Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:11 - ಪರಿಶುದ್ದ ಬೈಬಲ್‌

11 ನಾನು ನನ್ನನ್ನು ನಿನ್ನಿಂದ ಮರೆಮಾಡಿಕೊಳ್ಳಲು ಪ್ರಯತ್ನಿಸಿ, “ಹಗಲು ಹೋಗಿ ಕತ್ತಲಾಯಿತು, ಖಂಡಿತವಾಗಿ ಕಾರ್ಗತ್ತಲೆಯು ನನ್ನನ್ನು ಮರೆಮಾಡುವುದು” ಎಂದೆನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಾರ್ಗತ್ತಲೆಯು ನನ್ನನ್ನು ಕವಿಯುವುದು, “ಹಗಲು ಹೋಗಿ ನನ್ನ ಸುತ್ತಲು ಇರುಳಾಗುವುದು” ಎಂದು ಹೇಳಿಕೊಂಡರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಕಾರ್ಗತ್ತಲೆನ್ನ ಕವಿಯಲಿ” ಎಂದರೂ I “ಸುತ್ತಲ ಬೆಳಕು ಇರುಳಾಗಲಿ” ಎಂದರೂ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಕಾರ್ಗತ್ತಲೆಯು ನನ್ನನ್ನು ಕವಿಯುವದು, ಹಗಲು ಹೋಗಿ ನನ್ನ ಸುತ್ತಲು ಇರುಳಾಗುವದು ಎಂದು ಹೇಳಿಕೊಂಡರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಕತ್ತಲೆಯು ನನ್ನನ್ನು ಕವಿದುಕೊಳ್ಳಲಿ ಮತ್ತು ಬೆಳಕು ನನ್ನ ಸುತ್ತಲೂ ಇರುಳಾಗಲಿ,” ಎಂದು ನಾನು ಹೇಳಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:11
8 ತಿಳಿವುಗಳ ಹೋಲಿಕೆ  

ಕಾರ್ಗತ್ತಲೆಯೊಳಗಿರುವ ನಿಗೂಢ ರಹಸ್ಯಗಳನ್ನು ಆತನು ಪ್ರಕಟಿಸುವನು; ಮರಣಾಂಧಕಾರದ ಸ್ಥಳಗಳನ್ನು ಬೆಳಕಿನಿಂದ ಪ್ರಕಾಶಗೊಳಿಸುವನು.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ. ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ.


ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.


ಅಂದು ರಾತ್ರಿ ನಾನು ಗಾಢನಿದ್ರೆಯಲ್ಲಿರುವಾಗ ಈಕೆಯು ನನ್ನ ಹಾಸಿಗೆಯಿಂದ ನನ್ನ ಮಗುವನ್ನು ತೆಗೆದುಕೊಂಡು ತನ್ನ ಹಾಸಿಗೆಗೆ ಹೋದಳು; ತನ್ನ ಸತ್ತ ಮಗುವನ್ನು ನನ್ನ ಹಾಸಿಗೆಯಲ್ಲಿಟ್ಟಳು.


ದುಷ್ಟನನ್ನು ದೇವರಿಂದ ಮರೆಮಾಡಬಲ್ಲ ಕತ್ತಲೆಯ ಸ್ಥಳವಾಗಲಿ ಕಾರ್ಗತ್ತಲೆಯ ಸ್ಥಳವಾಗಲಿ ಇಲ್ಲವೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು