Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 136:23 - ಪರಿಶುದ್ದ ಬೈಬಲ್‌

23 ನಾವು ಸೋತುಹೋಗಿದ್ದಾಗ ಆತನು ನಮ್ಮನ್ನು ಜ್ಞಾಪಿಸಿಕೊಂಡನು. ಆತನ ಪ್ರೀತಿ ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಾವು ದೀನಾವಸ್ಥೆಯಲ್ಲಿ ಇದ್ದಾಗ ನಮ್ಮನ್ನು ನೆನಪುಮಾಡಿಕೊಂಡನು, ಆತನ ಪ್ರೀತಿಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಹೀನ ಸ್ಥಿತಿಯಲ್ಲಿದ್ದ ನಮ್ಮನ್ನು ಜ್ಞಾಪಿಸಿಕೊಂಡಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಾವು ದೀನಾವಸ್ಥೆಯಲ್ಲಿದ್ದಾಗ ನಮ್ಮನ್ನು ನೆನಪುಮಾಡಿಕೊಂಡನು; ಆತನ ಕೃಪೆಯು ಶಾಶ್ವತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾವು ಹೀನ ಸ್ಥಿತಿಯಲ್ಲಿದ್ದಾಗ ನಮ್ಮನ್ನು ನೆನಪಿಸಿಕೊಂಡರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 136:23
13 ತಿಳಿವುಗಳ ಹೋಲಿಕೆ  

ಜನರಿಗೆ ಅನೇಕ ತೊಂದರೆಗಳು ಪ್ರಾಪ್ತವಾಗಿದ್ದವು. ಆದರೆ ಯೆಹೋವನು ಅವರಿಗೆ ವಿರುದ್ಧನಾಗಿರಲಿಲ್ಲ. ಆತನು ಅವರನ್ನು ಪ್ರೀತಿಸಿ ಅವರಿಗಾಗಿ ಚಿಂತಿಸಿದನು; ತನ್ನ ವಿಶೇಷ ದೂತನನ್ನು ಕಳುಹಿಸಿ ಅವರನ್ನು ರಕ್ಷಿಸಿದನು. ಯೆಹೋವನು ಅವರನ್ನು ನಿತ್ಯಕಾಲಕ್ಕೂ ಸಲಹುವನು. ತನ್ನ ಜನರಿಗೆ ಯೆಹೋವನು ಸಲಹುವದನ್ನು ನಿಲ್ಲಿಸಲಿಲ್ಲ.


ದೇವರು ತನ್ನ ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದಾನೆ. ಇಂದಿನಿಂದ, ಎಲ್ಲಾ ಜನರು ನನ್ನನ್ನು ಧನ್ಯಳೆಂದು ಹೇಳುವರು.


ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ನೀನು ನನಗೆ ಬೇಕೇಬೇಕು. ನನ್ನನ್ನು ಬೆನ್ನಟ್ಟುತ್ತಿರುವ ಜನರಿಂದ ನನ್ನನ್ನು ರಕ್ಷಿಸು. ಅವರು ನನಗಿಂತ ಬಹು ಬಲಿಷ್ಠರಾಗಿದ್ದಾರೆ.


ಯೆಹೋವನು ಅಸಹಾಯಕರನ್ನು ಕಾಪಾಡುವನು. ನಾನು ಅಸಹಾಯಕನಾಗಿದ್ದಾಗ ಯೆಹೋವನು ನನ್ನನ್ನು ರಕ್ಷಿಸಿದನು.


ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು.


“ಯೆಹೋವನು ತನ್ನ ಜನರಿಗೆ ನ್ಯಾಯತೀರಿಸುವನು. ಅವರು ಆತನ ಸೇವಕರಾಗಿದ್ದಾರೆ. ಆತನು ಅವರಿಗೆ ಕರುಣೆ ತೋರುವನು. ಅವರ ಬಲವು ಕುಂದುವಂತೆ ಮಾಡುವನು. ಗುಲಾಮರಾಗಿರಲಿ ಸ್ವತಂತ್ರರಾಗಿರಲಿ ಅವರನ್ನು ಆತನು ನಿಸ್ಸಹಾಯಕರನ್ನಾಗಿ ಮಾಡುವನು.


ದೇವರು ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗಿಳಿಸಿ ದೀನರನ್ನು ಉನ್ನತಿಗೇರಿಸುತ್ತಾನೆ.


ಆತನು ನಿರ್ಗತಿಕರ ಪ್ರಾರ್ಥನೆಗಳಿಗೆ ಉತ್ತರ ಕೊಡುವನು. ಅವರ ಮೊರೆಗಳನ್ನು ಆತನು ತಿರಸ್ಕರಿಸುವುದಿಲ್ಲ.


ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು