ಕೀರ್ತನೆಗಳು 138:2 - ಪರಿಶುದ್ದ ಬೈಬಲ್2 ನಾನು ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡಬೀಳುವೆನು. ನಾನು ನಿನ್ನ ಹೆಸರನ್ನೂ ನಿನ್ನ ಪ್ರೀತಿಯನ್ನೂ ನಿನ್ನ ನಂಬಿಗಸ್ತಿಕೆಯನ್ನೂ ಕೊಂಡಾಡುವೆನು. ನೀನು ನಿನ್ನ ವಾಕ್ಯವನ್ನು ನೆರವೇರಿಸಿ ನಿನ್ನ ನಾಮಮಹತ್ವವನ್ನು ಹೆಚ್ಚಿಸಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ನಿನ್ನ ನಾಮದ ಮತ್ತು ಆಜ್ಞೆಯ ಘನಪಡಿಸಿ ತೋರಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಪರಿಶುದ್ಧಾಲಯದ ಕಡೆಗೆ ಅಡ್ಡ ಬೀಳುತ್ತೇನೆ; ನಿನ್ನ ಕೃಪೆ, ಸತ್ಯತೆ ಇವುಗಳಿಗೋಸ್ಕರ ನಿನ್ನ ನಾಮವನ್ನು ಕೊಂಡಾಡುತ್ತೇನೆ. ವಾಗ್ದಾನವನ್ನು ವಿಶೇಷರೀತಿಯಿಂದ ನೆರವೇರಿಸಿ ನಿನ್ನ ನಾಮಮಹತ್ತನ್ನು ಹೆಚ್ಚಿಸಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು, ನಿಮ್ಮ ಒಡಂಬಡಿಕೆಯ ಪ್ರೀತಿ, ನಿಮ್ಮ ಸತ್ಯತೆಯ ನಿಮಿತ್ತ ನಿಮ್ಮ ಹೆಸರನ್ನು ಕೊಂಡಾಡುವೆನು; ನೀವು ನಿಮ್ಮ ವಾಕ್ಯವನ್ನು ನಿಮ್ಮ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀರಿ. ಅಧ್ಯಾಯವನ್ನು ನೋಡಿ |
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.