Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:33 - ಪರಿಶುದ್ದ ಬೈಬಲ್‌

33 ಯೆಹೋವನೇ, ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು, ಆಗ ಅವುಗಳನ್ನು ಅನುಸರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೋವನೇ, ನಿನ್ನ ಕಟ್ಟಳೆಗಳ ಮಾರ್ಗವನ್ನು ನನಗೆ ಉಪದೇಶಿಸು, ಕಡೆಯವರೆಗೂ ಅದನ್ನೇ ಅನುಸರಿಸಿ ನಡೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಿನ್ನ ನಿಬಂಧನೆಯನು, ಪ್ರಭು, ಕಲಿಸೆನಗೆ I ಅದರಂತೆಯೇ ನಡೆಯುವೆನು ಕಡೆಯವರೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೋವನೇ, ನಿನ್ನ ನಿಬಂಧನೆಗಳ ಮಾರ್ಗವನ್ನು ಉಪದೇಶಿಸು; ಕಡೇತನಕ ಅದರಲ್ಲಿಯೇ ನಡೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಯೆಹೋವ ದೇವರೇ, ನಿಮ್ಮ ತೀರ್ಪುಗಳ ವಿವರವನ್ನು ನನಗೆ ಬೋಧಿಸಿರಿ; ಆಗ ನಾನು ಅವುಗಳನ್ನು ಅಂತ್ಯದವರೆಗೂ ಹಿಂಬಾಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:33
15 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಿಮಗೆ ವಿಶೇಷವಾದ ವರವನ್ನು ದಯಪಾಲಿಸಿರುವನು. ಅದು ನಿಮ್ಮಲ್ಲಿ ಇನ್ನೂ ಇದೆ. ಆದ್ದರಿಂದ ನಿಮಗೆ ಯಾವ ಉಪದೇಶಕರ ಅಗತ್ಯವೂ ಇಲ್ಲ. ಆತನು ನಿಮಗೆ ಕೊಟ್ಟಿರುವ ವರವು ನಿಮಗೆ ಎಲ್ಲವನ್ನೂ ಉಪದೇಶಿಸುತ್ತದೆ. ಅದು ನಿಜವಾದುದು, ಸುಳ್ಳಲ್ಲ. ಆದ್ದರಿಂದ ಅದರ ಉಪದೇಶಕ್ಕನುಸಾರವಾಗಿ ನೀವು ಆತನಲ್ಲಿ ನೆಲೆಗೊಂಡಿರಿ.


ನಿನ್ನ ಮಕ್ಕಳು ದೇವರನ್ನು ಅನುಸರಿಸುವರು. ಆತನು ಅವರಿಗೆ ಬೋಧಿಸುವನು. ನಿನ್ನ ಮಕ್ಕಳಿಗೆ ನಿಜವಾದ ಶಾಂತಿ ಇರುವದು.


ದೇವರು ನಿಮ್ಮಲ್ಲಿ ಒಳ್ಳೆಯ ಕಾರ್ಯವನ್ನು ಆರಂಭಿಸಿ ನಡೆಸಿಕೊಂಡು ಬರುತ್ತಿದ್ದಾನೆ. ಯೇಸು ಕ್ರಿಸ್ತನು ಮತ್ತೆ ಬಂದಾಗ ದೇವರು ಆ ಕಾರ್ಯವನ್ನು ಸಂಪೂರ್ಣಗೊಳಿಸುವನೆಂದು ನನಗೆ ಭರವಸೆ ಇದೆ.


ಯೆಹೋವನೇ, ನಿನಗೆ ಸ್ತೋತ್ರವಾಗಲಿ. ನಿನ್ನ ಕಟ್ಟಳೆಗಳನ್ನು ನನಗೆ ಉಪದೇಶಿಸು.


‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.


ಆದರೆ ಕಡೆಯವರೆಗೂ ದೃಢವಾಗಿರುವವನು ರಕ್ಷಣೆಹೊಂದುತ್ತಾನೆ.


“ಜಯಗಳಿಸುವವನಿಗೆ ಮತ್ತು ನಾನು ಅಪೇಕ್ಷಿಸುವುದನ್ನು ಕೊನೆಯವರೆಗೆ ಮಾಡುವವನಿಗೆ ಜನಾಂಗಗಳ ಮೇಲಿನ ಅಧಿಕಾರವನ್ನು ನೀಡುತ್ತೇನೆ:


ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.


ನಿನ್ನ ಕಟ್ಟಳೆಗಳಿಗೆಲ್ಲಾ ಯಾವಾಗಲೂ ವಿಧೇಯನಾಗಿರಲು ಮನಸ್ಸುಮಾಡಿದ್ದೇನೆ.


ನಾನು ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿದ್ದೇನೆ. ದಯವಿಟ್ಟು ನನ್ನನ್ನು ಕೈಬಿಡಬೇಡ!


ನಾನು ಮೌನವಾಗಿದ್ದೆನು. ಒಳ್ಳೆಯದನ್ನೂ ಹೇಳದೆ ಸುಮ್ಮನಿದ್ದೆನು. ಆದರೆ ನನ್ನ ವೇದನೆಯು ಹೆಚ್ಚಾಯಿತು.


ಆತನ ಒಡಂಬಡಿಕೆಗೆ ಸಂಪೂರ್ಣಹೃದಯದಿಂದ ವಿಧೇಯರಾಗುವವರು ಧನ್ಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು