Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 122:4 - ಪರಿಶುದ್ದ ಬೈಬಲ್‌

4 ಇಸ್ರೇಲಿನ ಕುಲಗಳವರು ಅಂದರೆ ಯೆಹೋವನ ಕುಲಗಳವರು ಯೆಹೋವನ ಹೆಸರನ್ನು ಕೊಂಡಾಡಲು ಅಲ್ಲಿಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕುಲಗಳು ಅಂದರೆ ಯಾಹುವಿನ ಕುಲದವರು ಯೆಹೋವನ ನಾಮಕೀರ್ತನೆಗೋಸ್ಕರ ಇಲ್ಲಿಗೇ ಯಾತ್ರೆಮಾಡುತ್ತಿದ್ದರು. ಇದು ಇಸ್ರಾಯೇಲ್ಯರಲ್ಲಿದ್ದ ಕಟ್ಟಳೆಯಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅಲ್ಲಿಗೆ ಗೋತ್ರಗಳು, ಯೆಹೋವ ದೇವರು ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 122:4
16 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.


ಯೆಹೋವನು ತನ್ನ ಆಲಯಕ್ಕಾಗಿ ಚೀಯೋನನ್ನೇ ಆರಿಸಿಕೊಂಡನು.


“ಹೀಗೆ ಪ್ರತಿವರ್ಷ ಮೂರು ಸಲ ಗಂಡಸರೆಲ್ಲರೂ ಒಂದು ವಿಶೇಷ ಸ್ಥಳಕ್ಕೆ ದೇವರಾದ ಯೆಹೋವನ ಸನ್ನಿಧಿಗೆ ಬರಬೇಕು.


ನೀತಿಯ ಬಾಗಿಲುಗಳೇ, ನನಗೋಸ್ಕರ ತೆರೆಯಿರಿ, ನಾನು ಒಳಗೆ ಬಂದು ಯೆಹೋವನನ್ನು ಆರಾಧಿಸುತ್ತೇನೆ.


ಆತನು ಯೆಹೂದಕುಲವನ್ನೇ ಆರಿಸಿಕೊಂಡನು. ಆತನು ತನ್ನ ಪ್ರಿಯ ಚೀಯೋನ್ ಪರ್ವತವನ್ನೇ ಆರಿಸಿಕೊಂಡನು.


ಆಗ ನಿಮ್ಮ ಯೆಹೋವನು ತನ್ನ ಹೆಸರಿಗಾಗಿ ಒಂದು ಸ್ಥಳವನ್ನು ಆರಿಸಿಕೊಳ್ಳುವನು. ಆ ಸ್ಥಳಕ್ಕೆ ನೀವು ನಿಮ್ಮ ಸರ್ವಾಂಗಹೋಮಗಳನ್ನು ಮತ್ತು ಯಜ್ಞಾದಿಗಳನ್ನು ಸಮರ್ಪಿಸಬೇಕು; ನಿಮ್ಮ ಹರಕೆಯ ಕಾಣಿಕೆಗಳನ್ನು, ಚೊಚ್ಚಲ ಪಶುಗಳನ್ನು, ದಶಾಂಶವನ್ನು ಸಲ್ಲಿಸಬೇಕು.


ನಿಮ್ಮ ದೇವರಾದ ಯೆಹೋವನು ನಿಮ್ಮ ಕುಲದವರ ಪ್ರಾಂತ್ಯಗಳಿಂದ ಒಂದು ವಿಶೇಷ ಸ್ಥಳವನ್ನು ಆರಿಸಿಕೊಂಡು ಅದಕ್ಕೆ ತನ್ನ ಹೆಸರಿಡುವನು. ಅಲ್ಲಿ ಆತನ ಆಲಯ ಕಟ್ಟಲ್ಪಡುವುದು. ಆತನನ್ನು ಆರಾಧಿಸಲು ನೀವು ಅಲ್ಲಿಗೆ ಹೋಗಬೇಕು.


ಬಳಿಕ ಮೋಶೆ ಬೆಟ್ಟದಿಂದಿಳಿದು ಬಂದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.


(ನಂತರ ಆರೋನನು, ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮಾಡಿದನು. ಆರೋನನು ಮನ್ನದ ಭರಣಿಯನ್ನು ಒಡಂಬಡಿಕೆಯ ಮುಂದುಗಡೆಯಲ್ಲಿ ಇಟ್ಟನು.)


ಆತನು ಹೀಗೆನ್ನುತ್ತಾನೆ: “ನಿಮ್ಮ ಹೆಗಲಿನಿಂದ ಹೊರೆಯನ್ನು ತೆಗೆದುಹಾಕಿದೆನು. ಕೆಲಸಗಾರರ ಬುಟ್ಟಿಯನ್ನು ನೀವು ಬಿಸಾಕುವಂತೆ ಮಾಡಿದೆನು.


ಕೃತಜ್ಞತಾಗೀತೆಗಳೊಡನೆ ಆತನ ಪಟ್ಟಣಕ್ಕೆ ಬನ್ನಿರಿ. ಸ್ತುತಿಗೀತೆಗಳೊಡನೆ ಆತನ ಆಲಯಕ್ಕೆ ಬನ್ನಿರಿ. ಆತನನ್ನು ಸನ್ಮಾನಿಸುತ್ತಾ ಆತನ ಹೆಸರನ್ನು ಕೊಂಡಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು