Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:81 - ಪರಿಶುದ್ದ ಬೈಬಲ್‌

81 ನಿನ್ನ ರಕ್ಷಣೆಗಾಗಿ ಕಾಯುತ್ತಾ ಸಾಯುವಂತಾಗಿದ್ದೇನೆ. ನಿನ್ನ ವಾಕ್ಯಗಳಲ್ಲಿಯೇ ಭರವಸವಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

81 ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು, ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

81 ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

81 ನಿನ್ನ ರಕ್ಷಣೆಯ ಬಯಕೆಯಿಂದಲೇ ನನ್ನ ಮನವು ಬಲಗುಂದಿತು; ನಾನು ನಿನ್ನ ವಾಕ್ಯದಲ್ಲೇ ನಿರೀಕ್ಷೆಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

81 ನನ್ನ ಪ್ರಾಣವು ನಿಮ್ಮ ರಕ್ಷಣೆಯ ಬಯಕೆಯಿಂದಲೇ ಕುಗ್ಗಿ ಹೋಗುತ್ತಿದೆ, ಆದರೂ ನಾನು ನಿಮ್ಮ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:81
15 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.


ಇಗೋ, ನಿನ್ನ ಆಜ್ಞೆಗಳನ್ನು ಪ್ರೀತಿಸುವೆನು. ನನಗೆ ಒಳ್ಳೆಯವನಾಗಿದ್ದು ನನ್ನನ್ನು ಉಜ್ಜೀವನಗೊಳಿಸು.


ನನ್ನ ಹೃದಯವೂ ದೇಹವೂ ನಾಶವಾಗುತ್ತವೆ; ಆದರೆ ಎಂದೆಂದಿಗೂ ನೀನೇ ನನಗೆ ಆಶ್ರಯಸ್ಥಾನವೂ ನನ್ನ ದೇವರೂ ಆಗಿರುವೆ.


ಜೆರುಸಲೇಮಿನ ಸ್ತ್ರೀಯರೇ, ನೀವು ನನ್ನ ಪ್ರಿಯನನ್ನು ಕಂಡರೆ, ಅವನಿಗೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ತಿಳಿಸಿರಿ.


ನನ್ನ ಆಶ್ರಯವೂ ಗುರಾಣಿಯೂ ನೀನೇ. ಯೆಹೋವನೇ, ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವೆ.


ನನ್ನನ್ನು ಸಂತೈಸಿ ಉಜ್ಜೀವನಗೊಳಿಸು; ನಾನು ನಿನ್ನ ಉಪದೇಶಗಳಲ್ಲಿಯೇ ಆನಂದಿಸುತ್ತಿರುವೆ.


ನಾನು ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವುದರಿಂದ ನಿನ್ನ ಭಕ್ತರು ನನ್ನನ್ನು ಕಂಡಾಗ ಸಂತೋಷಿಸಲಿ.


ನನ್ನನ್ನು ಗೇಲಿಮಾಡುವ ಜನರಿಗೆ ಆಗ ನಾನು ಉತ್ತರ ಕೊಡುವೆನು. ಯೆಹೋವನೇ, ನಿನ್ನ ಮಾತುಗಳಲ್ಲೇ ನಾನು ಭರವಸವಿಟ್ಟಿದ್ದೇನೆ.


ನಿನ್ನ ನಿರ್ಧಾರಗಳನ್ನು ತಿಳಿದುಕೊಳ್ಳಲು ಯಾವಾಗಲೂ ನಾನು ಹಂಬಲಿಸುತ್ತಿದ್ದೇನೆ.


ನಾನು ಕಣ್ಣಾರೆ ದೇವರನ್ನು ನೋಡುವೆನು. ಬೇರೆ ಯಾರೂ ಅಲ್ಲದೆ ನಾನೇ ಆತನನ್ನು ನೋಡುವೆನು. ಈ ನಿರೀಕ್ಷೆಯಿಂದ ನನ್ನ ಹೃದಯವು ಉಲ್ಲಾಸಗೊಂಡಿದೆ.


ಯೆಹೋವನೇ, ನಿನ್ನ ಶಾಶ್ವತ ಪ್ರೀತಿಯನ್ನು ನನಗೆ ತೋರಿಸು. ನಿನ್ನ ವಾಗ್ದಾನದಂತೆ ನನ್ನನ್ನು ರಕ್ಷಿಸು.


ನಿನ್ನ ಸತ್ಯೋಪದೇಶಗಳನ್ನು ನಾನು ಯಾವಾಗಲೂ ಮಾತಾಡುವಂತಾಗಲಿ. ನಿನ್ನ ಜ್ಞಾನದ ನಿರ್ಧಾರಗಳನ್ನೇ ನಾನು ಆಶ್ರಯಿಸಿಕೊಂಡಿದ್ದೇನೆ.


ನಾನು ಯೆಹೋವನ ಸಹಾಯಕ್ಕಾಗಿ ಕಾಯುತ್ತಿದ್ದೇನೆ. ನನ್ನ ಪ್ರಾಣವು ಆತನಿಗಾಗಿ ಕಾದುಕೊಂಡಿರುವುದು. ಆತನು ನುಡಿಯನ್ನು ನಂಬಿಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು