Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 137:3 - ಪರಿಶುದ್ದ ಬೈಬಲ್‌

3 ನಮ್ಮನ್ನು ಸೆರೆಹಿಡಿದಿದ್ದ ಜನರು ಬಾಬಿಲೋನಿನಲ್ಲಿ ನಮಗೆ ಚೀಯೋನಿನ ಕುರಿತು ಹರ್ಷಗೀತೆಗಳನ್ನು ಹಾಡಲು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ, “ಚೀಯೋನಿನ ಗೀತೆಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸೆರೆಹಿಡಿದು ಬಂಧಿಸಿದಾ ಜನ ಈ ಪರಿ ಪೀಡಿಸಿದರೆಮ್ಮನು: I “ಹಾಡಿ, ನಮ್ಮ ವಿನೋದಕ್ಕಾಗಿ ಸಿಯೋನಿನ ಗೀತೆಗಳಲೊಂದನು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮನ್ನು ಸೆರೆಹಿಡಿದು ಪೀಡಿಸುತ್ತಿದ್ದವರು ನಮಗೆ - ನೀವು ಚೀಯೋನಿನ ಗೀತಗಳಲ್ಲಿ ಒಂದನ್ನು ನಮ್ಮ ವಿನೋದಕ್ಕಾಗಿ ಹಾಡಿರಿ ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಏಕೆಂದರೆ ಅಲ್ಲಿ ನಮ್ಮನ್ನು ಸೆರೆಹಿಡಿದು ಬಂಧಿಸಿದವರು, ನಮಗೆ ಹಾಡನ್ನು ಹಾಡಲು ಹೇಳಿದ್ದರು; ನಮ್ಮನ್ನು ಪೀಡಿಸುವವರು ವಿನೋದಕ್ಕಾಗಿ ಹಾಡನ್ನು ಕೇಳಲು ಬಯಸಿದ್ದರು; “ಚೀಯೋನಿನ ಹಾಡುಗಳಲ್ಲಿ ಒಂದು ನಮಗೆ ಹಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 137:3
18 ತಿಳಿವುಗಳ ಹೋಲಿಕೆ  

ಆದರೆ ಯೇಸು ಅವರಿಗೆ, “ನೀವು ಇಲ್ಲಿ ನೋಡುವಂಥದ್ದೆಲ್ಲವೂ ನಾಶವಾಗುವ ಕಾಲ ಬರುವುದು. ಈ ಕಟ್ಟಡಗಳ ಪ್ರತಿಯೊಂದು ಕಲ್ಲನ್ನು ನೆಲಕ್ಕೆ ಕೆಡವಲಾಗುವುದು. ಇಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲುವುದಿಲ್ಲ!” ಎಂದು ಹೇಳಿದನು.


ನಾಯಕರೇ, ನಿಮ್ಮಿಂದಾಗಿ ಚೀಯೋನ್ ನಾಶವಾಗುವದು. ನೇಗಿಲಿನಿಂದ ಉತ್ತಲ್ಪಟ್ಟ ಹೊಲದಂತೆ ಅದು ಇರುವದು. ಜೆರುಸಲೇಮ್ ಕಲ್ಲಿನ ರಾಶಿಯಾಗುವದು. ಆಲಯದ ಗುಡ್ಡವು ಬರಿದಾದ ಬೆಟ್ಟವಾಗುವುದು. ಅದರ ಮೇಲೆ ಪೊದೆಗಳು ಹುಲುಸಾಗಿ ಬೆಳೆದುಕೊಳ್ಳುವವು.


ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’


“ನಾನು (ಯೆಹೋವನು) ಜೆರುಸಲೇಮ್ ನಗರವನ್ನು ಕಸದ ರಾಶಿಯನ್ನಾಗಿ ಮಾಡುವೆನು. ಅದು ನರಿಗಳ ನಿವಾಸವಾಗುವದು. ನಾನು ಯೆಹೂದ ಪ್ರಾಂತದ ನಗರಗಳನ್ನು ನಾಶಮಾಡುವೆನು. ಅಲ್ಲಿ ಒಬ್ಬರೂ ವಾಸಮಾಡಲಾರರು.”


ಯೆಹೋವನು ತನ್ನ ಜನರನ್ನು ಸ್ವತಂತ್ರರನ್ನಾಗಿ ಮಾಡುತ್ತಾನೆ. ಆ ಜನರು ಆತನ ಬಳಿಗೆ ಹಿಂದಿರುಗಿ ಬರುವರು. ಚೀಯೋನಿಗೆ ಜನರು ಬರುವಾಗ ಅವರು ಸಂತೋಷಭರಿತರಾಗುವರು. ಅವರು ನಿತ್ಯವೂ ಸಂತೋಷವಾಗಿರುವರು. ತಲೆಯ ಮೇಲಿನ ಕಿರೀಟದಂತೆ ಅವರ ಸಂತೋಷವಿರುವದು. ಅವರಲ್ಲಿ ಹರ್ಷವೂ ಸಂತಸವೂ ಸಂಪೂರ್ಣವಾಗಿ ತುಂಬಿರುವವು. ದುಃಖವೂ ಚಿಂತೆಯೂ ಬಹು ದೂರವಾಗಿರುವವು.


ಸುತ್ತಲಿನ ಜನಾಂಗಗಳಿಗೆ ನಮ್ಮನ್ನು ಯುದ್ಧಕ್ಕೆ ಕಾರಣವನ್ನಾಗಿ ಮಾಡಿರುವೆ. ಶತ್ರುಗಳು ನಮ್ಮನ್ನು ನೋಡಿ ನಗುವರು.


ದೇವರೇ, ಅನ್ಯ ಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲಸು ಮಾಡಿದರು; ಜೆರುಸಲೇಮನ್ನು ನಾಶ ಮಾಡಿದರು.


ದೇವರೇ, ಚೀಯೋನಿನಲ್ಲಿ ನಾವು ನಿನ್ನನ್ನು ಸ್ತುತಿಸುವೆವು. ನಾವು ಮಾಡಿದ ಹರಕೆಗಳನ್ನು ನಿನಗೆ ಸಲ್ಲಿಸುವೆವು.


ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು.


ಸಮಾರ್ಯದಲ್ಲಿರುವ ಅವನ ಸ್ನೇಹಿತರೊಡನೆ ಮತ್ತು ಸಮಾರ್ಯದ ಸೈನ್ಯದವರೊಡನೆ ಮಾತನಾಡಿ, “ಈ ಬಲಹೀನ ಯೆಹೂದ್ಯರು ಮಾಡುತ್ತಿರುವುದೇನು? ನಾವು ಇವರನ್ನು ಹೀಗೇಯೇ ಬಿಟ್ಟುಬಿಡುತ್ತೇವೆಂದು ತಿಳಿದುಕೊಂಡಿದ್ದಾರೆಯೇ? ತಾವು ಯಜ್ಞಗಳನ್ನು ಅರ್ಪಿಸುವುದಾಗಿ ತಿಳಿದುಕೊಂಡಿರುವರೇ? ಒಂದೇ ದಿನದಲ್ಲಿ ಕಟ್ಟಿಮುಗಿಸುವುದಾಗಿ ಅವರು ತಿಳಿದುಕೊಂಡಿರಬಹುದು. ಆ ತಿಪ್ಪೆಗುಂಡಿಯೊಳಗಿನ ಕಲ್ಲುಗಳ ರಾಶಿಗೆ ಜೀವಕೊಡಲು ಅವರಿಗೆ ಸಾಧ್ಯವಿಲ್ಲ. ಅವು ಕೇವಲ ಬೂದಿ ಮತ್ತು ಹೊಲಸುಗಳ ಗುಡ್ಡೆಗಳಾಗಿವೆ!” ಎಂದು ಹೇಳಿದನು.


ಈ ವ್ಯವಸ್ಥೆಯನ್ನು ದಾವೀದನು ಪ್ರಥಮ ಬಾರಿಗೆ ಆಸಾಫನಿಗೂ ಅವನ ಸೋದರರಿಗೂ ಯೆಹೋವನ ಸ್ತೋತ್ರವನ್ನು ಹಾಡುವ ಕೆಲಸಕ್ಕಾಗಿ ನೇಮಿಸಿದನು.


ಯೆಹೋವನು ತನ್ನ ಜನರನ್ನು ರಕ್ಷಿಸುತ್ತಾನೆ. ಅವರು ಚೀಯೋನಿಗೆ ಸಂತೋಷದಿಂದ ಮರಳಿ ಬರುತ್ತಾರೆ. ಅವರು ಬಹಳ ಸಂತೋಷಪಡುವರು. ಅವರ ಹರ್ಷವು ಅವರ ತಲೆಯ ಮೇಲೆ ಕಿರೀಟದಂತೆ ನಿತ್ಯಕಾಲಕ್ಕೂ ಇರುವುದು. ಅವರು ಹರ್ಷದಿಂದ ಹಾಡುವರು. ಅವರ ದುಃಖವೆಲ್ಲಾ ಬಹುದೂರವಾಗುವುದು.


ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತ ಯಾಜಕರು ಉತ್ತಮವಾದ ನಾರಿನ ನಿಲುವಂಗಿಗಳನ್ನು ಧರಿಸಿದ್ದರು. ಕೆನನ್ಯನೂ ಅವನ ಜೊತೆಯಲ್ಲಿದ್ದ ಗಾಯಕರೆಲ್ಲರೂ ಉತ್ತಮವಾದ ನಾರಿನ ಬಟ್ಟೆಗಳನ್ನು ಧರಿಸಿದ್ದರು. ದಾವೀದನೂ ಉತ್ತಮವಾದ ನಾರಿನ ಬಟ್ಟೆ ಧರಿಸಿ, ಉತ್ತಮವಾದ ನಾರಿನಿಂದ ಮಾಡಿದ ಏಫೋದನ್ನು ಅದರ ಮೇಲೆ ಧರಿಸಿಕೊಂಡಿದ್ದನು.


ವ್ಯಸನದಿಂದಿರುವವನಿಗೆ ಸಂತಸದ ಗೀತೆಗಳನ್ನು ಹಾಡಿದರೆ ಚಳಿಯಲ್ಲಿರುವವನ ಬಟ್ಟೆಯನ್ನು ತೆಗೆದುಹಾಕಿದಂತೆಯೂ ಗಾಯದ ಮೇಲೆ ಹುಳಿರಸವನ್ನು ಸುರಿದಂತೆಯೂ ಇರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು