ಕೀರ್ತನೆಗಳು 119:4 - ಪರಿಶುದ್ದ ಬೈಬಲ್4 ಯೆಹೋವನೇ, ನಮಗೆ ಆಜ್ಞೆಗಳನ್ನು ಕೊಟ್ಟವನೂ ನೀನೇ. ಅವುಗಳಿಗೆ ಸಂಪೂರ್ಣವಾಗಿ ವಿಧೇಯರಾಗಬೇಕೆಂದು ನಮಗೆ ಹೇಳಿದವನೂ ನೀನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ನೇಮಗಳನು ಪ್ರಭೂ, ನೀನೆ ವ್ಯಕ್ತಪಡಿಸಿರುವೆಯಯ್ಯಾ I ಜಾಗರೂಕತೆಯಿಂದ ಪಾಲಿಸಬೇಕೆಂದು ನೀ ವಿಧಿಸಿರುವೆಯಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ನೇಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡಿಸಬೇಕೆಂದು ನೀನೇ ಆಜ್ಞಾಪಿಸಿರುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರೇ, ನಿಮ್ಮ ಸೂತ್ರಗಳನ್ನು ಪೂರ್ಣವಾಗಿ ಕೈಗೊಳ್ಳಬೇಕೆಂದು ನೀವು ಆಜ್ಞಾಪಿಸಿದ್ದೀರಿ. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
ಅರಸನಾದ ಅರ್ತಷಸ್ತನೆಂಬ ನಾನು ಈ ರಾಜಾಜ್ಞೆಯನ್ನು ಹೊರಡಿಸುತ್ತಿದ್ದೇನೆ: ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ರಾಜಧನವನ್ನು ಇಟ್ಟುಕೊಂಡಿರುವ ಎಲ್ಲಾ ಸಂಸ್ಥಾನಾಧಿಕಾರಿಗಳಿಗೆ ನನ್ನ ಆಜ್ಞೆ ಏನೆಂದರೆ, ಎಜ್ರನಿಗೆ ಬೇಕಾದುದನ್ನು ಅವರು ಒದಗಿಸಬೇಕು. ಎಜ್ರನು ಪರಲೋಕದ ದೇವರ ಯಾಜಕನೂ ಆತನ ಕಟ್ಟಳೆಗಳ ಬೋಧಕನೂ ಆಗಿದ್ದಾನೆ. ನನ್ನ ಈ ಆಜ್ಞೆಗೆ ಸಂಪೂರ್ಣವಾಗಿಯೂ ತ್ವರಿತವಾಗಿಯೂ ವಿಧೇಯರಾಗಬೇಕು.