Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:163 - ಪರಿಶುದ್ದ ಬೈಬಲ್‌

163 ನಾನು ಸುಳ್ಳುಗಳನ್ನು ದ್ವೇಷಿಸುವೆನು! ಅವು ನನಗೆ ಅಸಹ್ಯವಾಗಿವೆ. ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

163 ಮಿಥ್ಯವಾದದ್ದನ್ನು ದ್ವೇಷಿಸುತ್ತೇನೆ, ಅದು ನನಗೆ ಅಸಹ್ಯವಾಗಿದೆ, ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

163 ಹಿಡಿಸದು ಎನಗೆ ಮಿಥ್ಯವಾದುದು, ಅದು ಎನಗೆ ಅಸಹ್ಯ I ನಿನ್ನ ಧರ್ಮಶಾಸ್ತ್ರವಾದರೋ ನನಗೆ ಸುಪ್ರಿಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

163 ವಿುಥ್ಯವಾದದ್ದನ್ನು ಹಗೆಮಾಡುತ್ತೇನೆ, ಅದು ನನಗೆ ಅಸಹ್ಯವಾಗಿದೆ; ನಿನ್ನ ಧರ್ಮಶಾಸ್ತ್ರವು ನನಗೆ ಪ್ರಿಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

163 ಸುಳ್ಳುತನವನ್ನು ನಾನು ದ್ವೇಷಿಸಿ ಅಸಹ್ಯಪಡುತ್ತೇನೆ ಆದರೆ ನಾನು ನಿಮ್ಮ ನಿಯಮವನ್ನು ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:163
13 ತಿಳಿವುಗಳ ಹೋಲಿಕೆ  

ನಾನು ನಿನ್ನ ಆಜ್ಞೆಗಳಿಗೆಲ್ಲಾ ಎಚ್ಚರಿಕೆಯಿಂದ ವಿಧೇಯನಾಗುವೆನು. ನಾನು ಸುಳ್ಳು ಉಪದೇಶಗಳನ್ನು ದ್ವೇಷಿಸುವೆನು.


ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.


ದುಷ್ಟತನವನ್ನು ದ್ವೇಷಿಸಿ ಒಳ್ಳೆಯತನವನ್ನು ಪ್ರೀತಿಸಿರಿ, ನಿಮ್ಮ ನ್ಯಾಯಾಲಯಗಳಲ್ಲಿ ನ್ಯಾಯವನ್ನು ಸ್ಧಾಪಿಸಿರಿ. ಆಗ ಒಂದುವೇಳೆ ಸರ್ವಶಕ್ತನಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ದಯೆತೋರಿಸಬಹುದು.


ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. ನಿನ್ನ ಉಪದೇಶಗಳಿಂದ ಮಾರ್ಗದರ್ಶನ ಮಾಡು.


ನಗರದ ಹೊರಭಾಗದಲ್ಲಿ ನಾಯಿಗಳಿವೆ (ಕೆಟ್ಟಜನರು), ಕೆಟ್ಟ ಮಾಟವನ್ನು ಮಾಡುವ ಜನರಿದ್ದಾರೆ, ಲೈಂಗಿಕ ಪಾಪಗಳನ್ನು ಮಾಡುವ ಜನರಿದ್ದಾರೆ, ಕೊಲೆಗಾರರಿದ್ದಾರೆ, ವಿಗ್ರಹಗಳನ್ನು ಆರಾಧಿಸುವ ಜನರಿದ್ದಾರೆ ಮತ್ತು ಸುಳ್ಳನ್ನು ಪ್ರೀತಿಸುವ ಮತ್ತು ಹೇಳುವ ಜನರಿದ್ದಾರೆ.


ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.


ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು.


ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. ನಾನಾದರೋ ನಿನ್ನ ಉಪದೇಶಗಳನ್ನು ಪ್ರೀತಿಸುವೆನು.


ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ.


ನಿನ್ನ ಆಜ್ಞೆಗಳಲ್ಲಿ ಆನಂದಿಸುವೆನು; ಅವು ನನಗೆ ಇಷ್ಟವಾಗಿವೆ.


ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, ಆದ್ದರಿಂದ ನಾನು ದುರುಪದೇಶಗಳನ್ನು ದ್ವೇಷಿಸುವೆನು.


ಶಿಷ್ಟರು ಸುಳ್ಳನ್ನು ದ್ವೇಷಿಸುತ್ತಾರೆ. ದುಷ್ಟರು ನಾಚಿಕೆಕರವಾದ ಕೆಲಸ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು