Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 135:2 - ಪರಿಶುದ್ದ ಬೈಬಲ್‌

2 ಯೆಹೋವನ ಆಲಯದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ! ದೇವಾಲಯದ ಅಂಗಳದಲ್ಲಿ ನಿಂತಿರುವವರೇ, ಆತನನ್ನು ಸ್ತುತಿಸಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನ ಮಂದಿರದಲ್ಲಿಯೂ, ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವವರೇ, ಆತನನ್ನು ಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕೀರ್ತಿಸಿರಿ ಪ್ರಭುವನು ಆತನ ಮಂದಿರದಲ್ಲಿರುವವರೇ I ನಮ್ಮ ದೇವಾಲಯದ ಪ್ರಾಕಾರದಲ್ಲಿಹ ಸೇವಕರೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನ ಮಂದಿರದಲ್ಲಿಯೂ ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆಮಾಡುವವರೇ, ಆತನನ್ನು ಕೀರ್ತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವ ಯೆಹೋವ ದೇವರ ಸೇವಕರೇ, ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 135:2
9 ತಿಳಿವುಗಳ ಹೋಲಿಕೆ  

ಜೆರುಸಲೇಮಿನ ದೇವಾಲಯದ ಅಂಗಳಗಳಲ್ಲಿ ಈ ಯಜ್ಞಗಳನ್ನು ಅರ್ಪಿಸುವೆನು. ಯೆಹೋವನಿಗೆ ಸ್ತೋತ್ರವಾಗಲಿ!


ತನ್ನ ಉಳಿದ ಜೀವಮಾನವೆಲ್ಲಾ ವಿಧವೆಯಾಗಿದ್ದ ಆಕೆಗೆ ಈಗ ಎಂಭತ್ತನಾಲ್ಕು ವರ್ಷ ವಯಸ್ಸಾಗಿತ್ತು. ಅನ್ನಳು ಯಾವಾಗಲೂ ದೇವಾಲಯದಲ್ಲಿಯೇ ಇದ್ದಳು. ಆಕೆ ಬೇರೆಲ್ಲಿಗೂ ಹೋಗುತ್ತಿರಲಿಲ್ಲ. ಆಕೆ ಉಪವಾಸ ಮಾಡುತ್ತಾ ಮತ್ತು ಹಗಲಿರುಳು ಪ್ರಾರ್ಥಿಸುತ್ತಾ ದೇವರನ್ನು ಆರಾಧಿಸುತ್ತಿದ್ದಳು.


ಯೆಹೋವನ ಹೆಸರನ್ನು ಸ್ತುತಿಸಿರಿ. ನಿಮ್ಮ ಕಾಣಿಕೆಗಳನ್ನು ತೆಗೆದುಕೊಂಡು ದೇವಾಲಯಕ್ಕೆ ಹೋಗಿರಿ.


ಆ ಬಳಿಕ, ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ ಮತ್ತು ಪೆತಹ್ಯ ಎಂಬವರು, “ಎದ್ದುನಿಂತುಕೊಂಡು ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಿದರು. “ದೇವರು ಯಾವಾಗಲೂ ಇದ್ದಾತನಾಗಿದ್ದಾನೆ ಮತ್ತು ಯಾವಾಗಲೂ ಇರುವಾತನಾಗಿದ್ದಾನೆ. ನಿನ್ನ ಮಹಿಮಾಪೂರ್ಣವಾದ ಹೆಸರನ್ನು ಜನರು ಕೊಂಡಾಡಲಿ; ನಿನ್ನ ಹೆಸರು ಎಲ್ಲಾ ಸ್ತುತಿಕೀರ್ತನೆಗಳಿಗೆ ಮಿಗಿಲಾಗಿ ಎತ್ತಲ್ಪಡಲಿ.


ಪ್ರತಿದಿನ ಮುಂಜಾನೆ ಮತ್ತು ಸಾಯಂಕಾಲ ದೇವಾಲಯದೊಳಗೆ ಸ್ತುತಿಗೀತೆಗಳನ್ನು ಹಾಡಿ ದೇವರನ್ನು ಮಹಿಮೆಪಡಿಸುತ್ತಿದ್ದರು.


ಪವಿತ್ರಸ್ಥಳದಲ್ಲಿ ಲೇವಿಯರೊಂದಿಗೆ ನಿಲ್ಲಿರಿ ಮತ್ತು ಬೇರೆ ಕುಲಗಳ ಜನರಿಗೂ ಸಹಾಯ ಮಾಡುವುದಕ್ಕಾಗಿ ಹೀಗೆ ಮಾಡಿರಿ.


ಯೆಹೋವನ ಸೇವಕರೆಲ್ಲರೇ, ಆತನನ್ನು ಕೊಂಡಾಡಿರಿ. ರಾತ್ರಿಯೆಲ್ಲಾ ದೇವಾಲಯದಲ್ಲಿ ಸೇವೆ ಮಾಡಿದವರೇ, ಆತನಿಗೆ ಸ್ತೋತ್ರಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು