ಕೀರ್ತನೆಗಳು 127:2 - ಪರಿಶುದ್ದ ಬೈಬಲ್2 ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಬೆಳಗಾಗುವದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ. ಅಧ್ಯಾಯವನ್ನು ನೋಡಿ |
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.