Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 125:1 - ಪರಿಶುದ್ದ ಬೈಬಲ್‌

1 ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು. ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವದಿಲ್ಲ, ಸದಾ ಸ್ಥಿರವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 125:1
41 ತಿಳಿವುಗಳ ಹೋಲಿಕೆ  

ಆತನು ನನಗೆ ಬಂಡೆಯೂ ರಕ್ಷಣೆಯೂ ಕೋಟೆಯೂ ಆಗಿದ್ದಾನೆ. ನಾನೆಂದಿಗೂ ಕದಲೆನು.


ಆಗ ದೂತನು: “ಈ ವಿಷಯವನ್ನು ಜನರಿಗೆ ತಿಳಿಸು, ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: ‘ನನ್ನ ಪಟ್ಟಣಗಳು ತಿರುಗಿ ಐಶ್ವರ್ಯದಿಂದ ತುಂಬುವವು. ಚೀಯೋನನ್ನು ನಾನು ಸಂತೈಸುವೆನು. ನಾನು ಜೆರುಸಲೇಮನ್ನು ನನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವೆನು’” ಎಂದನು.


ಯೆಹೋವನು ತನ್ನ ಸೇವಕರ ಪ್ರಾಣವನ್ನು ರಕ್ಷಿಸುವನು. ಆತನನ್ನು ಆಶ್ರಯಿಸಿಕೊಂಡಿರುವವರಲ್ಲಿ ಒಬ್ಬರಾದರೂ ನಾಶವಾಗುವುದಿಲ್ಲ.


ನನ್ನ ದೇವರೇ, ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನನ್ನನ್ನು ನಿರಾಶೆಗೊಳಿಸಬೇಡ. ವೈರಿಗಳು ನನ್ನನ್ನು ನೋಡಿ ಗೇಲಿ ಮಾಡದಂತಾಗಲಿ!


ನಾನು ಆಪತ್ತಿನಲ್ಲಿದ್ದಾಗ ಯೆಹೋವನಿಗೆ ಮೊರೆಯಿಟ್ಟೆನು. ಆತನು ನನಗೆ ಸದುತ್ತರವನ್ನು ದಯಪಾಲಿಸಿದನು.


ರೂಬೇನ್, ಮನಸ್ಸೆ, ಗಾದ್ ಕುಲಗಳ ಯೋಧರು ಯುದ್ಧಮಾಡುವಾಗ ದೇವರಲ್ಲಿ ಪ್ರಾರ್ಥಿಸಿದರು. ಅವರು ದೇವರ ಮೇಲೆ ಭರವಸೆಯಿಟ್ಟು ಸಹಾಯಕ್ಕಾಗಿ ಬೇಡಿಕೊಂಡದ್ದರಿಂದ ದೇವರು ಅವರಿಗೆ ಜಯವನ್ನು ಕೊಟ್ಟನು.


ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ. ನನಗೆ ಸಹಾಯವು ಎಲ್ಲಿಂದ ಬರುವುದು?


ಆತನೇ ನನಗೆ ಬಂಡೆಯೂ ರಕ್ಷಣೆಯೂ ಆಶ್ರಯದುರ್ಗವೂ ಆಗಿದ್ದಾನೆ.


ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.


“ಯೆಹೋವನ ಆಲಯಕ್ಕೆ ಹೋಗೋಣ” ಎಂದು ಜನರು ಹೇಳಿದಾಗ ನನಗೆ ಬಹು ಸಂತೋಷವಾಯಿತು.


ಅನೇಕ ದೇಶಗಳಿಂದ ಜನರು ಅಲ್ಲಿಗೆ ಹೋಗುವರು. “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ, ಯಾಕೋಬನ ದೇವರ ಆಲಯಕ್ಕೆ ನಾವು ಹೋಗೋಣ. ಆಗ ದೇವರು ನಮಗೆ ಜೀವಿತದ ಮಾರ್ಗವನ್ನು ಕಲಿಸುವನು. ಮತ್ತು ನಾವು ಆತನನ್ನು ಅನುಸರಿಸುವೆವು” ಎಂದು ಹೇಳುವರು. ದೇವರ ಉಪದೇಶವು, ಆತನ ಸಂದೇಶವು ಚೀಯೋನ್ ಬೆಟ್ಟದಲ್ಲಿರುವ ಜೆರುಸಲೇಮಿನಲ್ಲಿ ಪ್ರಾರಂಭವಾಗಿ ಪ್ರಪಂಚದಲ್ಲೆಲ್ಲಾ ಹಬ್ಬುತ್ತದೆ.


“ನನ್ನ ಸೇವಕನೇ, ನೀನು ಹೇಳತಕ್ಕ ಇಷ್ಟವಾದ ಮಾತುಗಳನ್ನು ನಿನ್ನ ಬಾಯಲ್ಲಿಡುತ್ತೇನೆ. ನಾನು ನನ್ನ ಕೈಗಳಿಂದ ನಿನ್ನನ್ನು ಮುಚ್ಚಿ ಕಾಪಾಡುವೆನು. ಹೊಸ ಭೂಮ್ಯಾಕಾಶಗಳನ್ನು ನಿರ್ಮಿಸಲು ನಾನು ನಿನ್ನನ್ನು ಉಪಯೋಗಿಸುತ್ತೇನೆ. ಚೀಯೋನಿಗೆ, ‘ನೀವು ನನ್ನ ಜನರು’ ಎಂದು ಹೇಳುವದಕ್ಕೆ ನಿನ್ನನ್ನು ಉಪಯೋಗಿಸುತ್ತೇನೆ.”


ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು.


ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!


ನಂತರ ನಾನು ನೋಡಿದಾಗ, ನನ್ನ ಎದುರಿನಲ್ಲಿಯೇ ಕುರಿಮರಿಯಾದಾತನು ಇದ್ದನು. ಆತನು ಚೀಯೋನ್ ಪರ್ವತದ ಮೇಲೆ ನಿಂತಿದ್ದನು. ಆತನ ಜೊತೆಯಲ್ಲಿ 1,44,000 ಜನರಿದ್ದರು. ಅವರ ಹಣೆಗಳ ಮೇಲೆ ಆತನ ಹೆಸರನ್ನು ಮತ್ತು ಆತನ ತಂದೆಯ ಹೆಸರನ್ನು ಬರೆಯಲಾಗಿತ್ತು.


ಆಗ ಆ ದೂತನು ಜನರಿಗೆ ತಿಳಿಸಲು ಈ ವಿಷಯವನ್ನು ನನಗೆ ಹೇಳಿದನು: ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ಜೆರುಸಲೇಮಿನ ಮೇಲೆಯೂ ಚೀಯೋನಿನ ಮೇಲೆಯೂ ನನಗೆ ಆಳವಾದ ಪ್ರೀತಿಯಿದೆ.


ವಿಜಯಿಗಳು ಚೀಯೋನ್ ಬೆಟ್ಟವನ್ನೇರಿ ಏಸಾವಿನ ಪರ್ವತಗಳಲ್ಲಿ ವಾಸಿಸುವ ಜನರನ್ನಾಳುವರು. ಆಗ ಸಾಮ್ರಾಜ್ಯವು ಯೆಹೋವನಿಗೆ ಸೇರುವುದು.


ಯೆಹೋವನು ಒಳ್ಳೆಯವನೂ ಸತ್ಯಸ್ವರೂಪನೂ ಆಗಿದ್ದಾನೆ. ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು.


ನೀವು ಕ್ರಿಸ್ತನ ಮೂಲಕ ದೇವರನ್ನು ನಂಬಿದ್ದೀರಿ. ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ನಂತರ ದೇವರು ಆತನಿಗೆ ಪ್ರಭಾವವನ್ನು ದಯಪಾಲಿಸಿದನು. ಆದ್ದರಿಂದ ನಿಮ್ಮ ನಂಬಿಕೆ ಮತ್ತು ನಿರೀಕ್ಷೆಗಳು ದೇವರಲ್ಲಿರಲಿ.


ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು.


ಯಾಕೆಂದರೆ ನುಸಿಯು ಅವರನ್ನು ಬಟ್ಟೆಯಂತೆ ತಿಂದುಹಾಕುವುದು. ಅವರು ಉಣ್ಣೆಯಂತಿರುವರು, ನುಸಿಯು ಅದನ್ನು ತಿಂದುಬಿಡುವುದು. ಆದರೆ ನನ್ನ ಒಳ್ಳೆಯತನವು ಶಾಶ್ವತವಾದದ್ದು. ನನ್ನ ರಕ್ಷಣೆಯು ಸದಾಕಾಲವಿರುವುದು.”


ಆ ಸೈನ್ಯದವರು ತಮ್ಮ ದೇಶಕ್ಕೆ ಸಂದೇಶವಾಹಕರನ್ನು ಕಳುಹಿಸುತ್ತಾರೆ. ಆ ಸಂದೇಶವು ಏನಿರಬಹುದು? “ಫಿಲಿಷ್ಟಿಯರು ಸೋತುಹೋದರು. ಆದರೆ ಯೆಹೋವನು ಚೀಯೋನನ್ನು ಬಲಪಡಿಸಿದ್ದಾನೆ. ಆತನ ಬಡಜನರು ರಕ್ಷಣೆಗಾಗಿ ಅಲ್ಲಿಗೆ ಹೋಗಿದ್ದಾರೆ” ಎಂಬುದೇ ಆ ಸಂದೇಶ.


ಯೆಹೋವನು ತನ್ನನ್ನು ಆರಾಧಿಸುವ ಜನರಲ್ಲೇ ಸಂತೋಷಪಡುವನು. ಆತನು ತನ್ನ ಶಾಶ್ವತ ಪ್ರೀತಿಯಲ್ಲಿ ಭರವಸವಿಟ್ಟಿರುವವರನ್ನು ಮೆಚ್ಚಿಕೊಳ್ಳುವನು.


ಯೆಹೋವನು ನಮ್ಮ ಕಡೆ ಇಲ್ಲದಿದ್ದಿದ್ದರೆ ನಮ್ಮ ಗತಿ ಏನಾಗುತ್ತಿತ್ತು? ಇಸ್ರೇಲರೇ, ನನಗೆ ಉತ್ತರಹೇಳಿ.


ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.


ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.


ಮರುದಿನ ಮುಂಜಾನೆ ಯೆಹೋಷಾಫಾಟನ ಸೈನ್ಯವು ತೆಕೋವದ ಅರಣ್ಯಕ್ಕೆ ಹೊರಟಿತು. ಅವರು ಹೊರಡುವ ಮುಂಚೆ ಯೆಹೋಷಾಫಾಟನು ಎದ್ದುನಿಂತು, “ಜೆರುಸಲೇಮಿನವರೇ, ಯೆಹೂದ ಪ್ರಾಂತ್ಯದವರೇ, ನನ್ನ ಮಾತನ್ನು ಕೇಳಿರಿ. ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಡಿರಿ. ಆಗ ನೀವು ಸ್ಥಿರಗೊಳ್ಳುವಿರಿ. ಯೆಹೋವನ ಪ್ರವಾದಿಗಳ ಮೇಲೆ ಭರವಸವಿಡಿರಿ; ಆಗ ನೀವು ಜಯಗಳಿಸುವಿರಿ” ಎಂದು ಹೇಳಿದನು.


ಅವರು ಸೋತುಹೋದರು; ಯುದ್ಧದಲ್ಲಿ ಸತ್ತುಹೋದರು; ನಾವಾದರೋ ಜಯಗಳಿಸಿದೆವು! ನಾವು ಜಯಪ್ರದರಾಗಿ ನಿಂತುಕೊಳ್ಳುವೆವು!


ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.


ಇನ್ನೆಷ್ಟರವರೆಗೆ ನೀವು ನನ್ನ ಮೇಲೆ ಆಕ್ರಮಣ ಮಾಡುವಿರಿ? ನಾನು ಬಾಗಿದ ಗೋಡೆಯಂತೆಯೂ ಬೀಳಲಿರುವ ಪ್ರಾಕಾರದಂತೆಯೂ ಇದ್ದೇನೆ.


ನನ್ನ ರಕ್ಷಣೆಯೂ ಮಾನವೂ ದೇವರೇ. ಆತನೇ ನನಗೆ ಭದ್ರವಾದ ದುರ್ಗವೂ ಆಶ್ರಯಸ್ಥಾನವೂ ಆಗಿದ್ದಾನೆ.


ಆಪತ್ತು ಬಂದಾಗ ದುಷ್ಟನು ನಾಶವಾಗುವನು. ಆದರೆ ಒಳ್ಳೆಯವನು ಸದಾಕಾಲ ಬಲವಾಗಿ ನಿಲ್ಲುವನು.


ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.


ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು