Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 139:2 - ಪರಿಶುದ್ದ ಬೈಬಲ್‌

2 ನಾನು ಕುಳಿತುಕೊಳ್ಳುವುದೂ ಎದ್ದೇಳುವುದೂ ನಿನಗೆ ತಿಳಿದಿದೆ. ನೀನು ಬಹುದೂರದಿಂದಲೇ ನನ್ನ ಆಲೋಚನೆಗಳನ್ನು ತಿಳಿದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ಕುಳಿತುಕೊಳ್ಳುವುದು, ಏಳುವುದು ನಿನಗೆ ಗೊತ್ತಿದೆ, ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಕೂತುಕೊಳ್ಳುವದೂ ಏಳುವದೂ ನಿನಗೆ ಗೊತ್ತದೆ; ದೂರದಿಂದಲೇ ನನ್ನ ಆಲೋಚನೆಗಳನ್ನು ಬಲ್ಲವನಾಗಿರುತ್ತೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 139:2
17 ತಿಳಿವುಗಳ ಹೋಲಿಕೆ  

ಅವರು ಹೀಗೆ ಆಲೋಚಿಸುತ್ತಿರುವುದು ಯೇಸುವಿಗೆ ತಿಳಿದಿತ್ತು. ಆತನು ಅವರಿಗೆ, “ನೀವು ಏಕೆ ದುರಾಲೋಚನೆ ಮಾಡುತ್ತಿದ್ದೀರಿ?


ನೀನು ಮೇಲೇಳುವುದೂ ಕುಳಿತುಕೊಳ್ಳುವುದೂ ನನಗೆ ಗೊತ್ತಿದೆ. ನೀನು ಒಳಗೆ ಬರುವುದೂ ಹೊರಗೆ ಹೋಗುವುದೂ ನನಗೆ ತಿಳಿದಿದೆ. ನೀನು ನನ್ನ ವಿರುದ್ಧ ಯಾವಾಗ ದಂಗೆಯೇಳುವೆ ಎಂಬುದೂ ನನಗೆ ತಿಳಿದಿದೆ.


ಅವರ ಆಲೋಚನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಯೇಸು ಒಂದು ಚಿಕ್ಕ ಮಗುವನ್ನು ಕರೆದು ತನ್ನ ಬಳಿಯಲ್ಲಿ ನಿಲ್ಲಿಸಿದನು.


ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ. ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ.


ನಿನ್ನ ಸೈನ್ಯದ ಬಗ್ಗೆಯೂ ನಿನ್ನ ಯುದ್ಧಗಳ ಬಗ್ಗೆಯೂ ನನಗೆ ಗೊತ್ತಿದೆ. ನೀನು ವಿಶ್ರಾಂತಿ ತೆಗೆದುಕೊಂಡದ್ದೂ ನನಗೆ ಗೊತ್ತಿದೆ. ನೀನು ಯುದ್ಧಕ್ಕೆ ಹೋದದ್ದೂ ನನಗೆ ಗೊತ್ತಿದೆ. ನೀನು ಯುದ್ಧದಿಂದ ಹಿಂತಿರುಗಿ ಮನೆಗೆ ಬಂದದ್ದೂ ನನಗೆ ಗೊತ್ತಿದೆ. ನೀನು ನನ್ನ ಮೇಲೆ ಕೋಪಗೊಂಡಿರುವುದೂ ನನಗೆ ಗೊತ್ತಿದೆ.


ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ.


ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”


ನನಗಾಗಿರುವ ದುಃಖವು ನಿನಗೆ ಗೊತ್ತಿದೆ. ನಾನು ಎಷ್ಚು ಅತ್ತಿರುವೆನೆಂದು ನಿನಗೆ ಗೊತ್ತಿದೆ. ನನ್ನ ಕಣ್ಣೀರಿಗೆ ನೀನು ಖಂಡಿತವಾಗಿ ಲೆಕ್ಕವಿಟ್ಟಿರುವೆ.


ಅರಾಮ್ಯರ ರಾಜನ ಅಧಿಕಾರಿಗಳಲ್ಲೊಬ್ಬನು, “ನನ್ನ ಒಡೆಯನೇ, ರಾಜನೇ, ನಮ್ಮಲ್ಲಿ ಯಾರೊಬ್ಬರೂ ಗೂಢಚಾರರಲ್ಲ. ಇಸ್ರೇಲಿನ ಪ್ರವಾದಿಯಾದ ಎಲೀಷನು ಅನೇಕ ರಹಸ್ಯ ಸಂಗತಿಗಳನ್ನು ಅಂದರೆ ನೀವು ನಿಮ್ಮ ಮಲಗುವ ಕೊಠಡಿಯಲ್ಲಿ ಮಾತನಾಡುವುದನ್ನೂ ಸಹ ಇಸ್ರೇಲಿನ ರಾಜನಿಗೆ ತಿಳಿಸಬಲ್ಲವನಾಗಿದ್ದಾನೆ!” ಎಂದು ಹೇಳಿದನು.


ಯೆಹೋವನು ತನ್ನೊಡನೆ ಮಾತಾಡಿದ್ದರಿಂದ ಹಾಗರಳು, “ಈ ಸ್ಥಳದಲ್ಲಿಯೂ ದೇವರು ನನ್ನನ್ನು ನೋಡಿ ನನಗಾಗಿ ಚಿಂತಿಸುತ್ತಾನೆ ಎಂದುಕೊಂಡು ಆತನಿಗೆ ‘ನನ್ನನ್ನು ನೋಡುವ ದೇವರು’” ಎಂದು ಹೆಸರಿಟ್ಟಳು.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ಇದು ನನ್ನ ಒಡೆಯನಾದ ಯೆಹೋವನ ನುಡಿ: “ಆಗ ನಾನು ನಿನ್ನ ವಿಷಯದಲ್ಲಿ ಹೇಳಿದ್ದು ಜನರು ಜ್ಞಾಪಕಕ್ಕೆ ಬರುವದು. ನಾನು ಇದನ್ನು ನನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿರುತ್ತೇನೆ ಎಂದು ಅರಿಯುವರು. ಹಿಂದಿನ ಕಾಲದಲ್ಲಿ ಇಸ್ರೇಲ್ ಪ್ರವಾದಿಗಳು ನನ್ನ ಪರವಾಗಿ ಮಾತನಾಡಿ ನೀವು ಅವರ ವಿರುದ್ಧವಾಗಿ ಯುದ್ಧಕ್ಕೆ ಬರುವಿರೆಂದು ಹೇಳಿರುತ್ತೇನೆ ಎಂಬುದನ್ನು ತಮ್ಮ ಜ್ಞಾಪಕಕ್ಕೆ ತರುವರು.”


ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”


ನಿನ್ನ ನಿಮಿತ್ತ ನಾವು ದಿನವೆಲ್ಲಾ ಕೊಲೆಗೆ ಗುರಿಯಾಗಿದ್ದೇವೆ; ಕೊಯ್ಯಲು ಕೊಂಡೊಯ್ಯುವ ಕುರಿಗಳಂತಾಗಿದ್ದೇವೆ.


ಆಗ ಯೆಹೋವನ ಆತ್ಮನು ನನ್ನ ಮೇಲೆ ಬಂದನು. ಆತನು ಹೇಳಿದ್ದೇನೆಂದರೆ, “ಯೆಹೋವನು ಹೀಗೆ ಹೇಳುತ್ತಾನೆಂದು ಆ ಜನರಿಗೆ ತಿಳಿಸು: ಇಸ್ರೇಲ್ ಮನೆತನವೇ, ನೀನು ದೊಡ್ಡದೊಡ್ಡ ವಿಷಯಗಳನ್ನು ಆಲೋಚಿಸುತ್ತೀ. ನೀನು ಏನೂ ಯೋಚಿಸುತ್ತೀ ಎಂದು ನಾನು ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು