Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:73 - ಪರಿಶುದ್ದ ಬೈಬಲ್‌

73 ನಿನ್ನ ಕೈಗಳು ನನ್ನನ್ನು ರೂಪಿಸಿದವು. ನಿನ್ನ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಸಹಾಯಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

73 ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು, ನಿನ್ನ ಆಜ್ಞೆಗಳನ್ನು ಕಲಿಯುವುದಕ್ಕೆ ನನಗೆ ಬುದ್ಧಿಯನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

73 ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

73 ನಿನ್ನ ಕೈಗಳು ನನ್ನನ್ನು ರೂಪಿಸಿ ನಿಲ್ಲಿಸಿದವು; ನಿನ್ನ ಆಜ್ಞೆಗಳನ್ನು ಕಲಿಯುವದಕ್ಕೆ ನನಗೆ ಬುದ್ಧಿಯನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

73 ನಿಮ್ಮ ಕೈಗಳು ನನ್ನನ್ನು ನಿರ್ಮಿಸಿ ರೂಪಿಸಿದವು; ನಿಮ್ಮ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಅರಿವನ್ನು ನೀಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:73
17 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!


ದೇವರು ನನ್ನನ್ನು ನನ್ನ ತಾಯಿಯ ಗರ್ಭದಲ್ಲಿ ನಿರ್ಮಿಸಿದನು. ದೇವರು ನನ್ನ ಸೇವಕಸೇವಕಿಯರನ್ನೂ ನಿರ್ಮಿಸಿದನು. ದೇವರು ನಮ್ಮೆಲ್ಲರನ್ನು ನಮ್ಮ ತಾಯಂದಿರ ಗರ್ಭಗಳಲ್ಲಿ ರೂಪಿಸಿದನು.


ನಾನು ಹೇಳುತ್ತಿರುವ ಈ ಸಂಗತಿಗಳನ್ನು ಕುರಿತು ಆಲೋಚಿಸು. ಈ ಸಂಗತಿಗಳನ್ನೆಲ್ಲ ಅರ್ಥಮಾಡಿಕೊಳ್ಳುವ ವಿವೇಕವನ್ನು ಪ್ರಭುವು ನಿನಗೆ ದಯಪಾಲಿಸುವನು.


ನಾನು ನಿನ್ನ ಸೇವಕ, ನಿನ್ನ ಒಡಂಬಡಿಕೆಯನ್ನು ಗ್ರಹಿಸಿಕೊಳ್ಳಲು ನನಗೆ ಬೇಕಾದ ವಿವೇಕವನ್ನು ದಯಪಾಲಿಸು.


ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.


ಆದರೆ ಮನುಷ್ಯರಲ್ಲಿರುವ ದೇವರಾತ್ಮನು ಅಂದರೆ ಸರ್ವಶಕ್ತನಾದ ದೇವರ ‘ಉಸಿರು’ ಮನುಷ್ಯರಿಗೆ ಜ್ಞಾನವನ್ನು ಕೊಡುತ್ತದೆ.


ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು. ಆಗ ನಿನ್ನ ಉಪದೇಶಗಳಿಗೆ ಸಂಪೂರ್ಣವಾಗಿ ವಿಧೇಯನಾಗುವೆನು.


ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.


ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ.


ಯೆಹೋವನೇ, ನನ್ನ ಕೂಗಿಗೆ ಕಿವಿಗೊಡು. ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಜ್ಞಾನಿಯನ್ನಾಗಿ ಮಾಡು.


ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ, ಆತನು ಭೂಪರಲೋಕಗಳನ್ನು ಉಂಟುಮಾಡಿದನು. ಅರಸನಾದ ದಾವೀದನಿಗೆ ಒಬ್ಬ ಜ್ಞಾನವುಳ್ಳ ಮಗನನ್ನು ಅನುಗ್ರಹಿಸಿದ್ದಾನೆ. ನಿನಗೆ ಜ್ಞಾನವೂ ತಿಳುವಳಿಕೆಯೂ ಇರುವದರಿಂದ ನೀನು ದೇವಾಲಯವನ್ನು ಕಟ್ಟುವೆ ಮತ್ತು ನಿನಗೂ ಒಂದು ಅರಮನೆಯನ್ನು ಕಟ್ಟುವೆ.


ನಿನ್ನ ಕಟ್ಟಳೆಗಳು ಸದಾಕಾಲ ನೀತಿಯ ಕಟ್ಟಳೆಗಳಾಗಿವೆ. ಅವುಗಳನ್ನು ಅರ್ಥಮಾಡಿಕೊಳ್ಳಲು ನನಗೆ ಸಹಾಯಮಾಡು, ಆಗ ಬದುಕಿಕೊಳ್ಳುವೆನು.


ಯೆಹೋವನು ನಿನ್ನನ್ನು ಇಸ್ರೇಲರಿಗೆ ಅರಸನನ್ನಾಗಿ ಮಾಡುವನು. ನೀನು ಆತನ ಆಜ್ಞೆಗಳನ್ನು ಅನುಸರಿಸಿ, ದಕ್ಷತೆಯಿಂದ ರಾಜ್ಯಭಾರ ಮಾಡುವದಕ್ಕೆ ಬೇಕಾದ ಜ್ಞಾನವನ್ನು ನಿನಗೆ ದಯಪಾಲಿಸಲಿ.


ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು