Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:12 - ಪರಿಶುದ್ದ ಬೈಬಲ್‌

12 ಆತನು ಅವರ ದೇಶವನ್ನು ತನ್ನ ಜನರಾದ ಇಸ್ರೇಲರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರ ದೇಶವನ್ನು ಇಸ್ರಾಯೇಲರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕೊಟ್ಟನು ಅವರ ನಾಡನು ಇಸ್ರಯೇಲರಿಗೆ I ಅದು ಸ್ವಂತ ಸೊತ್ತಾಯಿತು ಆತನಾ ಪ್ರಜೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರ ದೇಶವನ್ನು ಇಸ್ರಾಯೇಲ್ಯರಿಗೆ ಕೊಟ್ಟನು; ಆತನ ಪ್ರಜೆಗೆ ಅದು ಸ್ವಾಸ್ತ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇವರು ದೇಶವನ್ನು ಸೊತ್ತಾಗಿ ತಮ್ಮ ಪ್ರಜೆಯಾದ ಇಸ್ರಾಯೇಲಿಗೆ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:12
7 ತಿಳಿವುಗಳ ಹೋಲಿಕೆ  

ಆ ನಾಡಿನ ಜನಾಂಗಗಳನ್ನು ಆತನು ಬಲವಂತವಾಗಿ ಹೊರಗಟ್ಟಿದನು. ಆತನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಆ ನಾಡಿನಲ್ಲಿ ಪಾಲುಕೊಟ್ಟನು; ಆ ನಾಡಿನ ಮನೆಗಳಲ್ಲಿ ಅವರನ್ನು ನೆಲೆಗೊಳಿಸಿದನು.


ಇಸ್ರೇಲರು ಜೋರ್ಡನ್ ನದಿಯ ಪಶ್ಚಿಮ ಪ್ರದೇಶದಲ್ಲಿದ್ದ ಅರಸರನ್ನು ಸಹ ಸೋಲಿಸಿದರು. ಈ ಪ್ರದೇಶದಲ್ಲಿ ಯೆಹೋಶುವನು ಜನರ ಮುಂದಾಳಾದನು. ಯೆಹೋಶುವನು ಈ ಪ್ರದೇಶವನ್ನು ಇಸ್ರೇಲಿನ ಹನ್ನೆರಡು ಕುಲಗಳಿಗೆ ಹಂಚಿದನು. ದೇವರು ಅವರಿಗೆ ಕೊಡುವುದಾಗಿ ವಾಗ್ದಾನ ಮಾಡಿದ್ದ ಪ್ರದೇಶವೇ ಅದಾಗಿತ್ತು. ಈ ಪ್ರದೇಶವು ಲೆಬನೋನ್ ಕಣಿವೆಯ ಬಾಲ್ಗಾದ್ ಮತ್ತು ಸೇಯೀರ್ ಹತ್ತಿರವಿದ್ದ ಹಾಲಾಕ್ ಬೆಟ್ಟದ ನಡುವೆ ಇತ್ತು.


ಬಹಳ ಹಿಂದೆಯೇ ಯೆಹೋವನು ಮೋಶೆಗೆ ಹೇಳಿದ ಪ್ರಕಾರ ಯೆಹೋಶುವನು ಇಸ್ರೇಲಿನ ಪ್ರದೇಶವನ್ನೆಲ್ಲ ಸ್ವಾಧೀನಪಡಿಸಿಕೊಂಡನು. ಯೆಹೋವನು ತಾನು ವಾಗ್ದಾನ ಮಾಡಿದಂತೆ ಆ ಪ್ರದೇಶವನ್ನು ಇಸ್ರೇಲರಿಗೆ ಕೊಟ್ಟುಬಿಟ್ಟನು. ಆಗ ಯೆಹೋಶುವನು ಆ ಪ್ರದೇಶವನ್ನು ಕುಲಗಳ ಪ್ರಕಾರ ಹಂಚಿಕೊಟ್ಟನು. ಆಗ ಯುದ್ಧವು ಮುಗಿಯಿತು, ಕೊನೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತು.


ನಾವು ಅವರ ದೇಶವನ್ನು ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧ ಕುಲದವರಿಗೆ ಹಂಚಿದೆವು.


ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಲಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಕುಲಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರೆಯಬೇಕು. ಒಂದೊಂದು ಕುಲಕ್ಕೆ ಯಾವ ಯಾವ ಸ್ಥಳವನ್ನು ಸೂಚಿಸುತ್ತದೋ ಆ ಸ್ಥಳದಲ್ಲಿಯೇ ಆ ಕುಲದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು