ಕೀರ್ತನೆಗಳು 139:18 - ಪರಿಶುದ್ದ ಬೈಬಲ್18 ಅವುಗಳನ್ನು ಎಣಿಸುವುದಾದರೆ, ಸಮುದ್ರದ ಮರಳಿಗಿಂತಲೂ ಹೆಚ್ಚಾಗಿವೆ. ನಾನು ಎಚ್ಚರಗೊಂಡಾಗ ಮುಂಚಿನಂತೆ ನಿನ್ನೊಂದಿಗೇ ಇರುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವುಗಳನ್ನು ಲೆಕ್ಕಿಸುವುದಾದರೆ ಸಮುದ್ರದ ಮರಳಿಗಿಂತ ಹೆಚ್ಚಾಗಿವೆ, ನಾನು ಎಚ್ಚರವಾಗಲು ಮೊದಲಿನಂತೆಯೇ ನಿನ್ನ ಬಳಿಯಲ್ಲಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವುಗಳನ್ನು ಲೆಕ್ಕಿಸುವದಾದರೆ [ಸಮುದ್ರದ] ಮರಳಿಗಿಂತ ಹೆಚ್ಚಾಗಿವೆ. ನಾನು ಎಚ್ಚರವಾಗಲು ಮುಂಚಿನಂತೆಯೇ ನಿನ್ನ ಬಳಿಯಲ್ಲಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ಅವುಗಳನ್ನು ಎಣಿಸಿದರೆ, ಅವು ಮರಳಿಗಿಂತಲೂ ಹೆಚ್ಚಾಗಿವೆ! ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು. ಅಧ್ಯಾಯವನ್ನು ನೋಡಿ |
ಆದರೆ ಯೆಹೋವನು ಹೇಳುವುದೇನೆಂದರೆ, “ನಿನ್ನ ಜನರು ಸತ್ತಿದ್ದಾರೆ. ಆದರೆ ಅವರು ಮತ್ತೆ ಬದುಕುವರು. ನನ್ನ ಜನರ ದೇಹಗಳು ಸತ್ತವರೊಳಗಿಂದ ಏಳುವವು. ಭೂಮಿಯ ಮೇಲೆ ಸತ್ತಿರುವ ಜನರೇ, ಎದ್ದುನಿಂತು ಸಂತೋಷಿಸಿರಿ. ನಿಮ್ಮನ್ನು ಆವರಿಸಿದ ಮಂಜು ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”