Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 12:5 - ಪರಿಶುದ್ದ ಬೈಬಲ್‌

5 ಆದರೆ ಯೆಹೋವನು ಹೇಳುವುದೇನೆಂದರೆ: “ದುಷ್ಟರು ಕುಗ್ಗಿಹೋದವರಿಂದ ಕದ್ದುಕೊಂಡಿದ್ದಾರೆ. ಅಸಹಾಯಕರು ದುಃಖದಿಂದ ನಿಟ್ಟುಸಿರು ಬಿಡುತ್ತಿದ್ದಾರೆ. ಆದ್ದರಿಂದ ನಾನು ಎದ್ದುನಿಂತು, ಆಯಾಸಗೊಂಡಿರುವ ಅವರನ್ನು ಕಾಪಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು - ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸಿ ಅವರನ್ನು ಸುರಕ್ಷಿತವಾಗಿ ಇರಿಸುವೆನು ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 12:5
27 ತಿಳಿವುಗಳ ಹೋಲಿಕೆ  

ಕಷ್ಟದಲ್ಲಿದ್ದ ಈ ಬಡಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದನು.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನಿಗೇ ಅವಮಾನ ಮಾಡುತ್ತಾನೆ. ಬಡವರಿಗೆ ಕರುಣೆ ತೋರುವವನು ತನ್ನ ಸೃಷ್ಟಿಕರ್ತನನ್ನೇ ಸನ್ಮಾನಿಸುತ್ತಾನೆ.


ಜನರು ನಿಮ್ಮ ಹೊಲಗಳಲ್ಲಿ ಕೆಲಸ ಮಾಡಿದರೂ ನೀವು ಅವರಿಗೆ ಕೂಲಿಯನ್ನು ಕೊಡಲಿಲ್ಲ. ಅವರು ನಿಮ್ಮ ವಿರುದ್ಧವಾಗಿ ಗೋಳಾಡುತ್ತಿದ್ದಾರೆ. ಅವರು ನಿಮ್ಮ ಬೆಳೆಗಳ ಸುಗ್ಗಿಯನ್ನು ಮಾಡಿದರು. ಈಗ ಪರಲೋಕ ಸೇನೆಯ ಅಧಿಪತಿಯಾದ ಪ್ರಭುವು ಅವರ ಗೋಳಾಟವನ್ನು ಕೇಳಿಸಿಕೊಂಡಿದ್ದಾನೆ.


ಯೆಹೋವನು ಹೀಗೆನ್ನುತ್ತಾನೆ, “ಈಗ ನಾನು ಎದ್ದುನಿಂತು ನನ್ನ ಮಹತ್ವವನ್ನು ತೋರಿಸುವೆನು. ಈಗ ನಾನು ಜನರಿಗೆ ಉನ್ನತೋನ್ನತನಾಗುವೆನು.


ದೇವರು ಬಡವರನ್ನು ದುಷ್ಟರ ನಿಂದನೆಯಿಂದಲೂ ಬಲಿಷ್ಠರ ಕೈಯಿಂದಲೂ ಕಾಪಾಡುವನು.


ಯೆಹೋವನೇ, ಎದ್ದೇಳು, ಕಾರ್ಯನಿರತನಾಗು! ದೇವರೇ, ಆ ದುಷ್ಟರನ್ನು ದಂಡಿಸು! ನಿಸ್ಸಹಾಯಕರನ್ನು ಮರೆತುಬಿಡಬೇಡ!


ದೇವರು ನಿನ್ನನ್ನು ನಿಂದನೆಯಿಂದ ತಪ್ಪಿಸುವನು. ನಾಶನದಲ್ಲಿಯೂ ನೀನು ಭಯಪಡುವ ಅಗತ್ಯವಿಲ್ಲ!


ಇದು ಸರ್ವಶಕ್ತನಾದ ಯೆಹೋವನು ಅದ್ಭುತವನ್ನು ನಡಿಸುತ್ತಾನೆಂಬುದಕ್ಕೆ ಗುರುತಾಗಿದೆ. ಜನರು ಯಾವಾಗಲಾದರೂ ಸರಿಯೇ ಸಹಾಯಕ್ಕಾಗಿ ಮೊರೆಯಿಟ್ಟರೆ ಆತನು ಸಹಾಯವನ್ನು ಕಳುಹಿಸುವನು. ಯೆಹೋವನು ಅವರನ್ನು ರಕ್ಷಿಸಲೂ ಕಾಪಾಡಲೂ ಒಬ್ಬನನ್ನು ಕಳುಹಿಸುವನು. ಆ ಮನುಷ್ಯನು ಬೇರೆಯವರಿಂದ ಶೋಷಿತರಾದವರನ್ನು ಸಂರಕ್ಷಿಸುವನು.


ತಂದೆಯು ಜನರನ್ನು ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನ್ನು ತೆಗೆದುಕೊಂಡಿರಬಹುದು. ತನ್ನ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನ್ನು ಅವನು ಮಾಡಿರಬಹುದು. ಆ ತಂದೆಯು ತನ್ನ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ.


ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು.


ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.


ಯೆಹೋವನೇ, ಅನಾಥರನ್ನೂ ಕುಗ್ಗಿಸಲ್ಪಟ್ಟವರನ್ನೂ ಸಂರಕ್ಷಿಸು. ಆಗ ಕೇವಲ ಮನುಷ್ಯರಿಂದ ಅವರಿಗೆ ಭಯವಾಗದು.


ಅವರು ಕುಯುಕ್ತಿಗಳನ್ನೇ ಮಾಡುತ್ತಾ ದೇವರ ಕಟ್ಟಳೆಗಳನ್ನೂ ಬುದ್ಧಿಮಾತುಗಳನ್ನೂ ಗಣನೆಗೆ ತೆಗೆದುಕೊಳ್ಳುವುದಿಲ್ಲ. ದೇವರ ವೈರಿಗಳು ಆತನ ಉಪದೇಶಗಳನ್ನು ಕಡೆಗಣಿಸುವರು.


ಆಗ ಇಸ್ರೇಲರು ಅನ್ಯದೇವರುಗಳನ್ನು ತೊರೆದು ಯೆಹೋವನನ್ನು ಆರಾಧಿಸಲು ಆರಂಭಿಸಿದರು. ಅವರು ಕಷ್ಟಪಡುತ್ತಿರುವುದನ್ನು ನೋಡಿ ಯೆಹೋವನು ಮರುಕಪಟ್ಟನು.


ಆದರೆ ಫರೋಹನು, “ಯೆಹೋವನು ಯಾರು? ನಾನು ಆತನಿಗೆ ಯಾಕೆ ವಿಧೇಯನಾಗಬೇಕು. ಇಸ್ರೇಲರನ್ನು ನಾನು ಯಾಕೆ ಹೋಗಗೊಡಿಸಬೇಕು. ನೀವು ಯೆಹೋವನೆಂದು ಕರೆಯುವ ಆತನನ್ನು ನಾನು ಅರಿಯೆನು, ಆದ್ದರಿಂದ ಇಸ್ರೇಲರನ್ನು ಹೋಗಗೊಡಿಸುವುದಿಲ್ಲ” ಅಂದನು.


ದೇವರೇ, ನೀನು ನಿನ್ನ ಭಕ್ತರಿಗಾಗಿ ಅಮೂಲ್ಯವಾದವುಗಳನ್ನು ಅಡಗಿಸಿಟ್ಟಿರುವೆ. ನಿನ್ನಲ್ಲಿ ಭರವಸವಿಟ್ಟಿರುವ ಜನರಿಗಾಗಿ ಎಲ್ಲರ ಮುಂದೆ ನೀನು ಮಾಡುವ ಒಳ್ಳೆಯ ಕಾರ್ಯಗಳು ಎಷ್ಟೋ ವಿಶೇಷವಾಗಿವೆ.


ಅವರು ಗೇಲಿಮಾಡುತ್ತಾ ಬೇರೆಯವರ ವಿರುದ್ಧ ಕೆಟ್ಟದ್ದನ್ನೇ ಮಾತಾಡುವರು. ಗರ್ವಿಷ್ಠರಾದ ಅವರು ಬೇರೆಯವರ ಮೇಲೆ ಬಲಾತ್ಕಾರ ನಡೆಸಲು ಸಂಚು ಮಾಡುವರು.


ಒಬ್ಬನ ಮಾತುಗಳು ಜೀವವನ್ನು ಉಳಿಸಬಲ್ಲವು ಅಥವಾ ಮರಣವನ್ನು ತರಬಲ್ಲವು. ಜನರು ತಮ್ಮ ಮಾತಿನ ಫಲವನ್ನು ಅನುಭವಿಸಲೇಬೇಕು.


ಅವರು ದೇವರಲ್ಲದ್ದಕ್ಕೆ ತಿರುಗಿಕೊಂಡರು. ಮೋಸದ ಬಿಲ್ಲಿನಂತೆ ಅವರಾದರು. ಅವರ ನಾಯಕರು ತಮ್ಮ ಶಕ್ತಿಯ ಬಗ್ಗೆ ಹೆಚ್ಚಳಪಟ್ಟರು. ಆದರೆ ಅವರು ಕತ್ತಿಯಲ್ಲಿ ಸಾಯುವರು. ಆಗ ಈಜಿಪ್ಟಿನ ಜನರು ಅವರನ್ನು ನೋಡಿ ನಗಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು