ಅಲ್ಪನೂ ತಿರಸ್ಕೃತನೂ ಆಗಿದ್ದೇನೆ. ಆದರೂ ನಾನು ನಿನ್ನ ನಿಯಮಗಳನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

141 ನಾನು ಅಲ್ಪನೂ, ತಿರಸ್ಕಾರ ಹೊಂದಿದವನೂ ಆಗಿದ್ದೇನೆ, ಆದರೂ ನಿನ್ನ ನಿಯಮಗಳನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

141 ನಾನಲ್ಪನು, ತಿರಸ್ಕಾರ ಹೊಂದಿದವನು I ಆದರೂ ಮರೆತಿಲ್ಲ ನಿನ್ನ ನೇಮಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

141 ನಾನು ಅಲ್ಪನೂ ತಿರಸ್ಕಾರಹೊಂದಿದವನೂ ಆಗಿದ್ದೇನೆ; ಆದರೂ ನಿನ್ನ ನೇಮಗಳನ್ನು ಮರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

141 ನಾನು ಅಲ್ಪನೂ, ತಿರಸ್ಕಾರ ಹೊಂದಿದವನು ಆಗಿದ್ದರೂ, ನಿಮ್ಮ ಸೂತ್ರಗಳನ್ನು ನಾನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:141
14 ತಿಳಿವುಗಳ ಹೋಲಿಕೆ  

ಹೀಗಿರಲು, ನಾನು ಹುಳವೇ? ನಾನು ಮನುಷ್ಯನಲ್ಲವೇ? ನನ್ನ ವಿಷಯದಲ್ಲಿ ಜನರು ನಾಚಿಕೆಪಡುತ್ತಾರೆ; ಅವರು ನನ್ನನ್ನು ತಿರಸ್ಕರಿಸುತ್ತಾರೆ.


ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಿದೆ. ಕ್ರಿಸ್ತನು ದೇವರೊಂದಿಗೆ ಶ್ರೀಮಂತಿಕೆಯಲ್ಲಿದ್ದರೂ ನಿಮಗೋಸ್ಕರವಾಗಿ ಬಡವನಾದದ್ದು ನಿಮಗೆ ಗೊತ್ತಿದೆ. ನೀವು ಶ್ರೀಮಂತರಾಗಬೇಕೆಂದು ಕ್ರಿಸ್ತನು ಬಡವನಾದನು.


ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.


ಯೇಸು, “ನರಿಗಳಿಗೆ ಗುಹೆಗಳಿವೆ, ಪಕ್ಷಿಗಳಿಗೆ ಗೂಡುಗಳಿವೆ. ಆದರೆ ಮನುಷ್ಯಕುಮಾರನಿಗೆ ತಲೆ ಇಡುವಷ್ಟು ಸ್ಥಳವೂ ಇಲ್ಲ” ಎಂದು ಉತ್ತರಿಸಿದನು.


ಯೇಸು ತನ್ನ ಶಿಷ್ಯರನ್ನು ನೋಡಿ ಹೇಳಿದ್ದೇನೆಂದರೆ, “ಬಡವರಾದ ನೀವು ಧನ್ಯರು; ದೇವರ ರಾಜ್ಯವು ನಿಮ್ಮದೇ.


ಅನ್ಯಾಯದಿಂದ ಹೆಚ್ಚು ಸಂಪಾದಿಸುವುದಕ್ಕಿಂತ ನ್ಯಾಯವಾಗಿ ಸ್ವಲ್ಪ ಸಂಪಾದಿಸುವುದೇ ಉತ್ತಮ.


ಬಹಳ ಐಶ್ವರ್ಯವನ್ನು ಹೊಂದಿದ್ದು ಸಮಾಧಾನವಿಲ್ಲದೆ ಇರುವುದಕ್ಕಿಂತ ಸ್ವಲ್ಪ ಐಶ್ವರ್ಯವನ್ನು ಹೊಂದಿದ್ದು ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಮೇಲು.


ನನ್ನ ಮಗನೇ, ನನ್ನ ಉಪದೇಶವನ್ನು ಮರೆಯಬೇಡ. ನನ್ನ ಆಜ್ಞೆಗಳನ್ನು ಜ್ಞಾಪಕದಲ್ಲಿಟ್ಟುಕೊ.


ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.


ಒಡೆಯನೇ, ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನಗೆ ಸಹಾಯಮಾಡಿ ನನ್ನನ್ನು ರಕ್ಷಿಸು. ನನ್ನ ದೇವರೇ, ತಡಮಾಡಬೇಡ.


ಜನರು ಆತನನ್ನು ಪರಿಹಾಸ್ಯ ಮಾಡಿದರು. ಆತನ ಸ್ನೇಹಿತರು ಆತನನ್ನು ತೊರೆದರು. ಆತನು ನೋವಿನಿಂದ ಬಳಲಿದನು. ಆತನು ಕಾಯಿಲೆಯಿಂದ ಬಾಧಿತನಾಗಿದ್ದನು. ಜನರು ಆತನ ಕಡೆಗೆ ನೋಡಲೂ ಇಲ್ಲ. ನಾವು ಆತನನ್ನು ಗಮನಕ್ಕೆ ತರಲೇ ಇಲ್ಲ.


ಸುಳ್ಳುಹೇಳುವ ಮತ್ತು ಮೋಸಮಾಡುವ ಮೂಢನಾಗಿರುವುದಕ್ಕಿಂತ, ಬಡವನಾಗಿಯೂ ಯಥಾರ್ಥನಾಗಿಯೂ ಇರುವುದು ಲೇಸು.


ನಾನು ಕಳೆದುಹೋದ ಕುರಿಯಂತೆ ಅಲೆದಾಡುತ್ತಿದ್ದೇನೆ. ನನಗೋಸ್ಕರ ಹುಡುಕುತ್ತಾ ಬಾ. ನಿನ್ನ ಸೇವಕನಾದ ನಾನು ನಿನ್ನ ಆಜ್ಞೆಗಳನ್ನು ಮರೆತುಬಿಟ್ಟಿಲ್ಲ.


ನಾನು ನಿನ್ನ ಕಟ್ಟಳೆಗಳಲ್ಲಿ ಆನಂದಿಸುವೆನು, ನಿನ್ನ ಮಾತುಗಳನ್ನು ಮರೆಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು