Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 124:7 - ಪರಿಶುದ್ದ ಬೈಬಲ್‌

7 ನಾವು ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದ್ದೇವೆ. ಬಲೆಯು ಹರಿದುಹೋದದ್ದರಿಂದ ನಾವು ತಪ್ಪಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾವು ಬೇಟೆಗಾರರ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 124:7
13 ತಿಳಿವುಗಳ ಹೋಲಿಕೆ  

ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವಾದ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.


ಬೇಟೆಗಾರನಿಂದ ತಪ್ಪಿಸಿಕೊಂಡು ಓಡುವ ಜಿಂಕೆಯಂತೆ ಆ ಸಾಲದ ಬಂಧನದಿಂದ ತಪ್ಪಿಸಿಕೊ. ಬಲೆಯಿಂದ ತಪ್ಪಿಸಿಕೊಂಡು ಹಾರುವ ಪಕ್ಷಿಯಂತೆ ನಿನ್ನನ್ನು ಬಿಡುಗಡೆ ಮಾಡಿಕೋ.


ಸೈತಾನನು ಆ ಜನರನ್ನು ತನ್ನ ಬಲೆಗೆ ಬೀಳಿಸಿ, ತನ್ನ ಅಪೇಕ್ಷೆಗೆ ತಕ್ಕಂತೆ ಅವರಿಂದ ಕಾರ್ಯಗಳನ್ನು ಮಾಡಿಸುತ್ತಿದ್ದಾನೆ. ಆದರೆ ಅವರು ಎಚ್ಚರಗೊಂಡು, ಸೈತಾನನು ತಮ್ಮನ್ನು ವಶಪಡಿಸಿ ಕೊಂಡಿರುವುದನ್ನು ಗುರುತಿಸಬಹುದು ಹಾಗೂ ಸೈತಾನನ ಬಲೆಯಿಂದ ತಪ್ಪಿಸಿಕೊಂಡು ಬಿಡುಗಡೆ ಹೊಂದಬಹುದು.


ನನ್ನ ಕಣ್ಣುಗಳು ಸಹಾಯಕ್ಕಾಗಿ ಯೆಹೋವನನ್ನೇ ದೃಷ್ಟಿಸುತ್ತಿವೆ. ಆತನು ನನ್ನನ್ನು ತೊಂದರೆಗಳಿಂದ ಖಂಡಿತವಾಗಿ ಬಿಡುಸುವನು.


ನಿನ್ನನ್ನು ಕೊಲ್ಲಲು ಒಬ್ಬ ವ್ಯಕ್ತಿಯು ಅಟ್ಟಿಸಿಕೊಂಡು ಬಂದರೆ, ನಿನ್ನ ದೇವರಾದ ಯೆಹೋವನು ನಿನ್ನ ಜೀವವನ್ನು ರಕ್ಷಿಸುತ್ತಾನೆ! ಆದರೆ ಯೆಹೋವನು ನಿನ್ನ ಶತ್ರುಗಳನ್ನು ಕವಣೆಯ ಕಲ್ಲನ್ನು ಎಸೆಯುವಂತೆ ಎಸೆದುಬಿಡುತ್ತಾನೆ!


ಅವರ ಮನೆಗಳಲ್ಲಿ ರೋಧನದ ಧ್ವನಿ ಬರಲಿ. ನೀನು ಫಕ್ಕನೆ ಅವರ ಮುಂದೆ ಶತ್ರುವನ್ನು ತಂದು ನಿಲ್ಲಿಸಿದಾಗ ಅವರು ಅಳುವಂತಾಗಲಿ. ನನ್ನ ವೈರಿಗಳು ನನ್ನನ್ನು ಬಲೆಯಲ್ಲಿ ಸಿಕ್ಕಿಸಬೇಕೆಂದು ಪ್ರಯತ್ನ ಮಾಡಿದ್ದಾರೆ. ನಾನು ಸಿಕ್ಕಿಹಾಕಿಕೊಳ್ಳುವಂಥ ಮತ್ತು ನನ್ನ ಕಣ್ಣಿಗೆ ಕಾಣದ ಗುಪ್ತವಾದ ಬಲೆಗಳನ್ನು ಅವರು ಹಾಕಿದ್ದಾರೆ.


ನಮ್ಮ ಜನರಲ್ಲಿ ದುಷ್ಟರಿದ್ದಾರೆ. ಅವರು ಪಕ್ಷಿಗಳ ಬಲೆಯನ್ನು ಮಾಡುವ ಬಲೆಗಾರರಂತಿದ್ದಾರೆ. ಅವರು ಬಲೆಗಳನ್ನು ಬೀಸುತ್ತಾರೆ. ಆದರೆ ಅವರು ಹಿಡಿಯುವುದು ಪಕ್ಷಿಗಳನ್ನಲ್ಲ, ಮನುಷ್ಯರನ್ನೇ.


ಅವನು ಆಯಾಸದಿಂದ ಬಲಹೀನನಾದಾಗ ಅವನ ಮೇಲೆ ದಾಳಿಮಾಡಿ ಹೆದರಿಸುವೆನು; ಆಗ ಅವನ ಜನರೆಲ್ಲರೂ ಓಡಿಹೋಗುತ್ತಾರೆ. ಆದರೆ ನಾನು ರಾಜನಾದ ದಾವೀದನನ್ನು ಮಾತ್ರ ಕೊಲ್ಲುತ್ತೇನೆ.


ಆದ್ದರಿಂದ ದಾವೀದನನ್ನು ಅಟ್ಟಿಸಿಕೊಂಡು ಹೋಗುವುದನ್ನು ಸೌಲನು ನಿಲ್ಲಿಸಿ ಫಿಲಿಷ್ಟಿಯರೊಡನೆ ಹೋರಾಡಲು ಹೋದನು. ಆದ್ದರಿಂದಲೇ ಜನರು ಆ ಜಾಗವನ್ನು “ಜಾರುಬಂಡೆ” ಎಂದು ಕರೆಯುತ್ತಾರೆ.


ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು