ಕೀರ್ತನೆಗಳು 124:3 - ಪರಿಶುದ್ದ ಬೈಬಲ್3 ಶತ್ರುಗಳು ನಮ್ಮಮೇಲೆ ಕೋಪಗೊಂಡಾಗಲೆಲ್ಲಾ ನಮ್ಮನ್ನು ಜೀವಂತವಾಗಿ ನುಂಗಿಬಿಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು, ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಉರಿಗೊಳ್ಳುತಿದ್ದರು ಕಡುಗೋಪದಿಂದ ಖಂಡಿತ I ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಿಶ್ಚಯವಾಗಿ ಅವರು ಕೋಪದಿಂದ ಉರಿಗೊಂಡು ನಮ್ಮನ್ನು ಜೀವಸಹಿತ ನುಂಗಿಬಿಡುತ್ತಿದ್ದರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರು ನಮ್ಮ ಮೇಲೆ ರೋಷಗೊಂಡು ನಮ್ಮನ್ನು ನಾಶಮಾಡಿಬಿಡುತ್ತಿದ್ದರು. ಅಧ್ಯಾಯವನ್ನು ನೋಡಿ |
ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.
“ಹಿಂದಿನ ಕಾಲದಲ್ಲಿ, ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ನಮ್ಮನ್ನು ಹಾಳುಮಾಡಿದನು; ನಮ್ಮನ್ನು ಹಿಂಸಿಸಿದನು; ನಮ್ಮ ಜನರನ್ನು ಸೆರೆ ಒಯ್ದನು. ಆಗ ನಾವು ಒಂದು ಬರಿದಾದ ಪಾತ್ರೆಯಂತಾದೆವು. ಅವನು ನಮ್ಮ ಎಲ್ಲಾ ಉತ್ತಮ ವಸ್ತುಗಳನ್ನು ತೆಗೆದುಕೊಂಡು ಹೋದನು. ತನಗೆ ತೃಪ್ತಿಯಾಗುವವರೆಗೆ ಎಲ್ಲವನ್ನು ತಿಂದು ತೇಗಿದ ರಾಕ್ಷಸನಂತಿದ್ದನು. ಅವನು ನಮ್ಮೆಲ್ಲ ಉತ್ಕೃಷ್ಠ ವಸ್ತುಗಳನ್ನು ಕಿತ್ತುಕೊಂಡು ನಮ್ಮನ್ನು ದೂರ ಎಸೆದನು.