Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:170 - ಪರಿಶುದ್ದ ಬೈಬಲ್‌

170 ನನ್ನ ಪ್ರಾರ್ಥನೆಗೆ ಕಿವಿಗೊಡು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

170 ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ, ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

170 ನನ್ನ ವಿಜ್ಞಾಪನೆ ಸೇರಲಿ ನಿನ್ನ ಸನ್ನಿಧಿಗೆ I ಉದ್ಧರಿಸೆನ್ನನು ನಿನ್ನ ನುಡಿಗೆ ತಕ್ಕಹಾಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

170 ನನ್ನ ವಿಜ್ಞಾಪನೆಯು ನಿನ್ನ ಸನ್ನಿಧಿಗೆ ಸೇರಲಿ; ನಿನ್ನ ನುಡಿಗೆ ತಕ್ಕಂತೆ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

170 ನನ್ನ ಬೇಡಿಕೆಯು ನಿಮ್ಮ ಸನ್ನಿಧಿ ಸೇರಲಿ; ನಿಮ್ಮ ವಾಗ್ದಾನದ ಪ್ರಕಾರ ನನ್ನನ್ನು ಬಿಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:170
9 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಿನ್ನ ವಾಗ್ದಾನದಂತೆ ನನ್ನನ್ನು ರಕ್ಷಿಸು.


ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು.


“ದೇವರಾದ ಯೆಹೋವನೇ, ಈಗ ನೀನು ನನ್ನ ಬಗ್ಗೆ ಮಾತನಾಡಿರುವೆ. ನಾನು ನಿನ್ನ ಸೇವಕ. ನೀನು ನನ್ನ ಕುಲದ ಬಗ್ಗೆಯೂ ವಾಗ್ದಾನ ಮಾಡಿರುವೆ. ನಿನ್ನ ವಾಗ್ದಾನಗಳನ್ನು ನೆರವೇರಿಸು. ನೀನು ವಾಗ್ದಾನ ಮಾಡಿದ ಕಾರ್ಯಗಳನ್ನು ಮಾಡು.


ನನಗೆ ಕಿವಿಗೊಡು. ಬೇಗನೆ ಬಂದು, ನನ್ನನ್ನು ರಕ್ಷಿಸು. ನನಗೆ ಬಂಡೆಯೂ ನನ್ನ ಆಶ್ರಯಸ್ಥಾನವೂ ಕೋಟೆಯೂ ಆಗಿದ್ದು ನನ್ನನ್ನು ಕಾಪಾಡು!


ನಾನು ನಿನ್ನವನು, ನನ್ನನ್ನು ರಕ್ಷಿಸು! ನಿನ್ನ ಆಜ್ಞೆಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ.


ಆದರೆ ಯೆಹೂದದ ರಾಜನಾದ ಚಿದ್ಕೀಯನೇ, ದಯವಿಟ್ಟು ನಾನು ಹೇಳುವದನ್ನು ಕೇಳು. ನನ್ನ ಕೋರಿಕೆಯನ್ನು ದಯವಿಟ್ಟು ಕೇಳು. ನನ್ನನ್ನು ಲಿಪಿಕಾರನಾದ ಯೆಹೋನಾಥಾನನ ಮನೆಗೆ ತಿರುಗಿ ಕಳುಹಿಸಬೇಡ. ಇದೇ ನನ್ನ ಬೇಡಿಕೆ. ನೀನು ನನ್ನನ್ನು ಮತ್ತೆ ಅಲ್ಲಿಗೆ ಕಳುಹಿಸಿದರೆ ನಾನು ಅಲ್ಲಿ ಸತ್ತುಹೋಗುತ್ತೇನೆ” ಎಂದನು.


ಅವರೆಲ್ಲರೂ ಅವನಿಗೆ, “ಯೆರೆಮೀಯನೇ, ನಮ್ಮ ಬೇಡಿಕೆಯನ್ನು ದಯವಿಟ್ಟು ಕೇಳು. ಯೆಹೂದ ಕುಲದಲ್ಲಿ ಅಳಿದುಳಿದ ಎಲ್ಲಾ ಜನರಿಗಾಗಿ ನಿನ್ನ ದೇವರಾದ ಯೆಹೋವನನ್ನು ಪ್ರಾರ್ಥಿಸು. ಯೆರೆಮೀಯನೇ, ನಮ್ಮಲ್ಲಿ ಈಗ ಬಹಳ ಜನ ಉಳಿದಿಲ್ಲವೆಂಬುದು ನಿನಗೆ ಗೊತ್ತಿದೆ. ಒಂದು ಕಾಲದಲ್ಲಿ ನಾವು ಬಹಳ ಜನರಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು