Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:85 - ಪರಿಶುದ್ದ ಬೈಬಲ್‌

85 ನಿನ್ನ ಕಟ್ಟಳೆಗಳಿಗೆ ವಿರೋಧವಾಗಿ ಗರ್ವಿಷ್ಠರು ನನಗೆ ಗುಂಡಿಗಳನ್ನು ಅಗೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

85 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ತೋಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

85 ಗುಂಡಿ ಅಗೆದಿಹರು ಎನಗೆ ಗರ್ವಿಷ್ಠರು I ಧರ್ಮಶಾಸ್ತ್ರ ಪಾಲಿಸದ ಆ ದುರುಳರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

85 ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದ ಗರ್ವಿಷ್ಠರು ನನಗಾಗಿ ಗುಂಡಿಗಳನ್ನು ಅಗೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

85 ನಿಮ್ಮ ನಿಯಮಕ್ಕೆ ವಿರೋಧವಾಗಿ ಅಹಂಕಾರಿಗಳು ನನಗೆ ಬಲೆಹಿಡಿಯಲು ಕುಣಿಗಳನ್ನು ಅಗೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:85
8 ತಿಳಿವುಗಳ ಹೋಲಿಕೆ  

ನೀಚನು ಕೆಟ್ಟಕಾರ್ಯಗಳನ್ನು ಆಲೋಚಿಸಿಕೊಳ್ಳುವನು. ಅವನ ಮಾತುಗಳು ಬೆಂಕಿಯಂತೆ ನಾಶಕರ.


ನಾನು ನಿರಪರಾಧಿಯಾಗಿದ್ದರೂ ಅವರು ನನಗೆ ಬಲೆಯೊಡ್ಡಿದ್ದಾರೆ. ನಿಷ್ಕಾರಣವಾಗಿ ಅವರು ನನಗೆ ಬಲೆಯೊಡ್ಡಿದ್ದಾರೆ.


ನಾನು ಯೆಹೂದದ ಜನರಿಗೆ ಒಳ್ಳೆಯದನ್ನು ಮಾಡಿದೆನು. ಆದರೆ ಅವರೀಗ ನನಗೆ ಕೆಟ್ಟದ್ದನ್ನು ಮಾಡುತ್ತಿದ್ದಾರೆ. ಈಗ ಅವರು ನನ್ನನ್ನು ಕೊಲ್ಲುವುದಕ್ಕಾಗಿ ಒಂದು ಗುಂಡಿಯನ್ನು ತೋಡಿದ್ದಾರೆ. ಯೆಹೋವನೇ, ನಾನು ಮಾಡಿದ್ದು ನಿನ್ನ ಜ್ಞಾಪಕದಲ್ಲಿದೆಯೇ? ನಾನು ನಿನ್ನ ಎದುರಿಗೆ ನಿಂತುಕೊಂಡು ಈ ಜನರಿಗೆ ಒಳ್ಳೆಯದನ್ನು ಮಾಡೆಂದೂ ಅವರ ಮೇಲೆ ಕೋಪಗೊಳ್ಳಬಾರದೆಂದೂ ನಿನ್ನಲ್ಲಿ ಕೇಳಿಕೊಂಡೆ.


ಗರ್ವಿಷ್ಠರಿಗೆ ಅವಮಾನವಾಗಲಿ; ಅವರು ನನ್ನ ಬಗ್ಗೆ ಸುಳ್ಳು ಹೇಳಿದ್ದಾರೆ. ನಾನಾದರೋ ನಿನ್ನ ನಿಯಮಗಳನ್ನು ಧ್ಯಾನಿಸುವೆನು.


ಅವರು ಇತರರನ್ನು ಬಲೆಗೆ ಸಿಕ್ಕಿಸಿ ಕೇಡುಮಾಡಬೇಕೆಂದಿದ್ದಾರೆ; ಆದರೆ ತಾವೇ ಆ ಬಲೆಗಳಿಗೆ ಸಿಕ್ಕಿಕೊಳ್ಳುವರು.


ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ; ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ.


ಅವರ ಮನೆಗಳಲ್ಲಿ ರೋಧನದ ಧ್ವನಿ ಬರಲಿ. ನೀನು ಫಕ್ಕನೆ ಅವರ ಮುಂದೆ ಶತ್ರುವನ್ನು ತಂದು ನಿಲ್ಲಿಸಿದಾಗ ಅವರು ಅಳುವಂತಾಗಲಿ. ನನ್ನ ವೈರಿಗಳು ನನ್ನನ್ನು ಬಲೆಯಲ್ಲಿ ಸಿಕ್ಕಿಸಬೇಕೆಂದು ಪ್ರಯತ್ನ ಮಾಡಿದ್ದಾರೆ. ನಾನು ಸಿಕ್ಕಿಹಾಕಿಕೊಳ್ಳುವಂಥ ಮತ್ತು ನನ್ನ ಕಣ್ಣಿಗೆ ಕಾಣದ ಗುಪ್ತವಾದ ಬಲೆಗಳನ್ನು ಅವರು ಹಾಕಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು