ಕೀರ್ತನೆಗಳು 119:29 - ಪರಿಶುದ್ದ ಬೈಬಲ್29 ಮೋಸಮಾರ್ಗದಲ್ಲಿ ಜೀವಿಸಲು ನನ್ನನ್ನು ಬಿಡಬೇಡ. ನಿನ್ನ ಉಪದೇಶಗಳಿಂದ ಮಾರ್ಗದರ್ಶನ ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ತಪ್ಪಾದ ಮಾರ್ಗವನ್ನು ನನ್ನಿಂದ ದೂರಮಾಡು, ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮಿಥ್ಯಮಾರ್ಗವನು ನನಗೆ ದೂರಮಾಡಯ್ಯಾ I ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ವಿುಥ್ಯಾಮಾರ್ಗವನ್ನು ನನಗೆ ದೂರಮಾಡು; ನಿನ್ನ ಧರ್ಮಶಾಸ್ತ್ರವನ್ನು ನನಗೆ ಅನುಗ್ರಹಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ವಂಚನೆಯುಳ್ಳ ಮಾರ್ಗದಿಂದ ನನ್ನನ್ನು ಕಾಪಾಡಿರಿ; ನನಗೆ ಕೃಪೆ ನೀಡಿ ನಿಮ್ಮ ನಿಯಮವನ್ನು ನನಗೆ ಬೋಧನೆ ಮಾಡಿರಿ. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.