Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 126:2 - ಪರಿಶುದ್ದ ಬೈಬಲ್‌

2 ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯ ಜನಾಂಗಗಳು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ನಮ್ಮ ಬಾಯಿ ಬಲು ನಗೆಯಿಂದಲೂ ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು - ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆಂದು ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 126:2
21 ತಿಳಿವುಗಳ ಹೋಲಿಕೆ  

ದೇವರು ಇನ್ನು ಮೇಲೆ ನಿನ್ನ ಬಾಯನ್ನು ನಗೆಯಿಂದಲೂ ನಿನ್ನ ತುಟಿಗಳನ್ನು ಉತ್ಸಾಹಧ್ವನಿಯಿಂದಲೂ ತುಂಬಿಸುವನು.


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


ದೇವರೇ, ನಿನ್ನ ನೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನೀನು ಅದ್ಭುತಕಾರ್ಯಗಳನ್ನು ಮಾಡಿರುವೆ. ದೇವರೇ, ನಿನ್ನಂಥ ದೇವರು ಬೇರೆಲ್ಲೂ ಇಲ್ಲ.


ಅಲ್ಲಿ ಹರ್ಷದ ಮತ್ತು ಸಂತೋಷದ ಧ್ವನಿ ಕೇಳಿಬರುವುದು. ಅಲ್ಲಿ ವಧುವರರ ಸಂತೋಷದ ಧ್ವನಿ ಕೇಳಿಸುವುದು. ಜನರು ಯೆಹೋವನ ಆಲಯಕ್ಕೆ ತಮ್ಮ ಕಾಣಿಕೆಗಳನ್ನು ಅರ್ಪಿಸಲು ಬರುವ ಧ್ವನಿಯು ಕೇಳಿಸುವುದು. ಅವರು ‘ಸರ್ವಶಕ್ತನಾದ ಯೆಹೋವನನ್ನು ಸ್ತುತಿಸಿರಿ. ಆತನು ಒಳ್ಳೆಯವನು. ಆತನ ಕರುಣೆಯು ಶಾಶ್ವತವಾಗಿರುವುದು’ ಎಂದು ಹೇಳುವರು. ನಾನು ಯೆಹೂದಕ್ಕೆ ಪುನಃ ಸುಸ್ಥಿತಿಯನ್ನು ತರುವುದರಿಂದ ಜನರು ಹೀಗೆ ಹೇಳುವರು. ಅದು ಮೊದಲಿನಂತೆ ಆಗುವುದು.” ಯೆಹೋವನು ಈ ವಿಷಯಗಳನ್ನು ಹೇಳಿದನು.


ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲಿಗೆ ಜಯವನ್ನು ತರುವನು! ಆಗ ದೇವರು ತನ್ನ ಜನರನ್ನು ಸೆರೆವಾಸದಿಂದ ಬರಮಾಡುವನು. ಯಾಕೋಬನೇ ಉಲ್ಲಾಸಿಸು! ಇಸ್ರೇಲೇ ಬಹು ಸಂತೋಷಪಡು.


ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.


ಇಸ್ರೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾದಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವ ಪಡೆದುಕೊಂಡಂತಾಗುವುದಿಲ್ಲವೇ?


ದೇವರೇ, ನನ್ನನ್ನು ಮರಣದಂಡನೆಯಿಂದ ತಪ್ಪಿಸು. ನನ್ನ ದೇವರೇ, ನನ್ನನ್ನು ರಕ್ಷಿಸುವಾತನು ನೀನೇ. ನಿನ್ನ ಒಳ್ಳೆಯತನವನ್ನು ಕುರಿತು ನಾನು ಹಾಡುವೆನು!


ಚೀಯೋನ್ ಪರ್ವತದ ಮೇಲಿರುವಾತನು ಇಸ್ರೇಲನ್ನು ರಕ್ಷಿಸುವನೇ? ಯೆಹೋವನ ಪ್ರಜೆಗಳು ಸೆರೆ ಒಯ್ಯಲ್ಪಟ್ಟು ಸೆರೆವಾಸದಲ್ಲಿದ್ದಾರೆ. ಯೆಹೋವನಾದರೋ ತನ್ನ ಪ್ರಜೆಗಳನ್ನು ಬಿಡಿಸಿಕೊಂಡು ಬರುವನು; ಆಗ ಯಾಕೋಬ್ಯರು ಉಲ್ಲಾಸಗೊಳ್ಳುವರು; ಇಸ್ರೇಲರು ಹರ್ಷಿಸುವರು.


ಯೆಹೋವನು ಒಳ್ಳೆಯವನು; ಆತನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ಕರುಣೆ ಮತ್ತು ನಿಜಪ್ರೀತಿ ಇಸ್ರೇಲರಿಗೆ ಶಾಶ್ವತವಾಗಿದೆ ಎಂದು ಹಾಡಿದರು. ಆಗ ಉಳಿದವರು ಸಂತೋಷದಿಂದ ಆರ್ಭಟಿಸಿದರು; ದೇವಾಲಯದ ಅಸ್ತಿವಾರ ಹಾಕಿದ್ದಕ್ಕೆ ಯೆಹೋವನನ್ನು ಸ್ತುತಿಸಿದರು.


ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು: ‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’


ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.


ಯೆಹೋವನು ಹೀಗೆಂದನು: “ಸಂತೋಷದಿಂದಿರಿ, ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷಧ್ವನಿ ಮಾಡಿರಿ. ಸ್ತೋತ್ರಗೀತೆಗಳನ್ನು ಹಾಡಿರಿ. ‘ಯೆಹೋವನು ತನ್ನ ಜನರನ್ನು ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನ್ನು ಆತನು ರಕ್ಷಿಸಿದನು’ ಎಂದು ಕೂಗಿರಿ.


ದೇವರು ಹೇಳುವುದೇನೆಂದರೆ, “ಯೆಹೋವನಾದ ನಾನೇ ಹಾಳುಬಿದ್ದ ಆ ಕಟ್ಟಡಗಳನ್ನು ಮತ್ತೆ ಕಟ್ಟಿದೆನೆಂದೂ ಮತ್ತು ಬರಿದಾಗಿದ್ದ ಈ ದೇಶದಲ್ಲಿ ಬೆಳೆಯಿಸುವೆನೆಂದೂ ನಿನ್ನ ಸುತ್ತಲೂ ಇನ್ನೂ ಇರುವ ಜನಾಂಗಗಳು ತಿಳಿದುಕೊಳ್ಳುವವು. ನಾನೇ ಯೆಹೋವನು. ಇವುಗಳನ್ನು ನಾನೇ ಹೇಳಿದ್ದೇನೆ ಮತ್ತು ನಾನೇ ಇವುಗಳನ್ನು ನೆರವೇರಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು