Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:62 - ಪರಿಶುದ್ದ ಬೈಬಲ್‌

62 ನಿನ್ನ ಒಳ್ಳೆಯ ನಿರ್ಧಾರಗಳಿಗಾಗಿ ಕೃತಜ್ಞತೆ ಸಲ್ಲಿಸಲು ನಾನು ಮಧ್ಯರಾತ್ರಿಯಲ್ಲಿ ಎದ್ದೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

62 ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು, ಮಧ್ಯರಾತ್ರಿಯಲ್ಲಿ ಏಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

62 ನ್ಯಾಯಯುತ ನಿನ್ನ ವಿಧಿಗೋಸ್ಕರ ವಂದಿಸಲು I ನಾನು ಎಚ್ಚರಗೊಳ್ಳುವೆ ಮಧ್ಯರಾತ್ರಿಯೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

62 ನಿನ್ನ ನೀತಿವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡಲು ಮಧ್ಯರಾತ್ರಿಯಲ್ಲಿ ಏಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

62 ನಿಮ್ಮ ನೀತಿಯುಳ್ಳ ನಿಯಮಗಳಿಗಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಮಧ್ಯರಾತ್ರಿಯಲ್ಲಿ ಏಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:62
12 ತಿಳಿವುಗಳ ಹೋಲಿಕೆ  

ಸುಮಾರು ಮಧ್ಯರಾತ್ರಿಯಲ್ಲಿ ಪೌಲ ಸೀಲರು ಪ್ರಾರ್ಥನೆ ಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಮರುದಿನ ಮುಂಜಾನೆ, ಇನ್ನೂ ಕತ್ತಲೆ ಇರುವಾಗಲೇ ಯೇಸು ಎದ್ದು ಪ್ರಾರ್ಥಿಸುವುದಕ್ಕಾಗಿ ಏಕಾಂತವಾದ ಸ್ಥಳಕ್ಕೆ ಹೋದನು.


ಹಗಲಲ್ಲಿ ಯೆಹೋವನು ನನಗೆ ನಿಜಪ್ರೀತಿಯನ್ನು ತೋರುವುದರಿಂದ ಜೀವಸ್ವರೂಪನಾದ ಆತನಿಗೆ ಪ್ರತಿ ರಾತ್ರಿಯಲ್ಲಿಯೂ ನೂತನ ಕೀರ್ತನೆಯನ್ನು ಹಾಡುವೆ; ಆತನಲ್ಲಿ ಪ್ರಾರ್ಥಿಸುವೆ.


ನಿನ್ನ ನೀತಿಯ ವಿಧಿನಿಯಮಗಳಿಗಾಗಿ ನಾನು ದಿನಕ್ಕೆ ಏಳು ಸಲ ನಿನ್ನನ್ನು ಕೊಂಡಾಡುವೆನು.


ನಾನು ನಿನ್ನ ನ್ಯಾಯವನ್ನೂ ನೀತಿಯನ್ನೂ ಕಲಿತಂತೆಲ್ಲಾ ನಿನ್ನನ್ನು ಕೊಂಡಾಡುವೆನು.


ಹೀಗಿರಲು ಧರ್ಮಶಾಸ್ತ್ರ ಪರಿಶುದ್ಧವಾದದ್ದು. ಆಜ್ಞೆಯು ಪರಿಶುದ್ಧವೂ ನ್ಯಾಯವೂ ಒಳ್ಳೆಯದೂ ಆಗಿದೆ.


ಸೂರ್ಯೋದಯದಲ್ಲಿ ಎದ್ದು ನಿನಗೆ ಮೊರೆಯಿಟ್ಟೆನು. ನಿನ್ನ ವಾಕ್ಯದಲ್ಲಿ ಭರವಸವಿಟ್ಟಿದ್ದೇನೆ.


ಯೆಹೋವನೇ, ನೀನು ನೀತಿಸ್ವರೂಪನಾಗಿರುವೆ. ನಿನ್ನ ತೀರ್ಪುಗಳು ನ್ಯಾಯವಾಗಿವೆ.


ಯೆಹೋವನೇ, ನಿನ್ನ ತೀರ್ಪುಗಳು ನ್ಯಾಯವಾದವುಗಳೆಂದು ನನಗೆ ತಿಳಿದಿದೆ. ನೀನು ನನ್ನನ್ನು ಶಿಕ್ಷಿಸಿದ್ದು ನನ್ನ ದೃಷ್ಟಿಯಲ್ಲಿ ನ್ಯಾಯವಾಗಿತ್ತು.


ಯೆಹೋವನಲ್ಲಿಡುವ ಭಯಭಕ್ತಿಯು ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದು. ಯೆಹೋವನ ವಿಧಿಗಳು ಯಥಾರ್ಥವಾಗಿವೆ; ಅವು ಯಾವಾಗಲೂ ನ್ಯಾಯಾನುಸಾರವಾಗಿವೆ.


ನಾನು ನಿಮಗೆ ಈ ಹೊತ್ತು ಕೊಡುವ ಉಪದೇಶಗಳಿಗೆ ನ್ಯಾಯದಲ್ಲೂ ಒಳ್ಳೆಯದರಲ್ಲೂ ಸರಿಸಮಾನವಾದ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಬೇರೆ ಯಾವ ದೊಡ್ಡ ದೇಶವೂ ಹೊಂದಿಲ್ಲ!


ನಿನ್ನ ವಿಧಿನಿಯಮಗಳು ಒಳ್ಳೆಯವೇ. ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು