ಕೀರ್ತನೆಗಳು 119:53 - ಪರಿಶುದ್ದ ಬೈಬಲ್53 ನಿನ್ನ ಉಪದೇಶಗಳನ್ನು ಅನುಸರಿಸದ ದುಷ್ಟರನ್ನು ನಾನು ಕಾಣುವಾಗ ಬಹುಕೋಪಗೊಳ್ಳುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ನಿನ್ನ ಧರ್ಮಶಾಸ್ತ್ರ ಭ್ರಷ್ಟರಾದ ದುಷ್ಟರಿಗಾಗಿ, ಕೋಪಗೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ನಿನ್ನ ಶಾಸ್ತ್ರದ ಭ್ರಷ್ಠರನು ಕಂಡಾಗ I ನನಗೆ ಬರುತ್ತದೆ ಕೋಪೋದ್ರೇಕ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ನಿನ್ನ ಧರ್ಮಶಾಸ್ತ್ರಭ್ರಷ್ಟರಾದ ದುಷ್ಟರಿಗಾಗಿ ಉರಿಗೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ53 ನಿಮ್ಮ ನಿಯಮವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ, ರೋಷವು ನನ್ನನ್ನು ಆವರಿಸಿಕೊಂಡಿದೆ. ಅಧ್ಯಾಯವನ್ನು ನೋಡಿ |
ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.