Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:162 - ಪರಿಶುದ್ದ ಬೈಬಲ್‌

162 ಮಹಾಭಂಡಾರವನ್ನು ಕಂಡುಕೊಂಡವನಂತೆ ನಾನು ನಿನ್ನ ವಾಕ್ಯದಲ್ಲಿ ಸಂತೋಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

162 ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ, ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

162 ಜನರಿಗಾನಂದ ಅನಿರೀಕ್ಷಿತ ಆಸ್ತಿಯಲಿ I ನನಗಾದರೋ ಪರಮಾನಂದ ನಿನ್ನ ನುಡಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

162 ಒಬ್ಬನು ತಾನು ಸಂಪಾದಿಸಿದ ದೊಡ್ಡ ಕೊಳ್ಳೆಯಲ್ಲಿ ಹೇಗೋ ಹಾಗೆಯೇ ನಾನು ನಿನ್ನ ನುಡಿಯಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

162 ದೊಡ್ಡ ಕೊಳ್ಳೆಯನ್ನು ಕಂಡುಹಿಡಿದವರಂತೆ ನಾನು ನಿಮ್ಮ ವಾಗ್ದಾನದಲ್ಲಿ ಆನಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:162
7 ತಿಳಿವುಗಳ ಹೋಲಿಕೆ  

ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.


ನಿನ್ನ ಉಪದೇಶಗಳು ನನಗೆ ಒಳ್ಳೆಯದಾಗಿವೆ. ಅವು ಹತ್ತುಸಾವಿರ ಬೆಳ್ಳಿಬಂಗಾರಗಳ ನಾಣ್ಯಗಳಿಗಿಂತಲೂ ಅಮೂಲ್ಯವಾಗಿವೆ.


ನಿನ್ನ ಕಟ್ಟಳೆಗಳನ್ನು ಎಂದೆಂದಿಗೂ ನಿತ್ಯಸ್ವಾಸ್ತ್ಯವನ್ನಾಗಿ ಆರಿಸಿಕೊಂಡಿದ್ದೇನೆ. ಅವು ನನ್ನ ಹೃದಯಕ್ಕೆ ಆನಂದಕರವಾಗಿವೆ.


ಈಜಿಪ್ಟಿನವನು ದಾವೀದನನ್ನು ಅಮಾಲೇಕ್ಯರ ಬಳಿಗೆ ಕರೆದುಕೊಂಡು ಹೋದನು. ಅವರು ತಿನ್ನುತ್ತಾ ಕುಡಿಯುತ್ತಾ ಸುತ್ತುವರಿದು ನೆಲದ ಮೇಲೆ ಬಿದ್ದಿದ್ದರು. ಫಿಲಿಷ್ಟಿಯರ ಮತ್ತು ಯೆಹೂದ್ಯರ ದೇಶದಿಂದ ಸೂರೆಮಾಡಿದ ವಸ್ತುಗಳಿಂದ ಸಂಭ್ರಮವನ್ನು ಆಚರಿಸುತ್ತಿದ್ದರು.


ದೇವರೇ, ಆ ದೇಶವನ್ನು ನೀನು ಅಭಿವೃದ್ಧಿಪಡಿಸುವೆ. ನೀನು ಆ ಜನರನ್ನು ಸಂತೋಷಪಡಿಸುವೆ. ಅವರು ತಮ್ಮ ಸಂತಸವನ್ನು ವ್ಯಕ್ತಪಡಿಸುವರು. ಅದು ಸುಗ್ಗಿಕಾಲದಲ್ಲಿರುವ ಸಂತಸದಂತೆಯೂ ಯುದ್ಧದಲ್ಲಿ ಗಳಿಸಿದ ಕೊಳ್ಳೆಯ ಪಾಲು ದೊರೆತಾಗ ಉಂಟಾಗುವ ಸಂತಸದಂತೆಯೂ ಇರುವುದು.


ಗರ್ವಿಷ್ಠರೊಡನೆ ಐಶ್ವರ್ಯವನ್ನು ಹಂಚಿಕೊಳ್ಳುವದಕ್ಕಿಂತ ದೀನರಾಗಿದ್ದು ಬಡಜನರೊಡನೆ ವಾಸಿಸುವುದೇ ಉತ್ತಮ.


ಸಕಲ ಸಂಪತ್ತಿನಲ್ಲಿ ಹೇಗೋ ಹಾಗೆಯೇ ನಿನ್ನ ಒಡಂಬಡಿಕೆಯನ್ನು ಅಭ್ಯಾಸ ಮಾಡುವುದರಲ್ಲಿ ಆನಂದಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು