Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 132:16 - ಪರಿಶುದ್ದ ಬೈಬಲ್‌

16 ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು. ನನ್ನ ಭಕ್ತರು ಉಲ್ಲಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೊದಿಸುವೆನಿದರ ಯಾಜಕರಿಗೆ ರಕ್ಷಣಾವಸ್ತ್ರವನು I ಸಾಧುಸಂತರು ಮಾಡುವರಿದರ ಹರ್ಷೋದ್ಗಾರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಜಕರಿಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸುವೆನು; ಭಕ್ತರು ಉತ್ಸಾಹಧ್ವನಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇಲ್ಲಿನ ಯಾಜಕರಿಗೆ ರಕ್ಷಣೆಯನ್ನು ಹೊದಿಸುವೆನು; ಚೀಯೋನಿನ ನಂಬಿಗಸ್ತ ಸೇವಕರು ಉತ್ಸಾಹಧ್ವನಿಯಿಂದ ಹಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 132:16
9 ತಿಳಿವುಗಳ ಹೋಲಿಕೆ  

“ದೇವರಾದ ಯೆಹೋವನೇ, ಎದ್ದು ನಿನ್ನ ಸಾಮರ್ಥ್ಯವನ್ನು ತೋರಿಸುವ ಒಡಂಬಡಿಕೆಯ ಪೆಟ್ಟಿಗೆಯೊಡನೆ ನಿನ್ನ ವಾಸಸ್ಥಳಕ್ಕೆ ಬಾ. ನಿನ್ನ ಯಾಜಕರು ರಕ್ಷಣಾವಸ್ತ್ರವನ್ನು ಧರಿಸಿಕೊಂಡಿರಲಿ; ನಿನ್ನನ್ನು ಪ್ರೀತಿಸುವವರು ನಿನ್ನ ಒಳ್ಳೆಯತನದಲ್ಲಿ ಸಂತೋಷಪಡಲಿ.


ನಿನ್ನ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಂಡಿದ್ದಾರೆ. ನಿನ್ನ ಭಕ್ತರು ಉಲ್ಲಾಸಿಸಲಿ.


ನೀವು ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ಆಗ ನಿಮಗೆ ದೊರೆಯುವುದು ಮತ್ತು ನಿಮ್ಮ ಆನಂದವು ಪರಿಪೂರ್ಣವಾಗುವುದು.


ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.


ಚೀಯೋನ್ ನಗರಿಯೇ, ಹರ್ಷಿಸು! ಜೆರುಸಲೇಮ್ ಜನರೇ, ಸಂತೋಷದಿಂದ ಆರ್ಭಟಿಸಿರಿ. ನಿಮ್ಮ ಅರಸನು ನಿಮ್ಮ ಬಳಿಗೆ ಬರುತ್ತಿದ್ದಾನೆ! ಆತನು ವಿಜಯಶಾಲಿಯಾದ ನೀತಿವಂತನಾಗಿದ್ದಾನೆ. ಆದರೆ ದೀನನಂತೆ ಕತ್ತೆಯ ಮೇಲೆ, ಹೌದು, ಕತ್ತೆಯ ಮರಿಯ ಮೇಲೆ ಸವಾರಿ ಮಾಡಿಕೊಂಡು ಬರುವನು.


“ಎಫ್ರಾಯೀಮನು ಸುಳ್ಳುದೇವರುಗಳಿಂದ ನನ್ನನ್ನು ಸುತ್ತುವರಿದನು. ಇಸ್ರೇಲಿನ ಜನರು ನನಗೆ ವಿರುದ್ಧವಾಗಿ ಎದ್ದರು. ಆದರೆ ಅವರು ನಾಶವಾದರು. ಯೆಹೂದನು ಈಗಲೂ ದೇವರ ಜೊತೆಯಲ್ಲಿ ನಡೆಯುತ್ತಿದ್ದಾನೆ. ಯೆಹೂದನು ಪರಿಶುದ್ಧರಿಗೆ ನಿಷ್ಠೆಯಿಂದಿದ್ದಾನೆ.”


ಯೆಹೋವನೇ, ದುಷ್ಟರಿಂದ ನನ್ನನ್ನು ರಕ್ಷಿಸು. ಕ್ರೂರಿಗಳಿಂದ ನನ್ನನ್ನು ಕಾಪಾಡು. ಅವರು ನನ್ನನ್ನು ಹಿಂದಟ್ಟಿ ನನಗೆ ಕೇಡುಮಾಡಬೇಕೆಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು