ಕೀರ್ತನೆಗಳು 119:153 - ಪರಿಶುದ್ದ ಬೈಬಲ್153 ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸು. ನಾನು ನಿನ್ನ ಉಪದೇಶಗಳನ್ನು ಮರೆತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019153 ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು, ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)153 ನನ್ನ ಕಷ್ಟವ ನೋಡಿ ಮುಕ್ತಗೊಳಿಸೆನ್ನನು I ಮರೆತಿಲ್ಲ ನಾನು ನಿನ್ನ ಧರ್ಮಶಾಸ್ತ್ರವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)153 ನನ್ನ ಕಷ್ಟವನ್ನು ನೋಡಿ ನನ್ನನ್ನು ರಕ್ಷಿಸು; ನಾನು ನಿನ್ನ ಧರ್ಮಶಾಸ್ತ್ರವನ್ನು ಮರೆತವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ153 ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸಿರಿ; ಏಕೆಂದರೆ ನಿಮ್ಮ ನಿಯಮವನ್ನು ನಾನು ಮರೆತಿಲ್ಲ. ಅಧ್ಯಾಯವನ್ನು ನೋಡಿ |
ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.