ಕೀರ್ತನೆಗಳು 119:57 - ಪರಿಶುದ್ದ ಬೈಬಲ್57 ಯೆಹೋವನೇ, ನನ್ನ ಪಾಲು ನೀನೇ; ನಿನ್ನ ಆಜ್ಞೆಗಳಿಗೆ ವಿಧೇಯನಾಗುವುದೇ ನನ್ನ ಕರ್ತವ್ಯವೆಂದು ನಿರ್ಧರಿಸಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಯೆಹೋವನೇ, ನನ್ನ ಪಾಲು ನೀನೇ, ನಿನ್ನ ವಾಕ್ಯಗಳನ್ನು ಕೈಗೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಹೇ ಪ್ರಭು, ನೀನೇ ನನ್ನ ಪಾಲಿನ ಸ್ವಾಸ್ತ್ಯ I ನಿನ್ನ ವಾಕ್ಯದ ಪಾಲನೆಯೆ ನಾಗೈದ ನಿರ್ಣಯ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)57 ಯೆಹೋವನೇ, ನನ್ನ ಪಾಲು ನೀನೇ; ನಿನ್ನ ವಾಕ್ಯಗಳನ್ನು ಕೈಕೊಳ್ಳುವೆನೆಂದು ನಿರ್ಣಯಿಸಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಯೆಹೋವ ದೇವರೇ, ನೀವೇ ನನ್ನ ಪಾಲು; ನಿಮ್ಮ ವಾಕ್ಯಗಳನ್ನು ಪಾಲಿಸುವೆನೆಂದು ನಾನು ಪ್ರಮಾಣ ಮಾಡಿದ್ದೇನೆ. ಅಧ್ಯಾಯವನ್ನು ನೋಡಿ |
“ನೀವು ಯೆಹೋವನ ಸೇವೆಮಾಡಲು ಇಷ್ಟಪಡದಿದ್ದರೆ ಯಾರ ಸೇವೆಯನ್ನು ಮಾಡಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆ ಇದ್ದಾಗ ಪೂಜಿಸುತ್ತಿದ್ದ ದೇವರುಗಳ ಸೇವೆಮಾಡುವಿರೋ ಅಥವಾ ಈ ಪ್ರದೇಶದಲ್ಲಿದ್ದ ಅಮೋರಿಯರ ದೇವತೆಗಳ ಸೇವೆಮಾಡುವಿರೋ ಎಂಬುದನ್ನು ನೀವು ಇಂದು ನಿರ್ಧರಿಸಬೇಕು. ಆಯ್ಕೆ ನಿಮಗೆ ಬಿಟ್ಟಿದ್ದು. ಆದರೆ ನಾನು ಮತ್ತು ನನ್ನ ಕುಟುಂಬದವರು ಯೆಹೋವನನ್ನೇ ಸೇವಿಸುತ್ತೇವೆ” ಅಂದನು.