ಕೀರ್ತನೆಗಳು 139:19 - ಪರಿಶುದ್ದ ಬೈಬಲ್19 ಯೆಹೋವನೇ, ದುಷ್ಟರನ್ನು ಸಂಹರಿಸು. ಆ ಕೊಲೆಗಾರರನ್ನು ನನ್ನಿಂದ ದೂರಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ, ಎಷ್ಟೋ ಒಳ್ಳೆಯದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದೇವಾ, ದುಷ್ಟರನು ಸಂಹರಿಸಿಬಿಟ್ಟರೆ ಎಷ್ಟೋ ಉಚಿತ I ಕೊಲೆಪಾತಕರು ನನ್ನಿಂದ ತೊಲಗಿಹೋದರೆ ಎಷ್ಟೋ ಹಿತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನೇ, ನೀನು ದುಷ್ಟರನ್ನು ಸಂಹರಿಸಿಬಿಟ್ಟರೆ ಎಷ್ಟೋ ಒಳ್ಳೇದು. ಕೊಲೆಪಾತಕರೇ, ನನ್ನಿಂದ ತೊಲಗಿಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದೇವರೇ, ಒಂದು ವೇಳೆ ನೀವು ದುಷ್ಟರೆಲ್ಲರನ್ನು ದಂಡಿಸಿಬಿಟ್ಟರೆ ಎಷ್ಟೋ ಒಳ್ಳೆಯದಾಗಿರುವುದು! ಕೊಲೆಪಾತಕರೇ, ನೀವು ನನ್ನಿಂದ ತೊಲಗಿ ಹೋದರೆ ಎಷ್ಟೋ ಹಿತ! ಅಧ್ಯಾಯವನ್ನು ನೋಡಿ |
ಆತನು ಬಡಜನರಿಗೆ ಅನ್ಯಾಯಮಾಡದೆ ನ್ಯಾಯವಾದ ತೀರ್ಪನ್ನು ಕೊಡುವನು, ದೇಶದ ಬಡಜನರಿಗೋಸ್ಕರವಾಗಿ ಮಾಡುವ ಆಲೋಚನೆಯನ್ನು ಪಕ್ಷಪಾತವಿಲ್ಲದೆ ಮಾಡುವನು. ಆತನು ಜನರಿಗೆ ಶಿಕ್ಷೆ ಕೊಡಬೇಕೆಂದು ತೀರ್ಮಾನಿಸಿದರೆ ಅದನ್ನು ಆಜ್ಞಾಪಿಸಿ ಶಿಕ್ಷಿಸುವನು. ದುಷ್ಟರಿಗೆ ಮರಣದಂಡನೆಯಾಗಬೇಕೆಂದು ಆತನು ತೀರ್ಮಾನಿಸಿದರೆ, ಆತನು ಆಜ್ಞಾಪಿಸಿ ಕೊಲ್ಲಿಸುವನು. ನ್ಯಾಯವೇ ಆತನಿಗೆ ನಡುಕಟ್ಟು, ಒಳ್ಳೆಯತನವೇ ಆತನಿಗೆ ಸೊಂಟಪಟ್ಟಿಯಾಗಿವೆ.