ಕೀರ್ತನೆಗಳು 128:2 - ಪರಿಶುದ್ದ ಬೈಬಲ್2 ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ, ನೀನು ಧನ್ಯನು, ನಿನಗೆ ಶುಭವಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಕಷ್ಟಾರ್ಜಿತವನ್ನು ನೀನೇ ಅನುಭವಿಸುವಿ; ನೀನು ಧನ್ಯನು, ನಿನಗೆ ಶುಭವಿರುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ. ಅಧ್ಯಾಯವನ್ನು ನೋಡಿ |
ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.
ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟುಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.