ಕೀರ್ತನೆಗಳು 12:4 - ಪರಿಶುದ್ದ ಬೈಬಲ್4 “ನಾವು ಪ್ರಮುಖರಾಗಲು ನಮ್ಮ ಸುಳ್ಳುಗಳೇ ನಮಗೆ ಆಧಾರ. ನಮ್ಮ ನಾಲಿಗೆಗಳು ಇರುವಾಗ ನಮಗೆ ಒಡೆಯರಾಗಲು ಯಾರಿಗೆ ಸಾಧ್ಯ?” ಎಂದು ಅವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು, “ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾರು?” ಎಂದು ಹೇಳಿಕೊಳ್ಳುತ್ತಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು - ನಮ್ಮ ಮಾತುಗಳಿಗೆ ತಡೆಯಿಲ್ಲವಲ್ಲಾ; ನಮ್ಮ ತುಟಿಗಳು ನಮ್ಮವೇ; ನಮಗೆ ಒಡೆಯನು ಯಾವನು ಎಂದು ಹೇಳಿಕೊಳ್ಳುತ್ತಾರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು; ನಮ್ಮ ತುಟಿಗಳೇ ನಮಗೆ ಸಂರಕ್ಷಣೆ ನಮ್ಮ ಮೇಲೆ ಒಡೆಯನು ಯಾರು?” ಅಧ್ಯಾಯವನ್ನು ನೋಡಿ |
ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.
ಈ ಪೀಳಿಗೆಯ ಜನರೇ, ಯೆಹೋವನ ಸಂದೇಶದ ಕಡೆಗೆ ಗಮನ ಕೊಡಿ, “ಇಸ್ರೇಲಿನ ಜನರಿಗೆ ನಾನು ಮರಳುಗಾಡಿನಂತೆ ಇರುವೆನೇ? ನಾನು ಗಾಢಾಂಧಕಾರಮಯವಾದ ಮತ್ತು ಅಪಾಯಕಾರಿಯಾದ ಭೂಮಿಯಂತೆ ಇರುವೆನೇ? ನನ್ನ ಜನರು, ‘ನಮಗೆ ಇಷ್ಟವಾದ ಮಾರ್ಗವನ್ನು ಅನುಸರಿಸಲು ನಾವು ಸ್ವತಂತ್ರರಾಗಿದ್ದೇವೆ. ಯೆಹೋವನೇ, ನಾವು ಪುನಃ ನಿನ್ನಲ್ಲಿಗೆ ಬರುವದಿಲ್ಲ’ ಎಂದು ಹೇಳುತ್ತಾರೆ. ಅವರು ಹಾಗೆ ಏಕೆ ಹೇಳುತ್ತಾರೆ?