Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:97 - ಪರಿಶುದ್ದ ಬೈಬಲ್‌

97 ನಿನ್ನ ಉಪದೇಶಗಳು ನನಗೆ ಪ್ರಿಯವಾಗಿವೆ; ದಿನವೆಲ್ಲಾ ಅವುಗಳನ್ನೇ ಧ್ಯಾನಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

97 ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

97 ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ I ನಾನದರಲೇ ದಿನವೆಲ್ಲಾ ಧ್ಯಾನಮಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

97 ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ; ದಿನವೆಲ್ಲಾ ಅದೇ ನನ್ನ ಧ್ಯಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

97 ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:97
14 ತಿಳಿವುಗಳ ಹೋಲಿಕೆ  

ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು.


ಆಗ ಜ್ಞಾನವು ನಿನ್ನ ಹೃದಯದ ಒಳಗೆ ಬರುವುದು; ನಿನ್ನ ಆತ್ಮವು ತಿಳುವಳಿಕೆಯೊಡನೆ ಸಂತೋಷವಾಗಿರುವುದು.


ಯೆಹೋವನೇ, ನಿನ್ನ ನಿಯಮಗಳಿಗೆ ಆಸಕ್ತಿಯಿಂದ ವಿಧೇಯನಾಗಿದ್ದೇನೆ. ನಿನ್ನ ಶಾಶ್ವತ ಪ್ರೀತಿಗನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ಆ ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಆ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.


ನಿನ್ನ ಆಜ್ಞೆಗಳನ್ನು ಕೊಂಡಾಡುವೆನು, ಅವುಗಳನ್ನು ಧ್ಯಾನಿಸುವೆನು. ಅವು ನನಗೆ ಇಷ್ಟವಾಗಿವೆ.


ನಾನು ನಿನ್ನ ಕಟ್ಟಳೆಗಳನ್ನು ಅನುಸರಿಸಿದೆನು. ಅವು ನನಗೆ ಬಹು ಪ್ರಿಯವಾಗಿವೆ.


ನಿನ್ನ ಧರ್ಮಶಾಸ್ತ್ರವನ್ನು ಪ್ರೀತಿಸುವವರಿಗೆ ಸಂಪೂರ್ಣ ಸಮಾಧಾನವಿರುವುದು. ಅವರನ್ನು ಯಾವುದೂ ಬೀಳಿಸಲಾರದು.


ನಾನು ನಿನ್ನ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುವೆನು.


ಅವನು ಆ ಪುಸ್ತಕವನ್ನು ತನ್ನೊಂದಿಗಿಟ್ಟುಕೊಂಡು ಅದನ್ನು ತನ್ನ ಜೀವಮಾನ ಪೂರ್ತಿ ಪದೇಪದೇ ಓದುತ್ತಿರಬೇಕು. ಯಾಕೆಂದರೆ ಧರ್ಮಶಾಸ್ತ್ರವು ಆಜ್ಞಾಪಿಸುವ ಪ್ರತಿಯೊಂದಕ್ಕೂ ಸಂಪೂರ್ಣವಾಗಿ ವಿಧೇಯನಾಗಲು ಅವನು ಕಲಿತುಕೊಳ್ಳಬೇಕು.


ನಿನಗೆ ಪೂರ್ಣವಾಗಿ ನಂಬಿಗಸ್ತರಾಗಿಲ್ಲದವರನ್ನು ದ್ವೇಷಿಸುವೆನು. ನಾನಾದರೋ ನಿನ್ನ ಉಪದೇಶಗಳನ್ನು ಪ್ರೀತಿಸುವೆನು.


ಸ್ನೇಹಭಾವವಿಲ್ಲದವನು ಮಾಡುವುದೆಲ್ಲ ಸ್ವಾರ್ಥತೆಯಿಂದಲೇ, ಪ್ರತಿಯೊಂದು ಒಳ್ಳೆಯದರ ವಿರುದ್ಧವಾಗಿ ಅವನು ವಾದಿಸುತ್ತಾನೆ.


ನಾನು ನಿನ್ನ ನಿಯಮಗಳನ್ನು ಚರ್ಚಿಸುವೆನು ನಿನ್ನ ಜೀವಮಾರ್ಗವನ್ನು ಅನುಸರಿಸುವೆನು.


ನಿನ್ನ ಆಜ್ಞೆಗಳಲ್ಲಿ ಆನಂದಿಸುವೆನು; ಅವು ನನಗೆ ಇಷ್ಟವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು