Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:55 - ಪರಿಶುದ್ದ ಬೈಬಲ್‌

55 ರಾತ್ರಿಯಲ್ಲಿ ನಾನು ನಿನ್ನ ಹೆಸರನ್ನೂ ನಿನ್ನ ಉಪದೇಶಗಳನ್ನೂ ಜ್ಞಾಪಿಸಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ, ನಿನ್ನ ಧರ್ಮಶಾಸ್ತ್ರವನ್ನು ಕೈಗೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ರಾತ್ರಿಯೊಳೂ ಮಾಡಿದೆ ನಿನ್ನ ನಾಮಸ್ಮರಣೆಯನು I ಕೈಗೊಂಡೆನು ಹೇ ಪ್ರಭೂ, ನಿನ್ನ ಧರ್ಮಶಾಸ್ತ್ರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ಯೆಹೋವನೇ, ರಾತ್ರಿಯಲ್ಲಿ ನಿನ್ನ ನಾಮವನ್ನು ಸ್ಮರಿಸಿಕೊಳ್ಳುತ್ತೇನೆ; ನಿನ್ನ ಧರ್ಮಶಾಸ್ತ್ರವನ್ನು ಕೈಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಯೆಹೋವ ದೇವರೇ, ರಾತ್ರಿಯಲ್ಲಿ ನಿಮ್ಮ ನಾಮಸ್ಮರಣೆ ಮಾಡುವುದರಿಂದ, ನಿಮ್ಮ ನಿಯಮವನ್ನು ಕೈಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:55
14 ತಿಳಿವುಗಳ ಹೋಲಿಕೆ  

ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು.


ಹಗಲಲ್ಲಿ ಯೆಹೋವನು ನನಗೆ ನಿಜಪ್ರೀತಿಯನ್ನು ತೋರುವುದರಿಂದ ಜೀವಸ್ವರೂಪನಾದ ಆತನಿಗೆ ಪ್ರತಿ ರಾತ್ರಿಯಲ್ಲಿಯೂ ನೂತನ ಕೀರ್ತನೆಯನ್ನು ಹಾಡುವೆ; ಆತನಲ್ಲಿ ಪ್ರಾರ್ಥಿಸುವೆ.


ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.


ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ. ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು.


ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.


ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು.


ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು.


ನಿನ್ನ ಸೇವಕನಾದ ನನಗೆ ದಯೆತೋರು. ಆಗ ನಾನು ಜೀವದಿಂದಿದ್ದು ನಿನ್ನ ಆಜ್ಞೆಗಳಿಗೆ ವಿಧೇಯನಾಗುವೆನು.


ರಾತ್ರಿಯಲ್ಲಿ, ನಾನು ಮಾಡುತ್ತಿದ್ದ ಗಾನವನ್ನು ನೆನಸಿಕೊಳ್ಳುವೆನು; ಆಂತರ್ಯದಲ್ಲಿ ಮಾತಾಡುತ್ತಾ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವೆನು.


ನಿನ್ನ ಉಪದೇಶಗಳನ್ನು ಎಂದೆಂದಿಗೂ ಅನುಸರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು